ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ನ. 30 ರ ವರೆಗೆ ಸಮಯಾವಕಾಶ ನೀಡಿದ ಆಹಾರ ಇಲಾಖೆ

ಬೆಂಗಳೂರು: ಕರ್ನಾಟಕದ ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಪಡಿತರ ಚೀಟಿಗೆ ಇ-ಕೆವೈಸಿ (e-KYC) ಮಾಡಿಸಲು ನೀಡಲಾಗಿದ್ದ ಗಡುವನ್ನು ನ. 30ರವರೆಗೆ ವಿಸ್ತರಿಸಿ ಆಹಾರ ಇಲಾಖೆ ಆದೇಶಿಸಿದೆ.

ಈ ಹಿಂದೆ ನ. 10 ಇ-ಕೆವೈಸಿ ಮಾಡಿಸಲು ಕೊನೆಯ ದಿನವಾಗಿತ್ತು. ಆದರೆ, ಫಲಾನುಭವಿಗಳಿಗೆ ಮತ್ತಷ್ಟು ಕಾಲಾವಕಾಶ ಕಲ್ಪಿಸುವ ಉದ್ದೇಶದಿಂದ ಗಡುವನ್ನು ವಿಸ್ತರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಪಡಿತರ ಚೀಟಿದಾರರು ಇ-ಕೆವೈಸಿ ಪ್ರಕ್ರಿಯೆಯನ್ನು ಎರಡು ವಿಧಾನಗಳಲ್ಲಿ ಪೂರ್ಣಗೊಳಿಸಬಹುದು. ಮನೆಯಲ್ಲೇ ಕುಳಿತು ಅನ್ನಸೇವೆ ಆ್ಯಪ್ ಮೂಲಕ ಮೊಬೈಲ್‌ನಲ್ಲೇ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ಅಥವಾ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ನಿಗದಿತ ಅವಧಿಯೊಳಗೆ ಎಲ್ಲ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

ನ್ಯಾಯಬೆಲೆ ಅಂಗಡಿಗಳ ಮುಂದೆ ಸರದಿಯಲ್ಲಿ ನಿಲ್ಲುವುದನ್ನು ತಪ್ಪಿಸುವ ಉದ್ದೇಶದಿಂದ ಆಹಾರ ಇಲಾಖೆ ಅನ್ನಸೇವೆ ಆ್ಯಪ್ ಸೌಲಭ್ಯವನ್ನು ರಾಜ್ಯದ ಎಲ್ಲ 31 ಜಿಲ್ಲೆಗಳಿಗೂ ವಿಸ್ತರಿಸಿದೆ. ಕೇಂದ್ರ ಸರ್ಕಾರದ ನಿಯಮದ ಪ್ರಕಾರ ಪ್ರತಿ ಐದು ವರ್ಷಕ್ಕೊಮ್ಮೆ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಹಿರಿಯ ನಾಗರಿಕರು ಹಾಗೂ ಮಕ್ಕಳ ಅನುಕೂಲಕ್ಕಾಗಿ ಮುಖ ಗುರುತಿಸುವಿಕೆ (Face Authentication) ಮೂಲಕ ದೃಢೀಕರಣ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಗಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗಿರುವವರು ಇ-ಕೆವೈಸಿಗಾಗಿ ತಮ್ಮ ಊರಿಗೆ ಹಿಂದಿರುಗುವ ಅನಿವಾರ್ಯತೆಯನ್ನೂ ಈ ವ್ಯವಸ್ಥೆ ತಪ್ಪಿಸಲಿದೆ.























































































































error: Content is protected !!
Scroll to Top