ಕಾರ್ಕಳ: ಅಜ್ಜರಕಾಡು ಈಜುಕೊಳದಲ್ಲಿ ಅ. 30 ರಂದು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ 50 ಮೀ. ಪ್ರೀಸ್ಟೈಲ್, 50 ಮೀ. ಬಟರ್ ಫ್ಲೈ ಹಾಗೂ 400ಮೀ. ಫ್ರೀಸ್ಟೈಲ್ ವಿಭಾಗಗಳಲ್ಲಿ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಶೆಣೈ ಚಿನ್ನದ ಪದಕ ಪಡೆದು ಪ್ರಥಮ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಆರ್. ಉಮೇಶ್ ಶೆಣೈ – ಪ್ರತಿಮಾ ಶೆಣೈ ದಂಪತಿ ಪುತ್ರಿ.
ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂಧಿ, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.



























