ಕಾರ್ಕಳ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವಾ ಸಮಿತಿ ಕಾರ್ಕಳ ಮತ್ತು ಕುಂದಾಪುರ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನನ್ನ ಬಾಲ್ಯ ನನ್ನ ಹಕ್ಕು ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.
ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರು ಹಾಗೂ ಕಾರ್ಕಳ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಗೀತಾ ಡಿ. ಕಾರ್ಯಕ್ರಮ ಉದ್ಘಾಟಿಸಿ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿ ಶ್ವೇತ ವಿಪುಲ್ ತೇಜ್ (ನ್ಯಾಯಾಧೀಶರು ಕಾರ್ಕಳ) ಅವರು ಪೋಕ್ಸೊ ಕಾಯ್ದೆ ಬಗ್ಗೆ ಕಾನೂನು ಅರಿವು ಮೂಡಿಸಿದರು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶಶಿಕಲಾ ವಹಿಸಿದ್ದರು.
ತಾಲೂಕು ಲೀಗಲ್ ಸರ್ವಿಸ್ ಕಮಿಟಿಯ ಆಡಳಿತ ಸಹಾಯಕಿ ಜ್ಯೋತಿ, ಶಾಲಾ ವಿದ್ಯಾರ್ಥಿ ನಾಯಕ ಅಂಕುಶ್, ಉಪನಾಯಕಿ ಮನಸ್ವಿ, ಶಿಕ್ಷಕಿಯರಾದ ವಾಣಿ ಹಾಗೂ ಅಶ್ವಿನಿ, ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಪದವೀಧರ ಸಹ ಶಿಕ್ಷಕಿ ಪ್ರತಿಮಾ ಎಸ್ ಸ್ವಾಗತಿಸಿದರು. ಸಹ ಶಿಕ್ಷಕಿ ಸವಿತಾ ಪ್ರಭು ನಿರೂಪಿಸಿದರು. ಗೌರವ ಶಿಕ್ಷಕಿ ಮಧುಶ್ರೀ ವಂದಿಸಿದರು.

























