ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ: ನ. 1 ರಂದು ಅಟ್ಟಳಿಗೆ ಮುಹೂರ್ತ

ಕಾರ್ಕಳ: ಕಾರ್ಕಳದ ದಾನಶಾಲೆಯಲ್ಲಿ 2026 ರ ಫೆಬ್ರವರಿ 18 ರಿಂದ 28 ರವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಪ್ರಯುಕ್ತ ಅಟ್ಟಳಿಗೆ ಮುಹೂರ್ತ 01 ನವೆಂಬರ್ 2026 ರಂದು ಬೆಳಗ್ಗೆ 8:35 – 8:55 ರ ಶುಭ ಮುಹೂರ್ತದಲ್ಲಿ ನಡೆಯಲಿದೆ.

ಪರಮಪೂಜ್ಯ 108 ಆಚಾರ್ಯ ಮುನಿಶ್ರೀ ಪ್ರಸಂಗಸಾಗರ ಮಹಾರಾಜರ ಪಾವನ ಸಾನಿಧ್ಯದಲ್ಲಿ ಈ ಕಾರ್ಯಕ್ರಮ ನೆರವೇರಲಿದೆ.

ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ (ಶ್ರೀ ಜೈನ ಮಠ, ದಾನಶಾಲೆ, ಕಾರ್ಕಳ), ಪರಮಪೂಜ್ಯ ಅಕಳಂಕಕೇಸರಿ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, (ಶ್ರೀ ಜೈನ ಮಠ, ಸೋಂದಾ) ಇವರುಗಳ ದಿವ್ಯ ಉಪಸ್ಥಿತಿಯಲ್ಲಿ, ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, (ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅಧ್ಯಕ್ಷರು, ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ) ಇವರ ಮಾರ್ಗದರ್ಶನದಲ್ಲಿ ನಡೆಯಲಿದೆ.

ಸಹಕಾರರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್, (ಕಾರ್ಯಾಧ್ಯಕ್ಷರು, ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ (ರಿ.) ಹಾಗೂ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ., ಬೆಂಗಳೂರು) ಇವರ ನೇತೃತ್ವದಲ್ಲಿ ಈ ಸಮಾರಂಭ ನೆರವೇರಲಿದೆ.

ಅ. 31 ರ ಬೆಳಿಗ್ಗೆ 8:00 ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಸನ್ನಿಧಿಯಲ್ಲಿ ಭಕ್ತಾಮರ ಆರಾಧನೆ , ನ.1 ರಂದು ಬೆಳಿಗ್ಗೆ 7:30 ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

















































































error: Content is protected !!
Scroll to Top