ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ಹಬ್ಬ

ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಶಿಕ್ಷಕ- ರಕ್ಷಕ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ “ಮಕ್ಕಳ ಹಬ್ಬ” ಕಾರ್ಯಕ್ರಮ ಗಾಂಧಿ ಮೈದಾನದಲ್ಲಿ ನಡೆಯಿತು.

ಕಾರ್ಕಳದ ಶ್ರೀನಿವಾಸ್ ಗ್ಲಾಸ್ ಟ್ರೇಡರ್ಸ್‌ ನ ಮಾಲೀಕನಎಂ. ಗಣಪತಿ ಪೈ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಬೆಳಗಿಸಿ ಮಕ್ಕಳ ಹಬ್ಬಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು “ಕ್ರೈಸ್ಟ್ಕಿಂಗ್ ವಿದ್ಯಾಸಂಸ್ಥೆಯು ದುರ್ಬಲ ವರ್ಗದ ವಿದ್ಯಾರ್ಥಿಗಳ ಏಳಿಗೆಯನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡುತ್ತಿರುವುದು ಈ ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಹಾಗಾಗಿಯೇ ಈ ವಿದ್ಯಾಸಂಸ್ಥೆ ನಮ್ಮ ರಾಜ್ಯದಲ್ಲಿಯೇ ವಿಶೇಷ ಸ್ಥಾನ ಪಡೆದಿರುವ ವಿದ್ಯಾಸಂಸ್ಥೆಯಾಗಿದೆ” ಎಂದು ಹೇಳಿದರು.

ಕಾರ್ಕಳ ಪೋಲಿಸ್ ವೃತ್ತ ನಿರೀಕ್ಷಕರಾದ ರಾಘವೇಂದ್ರ ಟಿ. ಆರ್. ಅವರು ಮಾತನಾಡಿ “ವಿದ್ಯಾರ್ಥಿಗಳಾದ ನೀವು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಉತ್ತಮ ವಿದ್ಯಾಭ್ಯಾಸವನ್ನು ಪಡೆದು ಸಮಾಜದಲ್ಲಿ ಸತ್ಪಜೆಯಾಗಿ ಜೀವನ ನಡೆಸಿ” ಎಂದು ಹೇಳಿದರು.

ಇನ್ನೋರ್ವ ಅತಿಥಿ ಪ್ರಖ್ಯಾತ ವೈದ್ಯ ಕಾರ್ಕಳ ಹೆಲ್ತ್‌ ಕೇರ್ ನ ಡಾ. ಪ್ರಕಾಶ್ ಶೆಣೈ ಅವರು ಮಾತನಾಡಿ “ಈ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆ ನಿಜಕ್ಕೂ ಹೆಮ್ಮೆ ತರುವಂತದ್ದಾಗಿದೆ. ಇವರ ಸಾಧನೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ” ಎಂದು ಹೇಳಿದರು.

ಸತತ ಎರಡು ಬಾರಿ ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಹಾಗೂ ಸತತ ಐದು ಬಾರಿ ವಾಲಿಬಾಲ್ ಆಟದಲ್ಲಿ ವಿಭಾಗೀಯ ಮಟ್ಟದಲ್ಲಿ ಶಾಲೆಯನ್ನು ಪ್ರತಿನಿಧಿಸಿದ್ದ ಆಟಗಾರ್ತಿ ಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಶೈನಿ ಡಿಸೋಜ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನಂತರ ಗಣ್ಯರು, ಮಕ್ಕಳು ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳ ಪ್ರದರ್ಶನ, ಚಿತ್ರಕಲೆ ಹಾಗೂ ಕ್ರಾಫ್ಟ್, ಮಕ್ಕಳಿಂದಲೇ ನಡೆಸಲ್ಪಡುವ ಆಹಾರ ಮಳಿಗೆಗಳು, ಮನೋರಂಜನಾ ಆಟಗಳ ಮಳಿಗೆಗಳನ್ನು ಉದ್ಘಾಟಿಸಿದರು.

ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಆವೆಲಿನ್ ಲೂಯಿಸ್, ಸದಸ್ಯರಾದ ಡಾ.ಪೀಟರ್ ಫೆರ್ನಾಂಡಿಸ್, ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಐ. ಕ್ರಿಸ್ಟೋಫರ್ ಕೋಟ್ಯಾನ್, ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿ ಜಾಲಿ ಜೇಕಬ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರುಗಳಾದ ಪದವಿಪೂರ್ವ ವಿಭಾಗದ ನಿತೀಶ್ ಶೆಟ್ಟಿ, ಪ್ರೌಢಶಾಲಾ ವಿಭಾಗದ ವಿಶ್ವನಾಥ ಪೂಜಾರಿ, ಪ್ರಾಥಮಿಕ ವಿಭಾಗದ ವನಿತಾ ಶೆಟ್ಟಿ ಹಾಗೂ ಕ್ರೀಡಾಕ್ಷೇತ್ರದಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸಿ ನಮ್ಮ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳಾದ ಸಿಯಾ ಅಂಚನ್, ಪ್ರಾನ್ವಿ ಎಸ್ ದೇವಾಡಿಗ, ಆಶಿ ಶೆಟ್ಟಿ, ಅಶೆಲ್ ಡಿ ಅಜೇಡ, ಅಕ್ಷಯ್ ಪ್ರಭು, ಸುಧೀಕ್ಷಾ, ಮೌಲ್ಯ, ವರುಣ್ ಕೆ ಕಾಮತ್, ಸಾನ್ವಿ ಎಂ ನಾಯಕ್, ರಿತು ಪ್ರಾನ್ಸಿಸ್, ತಾನ್ ಡಿಸೋಜ, ಅಂಕುಶ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳ ಪ್ರದರ್ಶನ, ಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ, ವಿವಿಧ ತಿಂಡಿ ತಿನಿಸುಗಳು ಹಾಗೂ ಮನೋರಂಜನಾ ಆಟಗಳ ಸ್ಟಾಲ್, ಸ್ಥಳದಲ್ಲಿಯೇ ಚಿತ್ರ ಬಿಡಿಸುವುದು ಮುಂತಾದವುಗಳು ನಡೆಯಿತು. ಮಕ್ಕಳಿಂದ ವಿವಿದ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.

ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಜೋಕ್ಷಾ ಸ್ನೇಹಲತಾ ಸ್ವಾಗತಿಸಿ, ಆಂಗ್ಲಭಾಷಾ ಶಿಕ್ಷಕಿ ಆ್ಯಲಿಸ್ ಲೋಬೊ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

























































































































error: Content is protected !!
Scroll to Top