ಮುರಸು ಅಬ್ಬರ: ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರೂಪುಗೊಂಡ ಮುರಸು ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿಯೂ ಮುಂದಿನ ಮೂರು ದಿನ ಮಳೆಯಾಗುವ ಮುನ್ಸೂಚನೆ ಇದ್ದು, ಇಂದಿನಿಂದ ಮೂರು ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮುರಸು ಚಂಡಮಾರುತದ ಪರಿಣಾಮ ಕರ್ನಾಟಕ ಮಾತ್ರವಲ್ಲದೆ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಮೂರು ದಿನ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ ಎಂದು ಇಲಾಖೆ ಹೇಳಿದೆ.



















































































error: Content is protected !!
Scroll to Top