ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಡಿಸೆಂಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲಾಗಿದೆ.
ಬ್ಯಾಲೆಟ್ ಪೇಪರ್ ಎಲೆಕ್ಷನ್
ಈ ಬಾರಿಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಾಗಿ ಸಾಂಪ್ರದಾಯಿಕ ಮತಪೆಟ್ಟಿಗೆಗಳನ್ನು ಬಳಸಲು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಬ್ಯಾಲೆಟ್ ಪೇಪರ್ನಲ್ಲೇ ನಡೆಸಲು ಸರ್ಕಾರ ಮುಂದಾಗಿದ್ದು, ಇದಕ್ಕೆ ರಾಜ್ಯ ಜಾಗೃತ ಚುನಾವಣಾ ಆಯೋಗ ಕೂಡ ಹಸಿರು ನಿಶಾನೆ ನೀಡಿದೆ. ಇದರ ಬೆನ್ನಲ್ಲೇ ಇಡೀ ರಾಜ್ಯದ ಲೋಕಲ್ ಎಲೆಕ್ಷನ್ ಬ್ಯಾಲೆಟ್ನಲ್ಲೇ ನಡೆಯಲಿದೆ ಎಂದು ತಿಳಿದು ಬಂದಿದೆ.

ಡಿ. 14 ರ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಧಿಕೃತ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.. ಈ ಹಿನ್ನೆಲೆ ಬೆಳಗಾವಿಯ ಚಳಿಗಾಲದ ಅಧಿವೇಶನವನ್ನು ಒಂದು ವಾರ ಮುಂಚಿತವಾಗಿಯೇ ನಡೆಸಲು ನಿರ್ಧರಿಸಲಾಗಿದೆ. ಈ ಹಿಂದೊ ಡಿ. 7 ರಿಂದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು, ಆದರೆ ಈಗ ಪರಿಷ್ಕೃತ ವೇಳಾಪಟ್ಟಿಯಂತೆ ನ. 30 ರಿಂದ ಡಿ. 11 ರವರೆಗೆ 10 ದಿನಗಳ ಕಾಲ ಬೆಳಗಾವಿ ಅಧಿವೇಶನ ನಡೆಯಲಿದೆ.









































