ನವದೆಹಲಿ: ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ವಿಷಯವೊಂದನ್ನು ಸ್ಪಷ್ಟಪಡಿಸಿದೆ.
ಯಾವುದೇ ಸರ್ಕಾರಿ ನೌಕರರು ಕ್ರಿಮಿನಲ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 48 ಗಂಟೆಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರೆ, ಅವರು ಸ್ವಯಂಚಾಲಿತವಾಗಿ ಅಮಾನತುಗೊಂಡಂತೆ ಪರಿಗಣಿಸಲಾಗುತ್ತದೆ. ಇದಕ್ಕಾಗಿ ಸಂಬಂಧಪಟ್ಟ ಇಲಾಖೆ ಪ್ರತ್ಯೇಕವಾಗಿ ಅಮಾನತು ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.
ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠವು ಬಿಹಾರದ ಸಮಷ್ಟಿಪುರದ ಸದರ್ ಆಸ್ಪತ್ರೆಯ ಆಡಳಿತಾಧಿಕಾರಿ ವಿಶ್ವಜೀತ್ ಸಿಂಗ್ ಅವರ ಜಾಮೀನು ಅರ್ಜಿಯ ವಿಚಾರಣೆ ವೇಳೆ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಕೇವಲ ಲಂಚದ ಮೊತ್ತ ಕಡಿಮೆ ಇದೆ ಎಂಬ ಕಾರಣಕ್ಕೆ ಜಾಮೀನು ರದ್ದುಗೊಳಿಸುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪಾಟ್ನಾ ಹೈಕೋರ್ಟ್‌ನ ಜಾಮೀನು ರದ್ದತಿ ಆದೇಶವನ್ನು ರದ್ದುಗೊಳಿಸಿ, ಸೆಷನ್ಸ್ ನ್ಯಾಯಾಲಯ ನೀಡಿದ್ದ ಜಾಮೀನನ್ನು ಮರುಸ್ಥಾಪಿಸಿದೆ. ಈ ತೀರ್ಪು ಸರ್ಕಾರಿ ನೌಕರರ ಬಂಧನ, ಅಮಾನತು ಪ್ರಕ್ರಿಯೆ ಹಾಗೂ ಇಲಾಖೆಗಳ ಜವಾಬ್ದಾರಿಯ ಕುರಿತು ಮಹತ್ವದ ಸ್ಪಷ್ಟನೆ ನೀಡಿದೆ.



























































