ಮಂಗಳೂರು: ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ಬೈಕಂಪಾಡಿ ಬಳಿ ತಡೆದು ಚಾಲಕನನ್ನು ಬಂಧಿಸಿದ ಘಟನೆ ನಡೆದಿದೆ.
ಬೆಳಗಾವಿಯಿಂದ ಕಾಸರಗೋಡಿಗೆ ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ ಬೈಕಂಪಾಡಿ ಬಳಿ ದಾಳಿ ನಡೆಸಿದ ಪೊಲೀಸರು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ, ಯಾವುದೇ ಪರವಾನಗಿ ಇಲ್ಲದೆ 16 ಗೋವುಗಳನ್ನು ತುಂಬಿಕೊಂಡು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ತಕ್ಷಣವೇ 16 ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಲಾರಿ ಚಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಗೋವುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.

ಈ ಸಾಗಾಟದ ಹಿಂದೆ ದೊಡ್ಡ ಜಾಲವಿದೆಯೇ, ಈ ಅಕ್ರಮದಲ್ಲಿ ಯಾರಾದರೂ ಪಾಲುದಾರರಿದ್ದಾರೆಯೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.


























