ಬೆಂಗಳೂರು: ಬಿಜೆಪಿಗರು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾದಾಗ ಏಕೆ ಪ್ರತಿಭಟಿಸಲಿಲ್ಲ? ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರವನ್ನ ಮೊದಲು ಕಡಿಮೆ ಮಾಡಲಿ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹಾಲಿನ ಬೆಲೆ ಹೆಚ್ಚಳ ಮಾಡಿದ್ದಕ್ಕಾಗಿ ಹಸಿರು ಸೇನೆಯವರು ಅಭಿನಂದನಾ ಪತ್ರ ನೀಡಿಸಿದ್ದಾರೆ. ಕೇಂದ್ರ ಸರ್ಕಾರ ಇಂಧನ ದರ ಇಳಿಸಿದರೆ ನಾವು ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರ ಕಡಿಮೆ ಮಾಡುವುದಾಗಿ ತಿಳಿಸಿದ್ದಾರೆ.
ರೈತರ ಸಮಸ್ಯೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಖಂಡಿತವಾಗಿಯೂ ಭೇಟಿ ಮಾಡುತ್ತೇನೆ. ಈಗಾಗಲೇ ಪತ್ರ ಬರೆದಿದ್ದೇನೆ. ನವೆಂಬರ್ 13ರಂದು ಪ್ರಧಾನಿ ಬೆಂಗಳೂರಿಗೆ ಬರುತ್ತಿದ್ದಾರೆ. ಅಂದು ಮಾತನಾಡುತ್ತೇನೆ. ಇಲ್ಲವಾದರೆ ಬೇರೆ ಸಮಯ ಕೇಳುವುದಾಗಿ ಹೇಳಿದ್ದಾರೆ.

ಕಬ್ಬು ಬೆಲೆ ವಿಚಾರದಲ್ಲಿ ಕಾರ್ಖಾನೆಗಳು ಮತ್ತು ರೈತರೊಂದಿಗೆ ಚರ್ಚಿಸಲಾಗಿದೆ. ರೈತರಿಗೆ ನ್ಯಾಯ ಸಿಗುವಂತೆ ಕಾರ್ಖಾನೆಗಳು ಬೆಲೆ ನಿಗದಿಪಡಿಸಬೇಕು ಎಂದು ತಿಳಿಸಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಕಬ್ಬು ಕಟಾವು ಮತ್ತು ಸಾಗಣೆಗೆ ಪೊಲೀಸ್ ರಕ್ಷಣೆ ನೀಡುವಂತೆ ರೈತರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕಬ್ಬು ಒಣಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಪೊಲೀಸ್ ರಕ್ಷಣೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿಸಿದ್ದಾರೆ.




























