ಬೆಂಗಳೂರು: ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಚಿ ಪ್ರಕಟವಾಗಿದೆ.
2026-27ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-01ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಇದರ ಪ್ರಕಾರ ಮುಖ್ಯ ಪರೀಕ್ಷೆಗಳು 2027 ರ ಮಾರ್ಚ್ 22 ರಿಂದ ರಾಜ್ಯಾದ್ಯಂತ ಆರಂಭವಾಗಲಿವೆ.
ತಾತ್ಕಾಲಿಕ ವೇಳಾಪಟ್ಟಿಗೆ ಸಾರ್ವಜನಿಕರು ಮತ್ತು ಶಿಕ್ಷಣ ತಜ್ಞರಿಂದ ಆಕ್ಷೇಪಣೆಗಳನ್ನು ಸಲ್ಲಿಸಲು ಮಂಡಳಿ ಅವಕಾಶ ನೀಡಿತ್ತು. ಆ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ವೇಳಾಪಟ್ಟಿ:
ಮಾ. 22: ಪ್ರಥಮ ಭಾಷೆ ಪರೀಕ್ಷೆ (ಕನ್ನಡ, ತೆಲುಗು, ಹಿಂದಿ, ಇಂಗ್ಲಿಷ್ ಮುಂತಾದವು)
ಮಾ. 25: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ
ಮಾ. 27: ದ್ವಿತೀಯ ಭಾಷೆ (ಇಂಗ್ಲಿಷ್ ಮತ್ತು ಕನ್ನಡ)
ಮಾ. 30: ಗಣಿತ, ಸಮಾಜಶಾಸ್ತ್ರ
ಏ. 2: ತೃತೀಯ ಭಾಷೆ ಪರೀಕ್ಷೆ
ಏ. 3: ಅರ್ಥಶಾಸ್ತ್ರ ಮತ್ತು ಜೆಟಿಎಸ್ ವಿಷಯಗಳು
ಏ. 05: ಸಮಾಜ ವಿಜ್ಞಾನ
ಸಮಯ
ಪ್ರಥಮ ಭಾಷೆ, ಕೋರ್ ವಿಷಯಗಳು (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಹಾಗೂ ಜೆಟಿಎಸ್ ಪರೀಕ್ಷೆಗಳು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:15 ರವರೆಗೆ ನಡೆಯಲಿವೆ. ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆಯ ಪರೀಕ್ಷೆಗಳು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿವೆ. ಎನ್‌ಎಸ್‌ಕ್ಯೂಎಫ್ (NSQF) ಪರೀಕ್ಷೆಗಳು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:15 ರವರೆಗೆ ಜರುಗಲಿವೆ. ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ಪರೀಕ್ಷೆಗಳನ್ನು ನಿಗದಿತ ದಿನದಂದು ಮಧ್ಯಾಹ್ನದ ಅವಧಿಯಲ್ಲಿ ನಡೆಸಲಾಗುತ್ತದೆ ಎಂದು ಇಲಾಖೆ ಹೇಳಿದೆ.









































