ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ, ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ಇವರ ಆಶ್ರಯದಲ್ಲಿ ಜಿಲ್ಲಾ ಈಜು ಕೊಳ ಅಜ್ಜರಕಾಡು ಉಡುಪಿಯಲ್ಲಿ ಆಯೋಜಿಸಿದ್ದ 14 ಹಾಗೂ 17ರ ವಯೋಮಾನದ ಬಾಲಕ – ಬಾಲಕಿಯರ ಉಡುಪಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ಯಶ್ವಿ ಬಿ.ಎಚ್. 200ಮೀ, 100ಮೀ ಹಾಗೂ 50ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಪ್ರಥಮ ಸ್ಥಾನ ಹಾಗೂ 7 ನೇತರಗತಿಯ ಆತ್ಮೀಕ್ ಎನ್ ನಾಯಕ್ 400ಮೀ ಫ್ರೀಸ್ಟೈಲ್‌ನಲ್ಲಿ ಪ್ರಥಮ ಸ್ಥಾನ ಮತ್ತು 9ನೇ ತರಗತಿಯ ಅಭೀಶ್ 400ಮೀ ಫ್ರೀಸ್ಟೈಲ್, 100ಮೀ ಬಟರ್ ಫ್ಲೈ ಮತ್ತು ಬ್ಯಾಕ್ ಸ್ಟ್ರೋಕ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.










































