ಸ್ವಯಂಚಾಲಿತ ದಾಖಲೆ ಮುದ್ರಣ ವ್ಯವಸ್ಥೆ ಅಭಿವೃದ್ಧಿ
ಮೂಡುಬಿದಿರೆ: ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿAಗ್ ಆ್ಯಂಡ್ ಟೆಕ್ನಾಲಜಿ (ಎಐಇಟಿ) ವಿದ್ಯಾರ್ಥಿಗಳ ಸ್ಟಾರ್ಟ್ಅಪ್ ಲೊರೆಂಟಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಇಲೆವೇಟ್ ಶಕ್ತಿ-2026 ಯೋಜನೆಯಡಿ 38 ಲಕ್ಷ ಅನುದಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.
ಕರ್ನಾಟಕ ಸರ್ಕಾರದ ಎಲೆಕ್ಟಾçನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ (ಕೆ-ಟೆಕ್) ಮೂಲಕ ಈ ಅನುದಾನ ಮಂಜೂರಾಗಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನಾವೀನ್ಯತೆ ಮತ್ತು ಸ್ಟಾರ್ಟ್ಅಪ್ ಇನ್ಕ್ಯುಬೇಷನ್ ಕೇಂದ್ರವಾದ ಆಳ್ವಾಸ್ ಟೆಕ್ನಾಲಜಿ ಸೆಂಟರ್ನಲ್ಲಿ ಅಭಿವೃದ್ಧಿಗೊಂಡ ಲೊರೆಂಟಾ ಟೆಕ್ನಾಲಜೀಸ್, ದೈನಂದಿನ ಬದುಕಿನಲ್ಲಿ ಎದುರಾಗುವ ದಾಖಲೆಗಳ ಮುದ್ರಣದ ಅಗತ್ಯವನ್ನು ಸರಳಗೊಳಿಸುವ ಉದ್ದೇಶದಿಂದ ಸ್ವಯಂಚಾಲಿತ ಡಾಕ್ಯುಮೆಂಟ್ ವೆಂಡಿAಗ್ ಯಂತ್ರವನ್ನು ಅಭಿವೃದ್ಧಿಪಡಿಸಿದೆ. ಪ್ರಿಂಟ್ ಪಾಯಿಂಟ್ ಎಂಬ ಬ್ರ್ಯಾಂಡ್ ಹೆಸರಿನಲ್ಲಿ ರೂಪುಗೊಂಡಿರುವ ಈ ಉತ್ಪನ್ನವು, ತಂತ್ರಜ್ಞಾನವನ್ನು ಜನಸಾಮಾನ್ಯರ ಅಗತ್ಯಕ್ಕೆ ಹತ್ತಿರವಾಗಿಸುವ ಪ್ರಯತ್ನವಾಗಿದೆ.
ಎಐಇಟಿಯ ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿAಗ್ ವಿಭಾಗದ ನಾಲ್ಕನೇ ವರ್ಷದ ವಿದ್ಯಾರ್ಥಿಗಳಾದ ರಂಜನಾ ಪ್ರಸಾದ್ ಸಿ.ಎಚ್., ಪ್ರಸನ್ನ, ಸುಹಾಸ್ ಮತ್ತು ಮನೋಜ್, ಹಾಗೂ ಡೇಟಾ ಸೈನ್ಸ್ ವಿಭಾಗದ ನಾಲ್ಕನೇ ವರ್ಷದ ವಿದ್ಯಾರ್ಥಿ ಸಮರ್ಥ್ ಜೋಶಿ ಸೇರಿ ಲೊರೆಂಟಾ ಟೆಕ್ನಾಲಜೀಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಆಳ್ವಾಸ್ ಟೆಕ್ನಾಲಜಿ ಸೆಂಟರ್
ಆಳ್ವಾಸ್ ಟೆಕ್ನಾಲಜಿ ಸೆಂಟರ್ ವಿದ್ಯಾರ್ಥಿಗಳ ನವೀನ ಆಲೋಚನೆಗಳಿಗೆ ಸೂಕ್ತ ಮಾರ್ಗದರ್ಶನ, ತಾಂತ್ರಿಕ ಬೆಂಬಲ ಮತ್ತು ಉದ್ಯಮ ಆರಂಭಿಸಲು ಅಗತ್ಯವಾದ ವೇದಿಕೆಯನ್ನು ಒದಗಿಸುತ್ತಿದೆ. ಪ್ರಸ್ತುತ ಕೇಂದ್ರದ ಮಾರ್ಗದರ್ಶನದಲ್ಲಿ 13ಕ್ಕೂ ಹೆಚ್ಚು ವಿದ್ಯಾರ್ಥಿ ಸ್ಟಾರ್ಟ್ಅಪ್ಗಳು ಮತ್ತು ಆ್ಯಪ್ಗಳು ರೂಪುಗೊಂಡಿದ್ದು, 10 ಪೂರ್ಣ ಪ್ರಮಾಣದ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ವಿದ್ಯಾರ್ಥಿಗಳು ಕೇವಲ ಉದ್ಯೋಗ ಅರಸುವವರಾಗದೆ, ತಮ್ಮದೇ ಆದ ಉದ್ಯಮಗಳನ್ನು ಸ್ಥಾಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ಯಮಿಗಳಾಗಿ ಬೆಳೆಯಬೇಕು ಎಂಬ ಆಶಯದೊಂದಿಗೆ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಕೌಶಲ, ಸಂಶೋಧನಾ ಮನೋಭಾವ ಮತ್ತು ನಾವೀನ್ಯತೆಯನ್ನು ಬೆಳೆಸಲು ಸಂಸ್ಥೆಯಲ್ಲಿ ಸುಸಜ್ಜಿತ ಎಐಸಿಟಿಇ ಐಡಿಯಾ ಲ್ಯಾಬ್, ಸರ್ಫೇಸ್ ಮೌಂಟ್ ಟೆಕ್ನಾಲಜಿ ಲ್ಯಾಬ್, ಎನ್ವಿಡಿಯಾ ಲ್ಯಾಬ್ ಹಾಗೂ ಐಬಿಎಂ ಎಐ ಲ್ಯಾಬ್ ಸೇರಿದಂತೆ ಹಲವು ಅತ್ಯಾಧುನಿಕ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಇದರೊಂದಿಗೆ ವಿವಿಧ ಕೈಗಾರಿಕಾ ಸಂಸ್ಥೆಗಳ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸಹಭಾಗಿತ್ವದಲ್ಲಿ ಇನ್ನಷ್ಟು ಪ್ರಯೋಗಾಲಯಗಳು ಮತ್ತು ತಾಂತ್ರಿಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಪ್ರಯತ್ನವೂ ಮುಂದುವರಿದಿದೆ.
