ಆಳ್ವಾಸ್ ವಿದ್ಯಾರ್ಥಿಸಿರಿ ಅಧ್ಯಕ್ಷರ ಆಯ್ಕೆಗೆ ವಿದ್ಯಾರ್ಥಿಗಳ ವಿವರ ಆಹ್ವಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ ‘ಆಳ್ವಾಸ್ ವಿದ್ಯಾರ್ಥಿಸಿರಿ-2027’, ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನವು ಜನವರಿ ತಿಂಗಳಲ್ಲಿ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಜರುಗಲಿದ್ದು, ಈ ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ವಿವರಗಳನ್ನು ಆಹ್ವಾನಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ.ಮೋಹನ ಆಳ್ವ ಇವರು ತಿಳಿಸಿದ್ದಾರೆ.

ಭಾಷಣ, ಸಾಹಿತ್ಯ, ಸಾಂಸ್ಕೃತಿಕ ಮೊದಲಾದ ಕ್ಷೇತ್ರಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಕಾಸರಗೋಡು, ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲಾ ವ್ಯಾಪ್ತಿಯ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರ, ಸ್ವಪರಿಚಯದ ವಿವರ ಹಾಗೂ ಪಡೆದ ಪ್ರಮಾಣ ಪತ್ರಗಳ ಜತೆಗೆ ಸಂಪರ್ಕ ಸಂಖ್ಯೆಯನ್ನು 21 ನವಂಬರ 2026ರ ಒಳಗೆ ಕಳುಹಿಸಿಕೊಡಬೇಕು. ನವಂಬರ ತಿಂಗಳ ಕೊನೆಯ ವಾರದಲ್ಲಿ ಆಯ್ಕೆ ಪ್ರಕ್ರಿಯೆಯು ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಆಶು ಭಾಷಣ ಹಾಗೂ ಸಂದರ್ಶನಗಳನ್ನು ಒಳಗೊಂಡಿರುತ್ತದೆ. ಇದೇ ಸಂದರ್ಭದಲ್ಲಿ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷರನ್ನೂ ಆಯ್ಕೆ ಮಾಡಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಅರ್ಹರಿಗೆ ಸಮ್ಮೇಳನದಲ್ಲಿ ಅವಕಾಶಗಳನ್ನು ನೀಡಲಾಗುವುದು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶವಿದ್ದು, ಅವರು ತಮ್ಮ ಸ್ವವಿವರಗಳನ್ನು ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ-574227, ಈಮೇಲ್ info@alvas.org ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಹೆಚ್ಚಿನ ವಿವರಗಳಿಗೆ 9481326858/7892963154 ಸಂಖ್ಯೆಯನ್ನು ಸಂಪರ್ಕಿಸಬಹುದು























































































































error: Content is protected !!
Scroll to Top