ಬೆಂಗಳೂರು: ನನಗೆ ಆಶಾ ಕಾರ್ಯಕರ್ತೆಯರ ಮೇಲೆ ಕಾಳಜಿ ಇದೆ. ನನ್ನ ಮೇಲೆ ನಂಬಿಕೆ ಇಡಿ. ನಾನು ನಿಮಗೆ ಖಂಡಿತವಾಗಿಯೂ ಸಹಾಯ ಮಾಡುತ್ತೇನೆ ಎಂದು ಸಿ ಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರು ತಕ್ಷಣವೇ ಕೆಲಸಕ್ಕೆ ಮರಳುವಂತೆ ವಿನಂತಿಸಿದ್ದು, ಅವರ ಬೇಡಿಕೆಗಳ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಆದರೆ ಒತ್ತಡ ಹೇರಿ ‘ಈಗಲೇ ಸಹಿ ಮಾಡಿ ಕೊಡಿ’ ಎಂದರು ಅದು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆಶಾ ಕಾರ್ಯಕರ್ತರು ಸೇವೆ ಮಾಡಲು ಬಂದವರು, ಪ್ರತಿಭಟನೆ ನಡೆಸಲು ಬಂದವರು ಅಲ್ಲ. ದಯವಿಟ್ಟು ಕೆಲಸಕ್ಕೆ ಮರಳಿ. ನಾನು ಖಂಡಿತವಾಗಿಯೂ ನಿಮಗೆ ಸಹಾಯ ಮಾಡುತ್ತೇನೆ. ನನ್ನ ಮೇಲೆ ಭರವಸೆ ಇಡಿ ಎಂದು ಅವರು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ ಎಂದು ವಿರೋಧ ಪಕ್ಷಗಳಿಗೆ ಹೇಳಿದ್ದಾರೆ. ಸಾಧ್ಯವಾದರೆ ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರಿಗಾಗಿ ಹಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಒತ್ತಡ ಹೇರಿ ಎಂದು ನುಡಿದಿದ್ದಾರೆ.































































