ಕರಾವಳಿಯಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಹಕ್ಕೊತ್ತಾಯ ಸಭೆಗೆ ಕಾಂಗ್ರೆಸ್ ಬೆಂಬಲ

ಕಾರ್ಕಳ : ಕಾರ್ಕಳ ವಕೀಲರ ಸಂಘದ ವತಿಯಿಂದ ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ನ. 14ರಂದು ಕಾರ್ಕಳದಲ್ಲಿ ನಡೆಯುವ ಹಕ್ಕೊತ್ತಾಯ ಸಭೆಗೆ ಪೂರ್ಣ ಬೆಂಬಲವಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ತಿಳಿಸಿದ್ದಾರೆ. ಹೈಕೋರ್ಟ್‌ ಪೀಠ ಸ್ಥಾಪನೆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದೆ. ಇದು ಕೇವಲ ವಕೀಲರಿಗೆ ಮಾತ್ರ ಸಂಬಂಧಿಸಿದ ವಿಷಯವಲ್ಲ, ಸಮಸ್ತ ಕರಾವಳಿಯ ಜನತೆಗೆ ಸಹಕಾರಿಯಾಗುವ ಮಹತ್ವದ ವಿಚಾರವಾಗಿದೆ. ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದಲ್ಲಿ ಈ ಭಾಗದ ಜನರು ನ್ಯಾಯಕ್ಕಾಗಿ ಬೆಂಗಳೂರಿಗೆ ಅಲೆದಾಡುವ ಅನಿವಾರ್ಯತೆ ತಪ್ಪುತ್ತದೆ. ಅಲ್ಲದೆ ಸಮಯ ಹಾಗೂ ನ್ಯಾಯಾಲಯದ ಕಲಾಪಗಳಿಗೆ ಸಂಬಂಧಿಸಿದ ಪ್ರಯಾಣ ವೆಚ್ಚವೂ ಗಣನೀಯವಾಗಿ ಕಡಿಮೆಯಾಗಲಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಮಹತ್ವದ ಬೇಡಿಕೆಗೆ ಬಲ ತುಂಬುವ ಉದ್ದೇಶದಿಂದ ನ. 14ರ ಶನಿವಾರ ಬೆಳಿಗ್ಗೆ 10:30 ಕ್ಕೆ ಕಾರ್ಕಳ ಪ್ರಕಾಶ್ ಹೋಟೆಲ್‌ ಸಭಾಂಗಣದಲ್ಲಿ ನಡೆಯುವ ಹಕ್ಕೊತ್ತಾಯ ಸಭೆಯಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳು ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಮನವಿ ಮಾಡುತ್ತೇವೆ ಎಂದರು.























































































































error: Content is protected !!
Scroll to Top