ಕರ್ನಾಟಕದಲ್ಲಿ ನ. 5 ರಿಂದ ಸರ್ಕಾರಿ ಬಸ್ಸುಗಳ ಪ್ರಯಾಣ ದರ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ನ. 5ರಿಂದ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಹೆಚ್ಚಳವಾಗಲಿದೆ ಎಂದು ಸಚಿವ ಬಿ.ಎಸ್. ಸುರೇಶ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೀಸೆಲ್ ಬೆಲೆ ಏರಿಕೆಯ ಪರಿಣಾಮ ಸಾರಿಗೆ ಸಂಸ್ಥೆಗಳು ಆರ್ಥಿಕ ನಷ್ಟ ಅನುಭವಿಸುತ್ತಿದ್ದು, ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಸಾರಿಗೆ ಸಂಸ್ಥೆಗಳಿಗೆ ಪ್ರತಿ ವರ್ಷ ಸುಮಾರು 2 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಪ್ರಸ್ತುತ ಸಾರಿಗೆ ಸಂಸ್ಥೆಗಳು 9 ಸಾವಿರ ಕೋಟಿ ರೂಪಾಯಿ ಆದಾಯ ಕೊರತೆ ಎದುರಿಸುತ್ತಿವೆ ಎಂದು ತಿಳಿಸಿದರು.

ಕಳೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆಯೂ ಚರ್ಚಿಸಲಾಗಿದೆ. ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಅಗತ್ಯವಿದೆ. ಅದೇ ವೇಳೆ ಪ್ರಯಾಣಿಕರಿಗೆ ಹೆಚ್ಚಿನ ಹೊರೆಯಾಗದಂತೆ ಎಚ್ಚರಿಕೆ ವಹಿಸಲಾಗುವುದಾಗಿ ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳು ನಷ್ಟದ ಸಂಕಷ್ಟದಿಂದ ಹೊರಬರಲು ಅಗತ್ಯವಿರುವಷ್ಟು ಮಾತ್ರ ಪ್ರಯಾಣ ದರ ಹೆಚ್ಚಳ ಮಾಡಿ ಆರ್ಥಿಕ ನಷ್ಟವನ್ನು ಸರಿದೂಗಿಸಲಾಗುವುದು ಎಂದು ಸಚಿವರು ತಿಳಿಸಿದರು. ದರ ಹೆಚ್ಚಳದಿಂದ ರಾಜ್ಯದ ಸಾರಿಗೆ ಸಂಸ್ಥೆಗಳ ಆದಾಯ ಹೆಚ್ಚಿಸುವ ಉದ್ದೇಶವಿದ್ದರೂ, ಹೊಸ ದರ ಎಷ್ಟು ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂಬ ವಿವರ ಇನ್ನಷ್ಟೇ ಪ್ರಕಟವಾಗಬೇಕಿದೆ.



















































































error: Content is protected !!
Scroll to Top