ಕಾರ್ಕಳ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಶಾಲೆಗಳ ಬೇಡಿಕೆಗೆ ಅನುಗುಣವಾಗಿ ಅಗತ್ಯ ಸವಲತ್ತುಗಳನ್ನು ಒದಗಿಸುವ ಮೂಲಕ ಸಮಾಜಮುಖಿ ಕಾರ್ಯಗಳಿಗೆ ಲಯನ್ಸ್ ಸಂಸ್ಥೆ ಸದಾ ಸ್ಪಂದಿಸುತ್ತಿದೆ ಎಂದು ಕಾರ್ಕಳ ಲಯನ್ಸ್ ಸಿಟಿ ಕಾರ್ಯದರ್ಶಿ ನಿಹಾಲ್ ಶೆಟ್ಟಿ ಹೇಳಿದರು.
ಅವರು ಮಕ್ಕಳ ದಿನಾಚರಣೆ ಪ್ರಯುಕ್ತ ಸಾಣೂರು ಮುದ್ದಣ್ಣನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಕಳ ಲಯನ್ಸ್ ಸಿಟಿ ವತಿಯಿಂದ ಸ್ಮಾರ್ಟ್ ಪ್ರಾಜೆಕ್ಟ್ ವಿತರಿಸಿ ಮಾತನಾಡಿದರು.
ಲಯನ್ಸ್ ಕ್ಲಬ್ ಕಾರ್ಕಳ ಸಿಟಿಯ ಕೋಶಾಧಿಕಾರಿ ರಘುವೀರ್ ಉಪಸ್ಥಿತರಿದ್ದರು. ಸ್ಥಾಪಕಾಧ್ಯಕ್ಷೆ ಜ್ಯೋತಿ ರಮೇಶ್ ಮಾತನಾಡಿ, ಲಯನ್ಸ್ ಸಂಸ್ಥೆಯ ಧ್ಯೇಯೋದ್ದೇಶಗಳು ಹಾಗೂ ಸಮಾಜಮುಖಿ ಚಟುವಟಿಕೆಗಳ ಕುರಿತು ವಿವರಿಸಿದರು.

ಶಾಲಾ ಮುಖ್ಯಶಿಕ್ಷಕಿ ಗೀತಾ, ಎಸ್ಡಿಎಂಸಿ ಅಧ್ಯಕ್ಷೆ ಮಮತಾ, ಉಪಾಧ್ಯಕ್ಷೆ ರೇಖಾ, ಕರಾವಳಿನಾಡಿ ಪ್ರಧಾನ ಸಂಪಾದಕ ಬಾಲಕೃಷ್ಣ ಭೀಮಗುಳಿ, ಕರಾವಳಿನಾಡಿಯ ಸೆಲೋನಿಯಾ, ಭವ್ಯಾ, ಅಕ್ಷತ್, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಶಿಕ್ಷಕಿ ಅಕ್ಷತಾ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.




























































