ಮಂಗಳೂರು: ಡ್ರಗ್ಸ್‌ ಪೂರೈಸುತ್ತಿದ್ದ ಬೆಳ್ತಂಗಡಿಯ ಮಹಿಳೆಯ ಬಂಧನ

ಅಪಾರ್ಟ್‌ಮೆಂಟ್‌ನಿಂದ ಸುಮಾರು 15.3 ಲಕ್ಷ ರೂ. ಮೌಲ್ಯದ 153 ಗ್ರಾಂ ಎಂಡಿಎಂಎ ವಶ

ಮಂಗಳೂರು: ಮಾದಕವಸ್ತು ಪೂರೈಕೆ ಜಾಲದ ಪ್ರಮುಖ ಕೊಂಡಿಯಾಗಿದ್ದ ನಸೀಮಾ ಎಂಬಾಕೆಯನ್ನು ಪೊಲೀಸರು ಬಂದಿಸಿದ್ದಾರೆ. ಬೆಳ್ತಂಗಡಿ ಬೆಳ್ತಂಗಡಿ ತಾಲೂಕಿನ ಲಾಯಿಲದ ಗುರಿಂಗಾನ ನಿವಾಸಿ ನಸೀಮಾ ಅಲಿಯಾಸ್ ನಸೀಮ್ (42) ಮಂಗಳೂರಿನಲ್ಲಿ ವ್ಯವಸ್ಥಿತವಾಗಿ ಡ್ರಗ್ಸ್‌ ದಂಧೆ ನಡೆಸುತ್ತಿದ್ದಳು ಎನ್ನಲಾಗಿದೆ.

ನಗರದಾದ್ಯಂತ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕವಸ್ತುಗಳನ್ನು ಪೂರೈಸುತ್ತಿದ್ದ ಜಾಲದ ಜೊತೆ ಇ ಮಹಿಳೆಗೆ ನಿಕಟ ನಂಟು ಇತ್ತು. ಮಂಗಳೂರು ಉತ್ತರ ಠಾಣೆ ಪೊಲೀಸರು ಈಕೆಯನ್ನು ಬಂಧಿಸಿದ್ದು, ಒಂಒವೆಲ್‌ನಲ್ಲಿರುವ ಆಕೆಯ ಅಪಾರ್ಟ್‌ಮೆಂಟ್‌ನಿಂದ ಸುಮಾರು 15.3 ಲಕ್ಷ ರೂ. ಮೌಲ್ಯದ 153 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ನವೆಂಬರ್ 1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕವಸ್ತು ಸೇವನೆ ಪ್ರಕರಣದ ತನಿಖೆಯ ವೇಳೆ ಈ ಜಾಲ ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಆ ಪ್ರಕರಣದ ಆರೋಪಿಗೆ ನಸೀಮಾ ಮಾದಕವಸ್ತು ಪೂರೈಸುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ತನಿಖಾಧಿಕಾರಿಗಳು ತಕ್ಷಣವೇ ಮಾದಕ ವಸ್ತು ಪೂರೈಕೆ ಜಾಲದ ಮೂಲವನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಲಭ್ಯವಾದ ಖಚಿತ ಮಾಹಿತಿ ಆಧರಿಸಿ ಪೊಲೀಸರು ಪಂಪ್‌ವೆಲ್-ಉಜ್ಜೋಡಿ ಬಳಿಯ ಅಪಾರ್ಟ್‌ಮೆಂಟ್‌ನ ಮೊದಲ ಮಹಡಿಯಲ್ಲಿರುವ ಫ್ಲಾಟ್‌ವೊಂದಕ್ಕೆ ದಾಳಿ ನಡೆಸಿದರು. ಈ ಕಾರ್ಯಾಚರಣೆ ವೇಳೆ 15,30,000 ರೂ. ಮೌಲ್ಯದ 153 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಆಕೆ ಮಂಗಳೂರು ನಗರದಾದ್ಯಂತ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸಿ ಮಾರಾಟ ಮಾಡುತ್ತಿದ್ದದ್ದು ತಿಳಿದುಬಂದಿದೆ. ಬಂಧಿತ ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳು ಭಾಗಿಯಾಗಿದ್ದು, ಅವರ ಬಂಧನ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾದಕ ವಸ್ತು ಪೂರೈಕೆ ಜಾಲದ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳನ್ನು ಗುರುತಿಸಿ ಬಂಧಿಸಲು ಶೋಧ ಕಾರ್ಯಾಚರಣೆ ಇದೆ.



















































































error: Content is protected !!
Scroll to Top