ರಾಜ್ಯದಲ್ಲಿ ಮೊಸರಿನ ಬೆಲೆ ಕಡೆಮೆ ಮಾಡುವಂತೆ ಸಿಎಂ ಡಿ.ಕೆ.ಶಿ. ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊಸರಿನ ದರ ಏರಿಕೆಯನ್ನು ಕಡಿತ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ತಿಳಿದು ಬಂದಿದೆ.

ಹಾಲು ಮತ್ತು ಮೊಸರು ಜನರ ದೈನಂದಿನ ಅಗತ್ಯ ವಸ್ತುಗಳಾಗಿದ್ದು, ಬೆಲೆ ಏರಿಕೆಯಿಂದಾಗಿ ಗ್ರಾಹಕರಿಗೆ ಹೆಚ್ಚುವರಿ ಆರ್ಥಿಕ ಹೊರೆಯಾಗಿದೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಬೆಲೆ ಕಡಿತಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೊಸರಿನ ಬೆಲೆಯನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಾಲಿನ ದರದಲ್ಲಿ ಯಾವುದೇ ಬದಲಾವಣೆ ಮಾಡುವ ಪ್ರಸ್ತಾಪವಿಲ್ಲ. ಆದರೆ, ನಂದಿನಿ ಮೊಸರಿನ ದರ ಇಳಿಕೆ ಮಾಡುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದರಂತೆ, ಮೊಸರಿನ ದರವನ್ನು ಪ್ರತಿ ಲೀಟರ್‌ಗೆ ₹14 ಹೆಚ್ಚಿಸಲು ಉದ್ದೇಶಿಸಲಾಗಿದ್ದ ದರ ಏರಿಕೆಯನ್ನು ಇದೀಗ ₹12ಕ್ಕೆ ಇಳಿಸಲು ನಿರ್ಧರಿಸಲಾಗಿದೆ.



















































































error: Content is protected !!
Scroll to Top