ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೊಗಾಗಿ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗಾಗಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಗಾಗಿ ಪ್ರಧಾನಿ ಮೋದಿ ಇಂದು ಬೆಳಗ್ಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಪ್ರಧಾನಿ ಮೋದಿ ಅವರನ್ನು ಸಿಎಂ ಡಿ.ಕೆ. ಶಿವಕುಮಾ‌ರ್, ರಾಜ್ಯಪಾಲರಾದ ಡಾ. ಸುಧಾ ಯಾದವ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸ್ವಾಗತ ಕೋರಿದ್ದಾರೆ.

ಬೆಂಗಳೂರು ಹಾಗೂ ಮೈಸೂರಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ, ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ವಸತಿ ಪ್ರಧಾನಿ ಕಚೇರಿಯಲ್ಲಿ ನಡೆಯುವ ಪ್ರಶಾಂತಿ ಕುಟೀರದ ಸ್ವರ್ಣ ಜಯಂತಿಯಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನಲ್ಲಿ ಪಿಂಕ್‌ಲೈನ್ ಮೆಟ್ರೋ ಮಾರ್ಗದ ಉದ್ಘಾಟನೆ ಕೆಲವೇ ಕ್ಷಣಗಳಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ನೂತನ ಮೆಟ್ರೋ ಮಾರ್ಗವನ್ನ ಉದ್ಘಾಟನೆ ಮಾಡಲಿದ್ದಾರೆ. ಕಾಳೇನಅಗ್ರಹಾರದಿಂದ ತಾವರಕೆರೆ ವರೆಗಿನ 7.5km ಮಾರ್ಗದಲ್ಲಿ ಪಿಂಕ್ ಮೆಟ್ರೋ ಕಾರ್ಯಾಚರಣೆ ಆರಂಭವಾಗಲಿದೆ.

ಮಧ್ಯಾಹ್ನ 12:30ರ ಸುಮಾರಿಗೆ ಪ್ರಧಾನಿ ಮೋದಿ ಅವರು ಪಿಂಕ್ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಲಿದ್ದು, ಆ ಬಳಿಕ ಮೆಟ್ರೋದಲ್ಲೇ ಪ್ರಯಾಣಿಸಲಿರುವ ಮೋದಿ, ಐಐಎಂಬಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತಾಡಲಿದ್ದಾರೆ.

ತದನಂತರ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ವಿಶ್ವದ ಮೊದಲ ಟಿಲ್ವೆಡ್ ಎಲ್‌ಇಡಿ ಪ್ಲಾನಿಟೋರಿಯಂ ಲೋಕಾರ್ಪಣೆ ಮಾಡಲಿದ್ದಾರೆ.























































































































error: Content is protected !!
Scroll to Top