ಬೆಂಗಳೂರು: ದೀಪಾವಳಿ ಹಿನ್ನೆಲೆ ಪರಿಸರ ಮಾಲಿನ್ಯ ನಿಯಂತ್ರಣ, ಅಗ್ನಿ ಅವಘಡಗಳ ತಡೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 19 ಅಂಶಗಳ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.
ಸಾರ್ವಜನಿಕರು ಪರಿಸರ ಸ್ನೇಹಿ ಹಾಗೂ ಸುರಕ್ಷಿತವಾಗಿ ದೀಪಾವಳಿ ಆಚರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ. ನಿಗದಿತ ಸಮಯವನ್ನು ಮೀರಿ ಪಟಾಕಿ ಸಿಡಿಸುವುದು ಸೇರಿದಂತೆ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಆಸ್ಪತ್ರೆಗಳು, ಪೆಟ್ರೋಲ್ ಬಂಕ್ಗಳು, ಗ್ಯಾಸ್ ಸ್ಟೇಷನ್ಗಳು, ಧಾರ್ಮಿಕ ಕೇಂದ್ರಗಳು, ವೃದ್ಧಾಶ್ರಮಗಳು ಹಾಗೂ ಶಿಶುಪಾಲನಾ ಕೇಂದ್ರಗಳ ಸುತ್ತಮುತ್ತ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.

ಅಲ್ಲದೆ, ಜನನಿಬಿಡ ಪ್ರದೇಶಗಳು, ಸಾರ್ವಜನಿಕ ರಸ್ತೆಗಳು ಹಾಗೂ ವಾಹನಗಳನ್ನು ನಿಲ್ಲಿಸಿರುವ ಸ್ಥಳಗಳ ಬಳಿ ಪಟಾಕಿ ಸಿಡಿಸಬಾರದು. ಪಟಾಕಿ ಸಿಡಿಸಲು ತೆರೆದ ಮೈದಾನಗಳು ಮತ್ತು ಜನಸಂದಣಿ ಕಡಿಮೆ ಇರುವ ಸುರಕ್ಷಿತ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಪಟಾಕಿ ಖರೀದಿಸುವಾಗಲೂ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ. ಮಾನ್ಯತೆ ಹೊಂದಿರುವ ಅಂಗಡಿಗಳಿಂದ ಮಾತ್ರ ಗುಣಮಟ್ಟದ ಹಸಿರು ಪಟಾಕಿಗಳನ್ನು ಖರೀದಿಸಬೇಕು. ಪಟಾಕಿಗಳ ಅಸಲೀಯತೆ ಮತ್ತು ಅಧಿಕೃತತೆಯನ್ನು ಖಚಿತಪಡಿಸಿಕೊಳ್ಳಲು ಪ್ಯಾಕೆಟ್ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪರಿಶೀಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಹಬ್ಬದ ಸಂಭ್ರಮದ ನಡುವೆ ಪರಿಸರಕ್ಕೆ ಹಾನಿಯಾಗದಂತೆ ಮತ್ತು ಸಾರ್ವಜನಿಕರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟಾಗದಂತೆ ಪ್ರತಿಯೊಬ್ಬರೂ

























