ಕುಚ್ಚೂರು ಪ್ರೌಢಶಾಲೆಯ 12 ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಕೆಪಿಎಸ್ ಕೊಕ್ಕರ್ಣೆ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಕುಚ್ಚೂರು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ 12 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ನ.2 ರಿಂದ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ವಿದ್ಯಾರ್ಥಿಗಳಾದ ರೋಷಿತ್, ಪವನ್, ಪ್ರಸನ್ನ, ಪ್ರಥಮ್, ಸುಧಾಕರ, ಪ್ರಸನ್ನ, ಧೃತಿ, ಅಕ್ಷಿತಾ, ತೃಪ್ತಿ, ಕೃತಿಕಾ, ಶ್ರೇಯ ಹಾಗೂ ಸೌಜನ್ಯ ವಿಜೇತ ವಿದ್ಯಾರ್ಥಿಗಳಾಗಿದ್ದು, ಮುಖ್ಯ ಶಿಕ್ಷಕಿ ಪ್ರಭಾವತಿ, ದೈಹಿಕ ಶಿಕ್ಷಕಿ ಕಮಲಿನಿ, ಸಹ ಶಿಕ್ಷಕ ಜಯರಾಮ ಎನ್.ಬಿ., ಶಿವಾನಂದ ಶೆಟ್ಟಿ, ತುಳಸಿ ತರಬೇತಿಯಲ್ಲಿ ಸಹಕರಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕ ಸಿಬ್ಬಂದಿ, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ.



















































































error: Content is protected !!
Scroll to Top