ಅಥ್ಳೆಟಿಕ್ಸ್: ಕ್ರೈಸ್ಟ್‌ಕಿಂಗ್‌ನ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ಇವರ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್‌ ಆಂಗ್ಲಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಏಳನೇ ತರಗತಿಯ ತ್ರಿಷ್ಮ, ಪ್ರನ್ವಿ ಎಸ್. ದೇವಾಡಿಗ, ಆಶೀ ಶೆಟ್ಟಿ ಹಾಗೂ ಎಂಟನೇ ತರಗತಿಯ ಆ್ಯಶೆಲ್ ಡಿ ಅಲ್ಮೆಡಾ ಅವರನ್ನೊಳಗೊಂಡ ತಂಡ ಬಾಲಕಿಯರ 4*100 ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಹಾಗೂ ಹತ್ತನೇ ತರಗತಿಯ ಅಂಕುಶ್ ಶಾಟ್‌ಪುಟ್‌ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.



















































































error: Content is protected !!
Scroll to Top