ಸಂಚಾರ ನಿಯಮ ಉಲ್ಲಂಘನೆ ಪ್ರಕರಣ: ದಂಡ ಪಾವತಿಯಲ್ಲಿ ರಿಯಾಯಿತಿ ಪ್ರಕಟಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದಿರುವ ದಂಡದ ಮೊತ್ತವನ್ನು ಶೇ.50ರಷ್ಟು ರಿಯಾಯಿತಿಯೊಂದಿಗೆ ಪಾವತಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಈ ಈ ಸೌಲಭ್ಯ ನ. 21ರಿಂದ ಡಿ. 11ರವರೆಗೆ ಜಾರಿಯಲ್ಲಿರಲಿದೆ.

ಕರ್ನಾಟಕದಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ವಸೂಲಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಹಿಂದೆ ನೀಡಲಾಗಿದ್ದ ರಿಯಾಯಿತಿ ಸೌಲಭ್ಯವನ್ನು ಮತ್ತೊಮ್ಮೆ ವಿಸ್ತರಿಸುವಂತೆ ಸಲ್ಲಿಕೆಯಾಗಿದ್ದ ಮನವಿಯನ್ನು ಪರಿಗಣಿಸಿ ಈ ಆದೇಶ ಹೊರಡಿಸಲಾಗಿದೆ.

ಇದರ ಅನ್ವಯ, ಸಂಚಾರ ನಿಯಮ ಉಲ್ಲಂಘನೆಗಾಗಿ ವಿಧಿಸಲಾಗಿರುವ ಬಾಕಿ ದಂಡದ ಶೇ.50ರಷ್ಟು ಮೊತ್ತವನ್ನು ಪಾವತಿಸುವ ಮೂಲಕ ವಾಹನ ಸವಾರರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.

ಹೀಗಾಗಿ, ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ನಿಗದಿತ ಅವಧಿಯೊಳಗೆ ಈ ಅವಕಾಶವನ್ನು ಬಳಸಿಕೊಳ್ಳಬಹುದು. ಡಿ. 11ರ ನಂತರ ಈ ರಿಯಾಯಿತಿ ಸೌಲಭ್ಯ ಅಲಭ್ಯ.























































































































error: Content is protected !!
Scroll to Top