ಕಳೆದ ವರ್ಷ 9 ಲಕ್ಷದ ಅನುದಾನ
ಕಳೆದ ವರ್ಷವೂ ಆಳ್ವಾಸ್ನ ವಿದ್ಯಾರ್ಥಿ ಸ್ಟಾರ್ಟ್ಅಪ್ ವಿಧ್ಸೂತ್ರ ಟೆಕ್ನಾ¯ಜೀಸ್ ಪ್ರೈವೇಟ್ ಲಿಮಿಟೆಡ್, ಮಣಿಪಾಲ್ ಯೂನಿವರ್ಸಲ್ ಟೆಕ್ನಾಲಜಿ ಬಿಸಿನೆಸ್ ಇನ್ಕ್ಯುಬೇಟರ್ (ಎಂಯುಟಿಬಿಐ), ಮಣಿಪಾಲ, ಮೂಲಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿಧಿ-ಪ್ರಯಾಸ್ ಯೋಜನೆಯಡಿ 9 ಲಕ್ಷ ಅನುದಾನ ಪಡೆದು ಸಾಧನೆ ಮಾಡಿತ್ತು.
ವಿದ್ಯಾರ್ಥಿಗಳಲ್ಲಿ ಅನೇಕ ಹೊಸ ಆಲೋಚನೆಗಳು ಮತ್ತು ಆವಿಷ್ಕಾರ ಸಾಮರ್ಥ್ಯಗಳಿರುತ್ತವೆ. ಅವುಗಳನ್ನು ಗುರುತಿಸಿ, ಕಾರ್ಯರೂಪಕ್ಕೆ ತರಲು ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹ ನೀಡುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ. ಈ ಉದ್ದೇಶದಿಂದ ಆಳ್ವಾಸ್ ಟೆಕ್ನಾಲಜಿ ಸೆಂಟರ್ ಕರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ತಮ್ಮದೇ ಆದ ಸ್ಟಾರ್ಟ್ಅಪ್ಗಳನ್ನು ಆರಂಭಿಸಲು ಇಲ್ಲಿ ಅಗತ್ಯ ಮಾರ್ಗದರ್ಶನ, ತಾಂತ್ರಿಕ ಬೆಂಬಲ, ಇನ್ಕ್ಯುಬೇಷನ್ ಸೌಲಭ್ಯ ಹಾಗೂ ಉದ್ಯಮ ಅಭಿವೃದ್ಧಿಗೆ ಪೂರಕ ವಾತಾವರಣವನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಉತ್ಪನ್ನಗಳಾಗಿ, ನ ಉದ್ಯಮಗಳಾಗಿ ರೂಪಿಸಿಕೊಳ್ಳಲು ಈ ಕೇಂದ್ರ ಅವಕಾಶ ಒದಗಿಸುತ್ತಿದೆ. ಕೇವಲ ಉದ್ಯೋಗ ಪಡೆಯುವ ಕೌಶಲ ಹೊಂದುವುದಷ್ಟೇ ಅಲ್ಲದೆ, ಹೊಸ ಮಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ಯಮಿಗಳಾಗಿ ವಿದ್ಯಾರ್ಥಿಗಳು ಬೆಳೆಯಬೇಕು ಎಂಬುದು ನಮ್ಮ ಆಶಯ: ವಿವೇಕ ಆಳ್ವ, ಟ್ರಸ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ
ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿAಗ್ ಕಾಲೇಜಿನ ಪ್ರಾಚರ್ಯ ಡಾ. ಪೀಟರ್ ಫೆರ್ನಾಂಡಿಸ್, ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿAಗ್ ವಿಭಾಗದ ಮುಖ್ಯಸ್ಥ ಡಾ. ದೇವಿದಾಸ್ ಭಟ್, ಡೇಟಾ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಅಸ್ಲಂ ನಂದ್ಯಾಲ್ ಹಾಗೂ ಆಳ್ವಾಸ್ ಉದ್ಯಮಶೀಲತೆ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥ ವೇಣು ರಾವ್ ದೇವ ಅಭಿನಂದಿಸಿದ್ದಾರೆ.




























































