ಸಚಿವರ ಮನವೊಲಿಕೆಗೆ ಬಗ್ಗದ ಆಶಾ ಕಾರ್ಯಕರ್ತರು: ಬೇಡಿಕೆ ಈಡೇರಿಕೆಗೆ ಪಟ್ಟು

ಬೆಂಗಳೂರು: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 12 ನೇ ದಿನಕ್ಕೆ ಕಾಲಿಟ್ಟಿದೆ.

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾರ್ಯಕರ್ತೆಯರ ಮನವೊಲಿಸಲು ಸಚಿವ ಯು.ಟಿ. ಖಾದರ್ ಪ್ರಯತ್ನ ನಡೆಸಿದ್ದಾರೆ.

ಸಚಿವರ ಮನವಿಗೂ ಆಶಾ ಕಾರ್ಯಕರ್ತೆಯರು ಸಮ್ಮತಿಸದೆ ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ.

ಆಶಾ ಕಾರ್ಯಕರ್ತೆಯರ ನಿಯೋಗದೊಂದಿಗೆ ಸಭೆ ನಡೆಸಿದ ಸಚಿವ ಯು.ಟಿ. ಖಾದರ್, ಕಾರ್ಯಕರ್ತೆಯರ ಬೇಡಿಕೆಗಳನ್ನು ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಸರ್ಕಾರದ ಮೇಲೆ ನಂಬಿಕೆ ಇಡುವಂತೆ ಮನವಿ ಮಾಡಿದ್ದಾರೆ. ಆದರೆ, ಸಚಿವರ ಈ ಭರವಸೆಗೆ ಆಶಾ ಕಾರ್ಯಕರ್ತೆಯರು ಒಪ್ಪಿಗೆ ಸೂಚಿಸಿಲ್ಲ.

ಕಳೆದ ಬಾರಿ ಗೌರವಧನದಲ್ಲಿ 2 ಸಾವಿರ ರೂಪಾಯಿ ಹೆಚ್ಚಳ ಮಾಡುವ ಭರವಸೆ ನೀಡಲಾಗಿತ್ತು. ಆದರೆ, ಆ ಭರವಸೆ ಇನ್ನೂ ಈಡೇರಿಲ್ಲ. ಹೀಗಿರುವಾಗ ಮತ್ತೆ ಭರವಸೆ ನೀಡಿದರೆ ನಂಬುವುದು ಹೇಗೆ ಎಂದು ಪ್ರಶ್ನಿಸಿರುವ ಕಾರ್ಯಕರ್ತೆಯರು, ಈ ಬಾರಿ ಯಾವುದೇ ಆಶ್ವಾಸನೆ ಬೇಡ, ಮಾಸಿಕ 15 ಸಾವಿರ ರೂಪಾಯಿ ಗೌರವಧನ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸಚಿವ ಯು.ಟಿ. ಖಾದರ್ ಮುಖ್ಯಮಂತ್ರಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಕೂಡ ಆಶಾ ಕಾರ್ಯಕರ್ತೆಯರ ನಿಯೋಗದೊಂದಿಗೆ ಮಾತನಾಡಿದ್ದಾರೆ. ಆದರೂ ಗೌರವಧನ ಹೆಚ್ಚಳದ ಕುರಿತು ಯಾವುದೇ ನಿರ್ದಿಷ್ಟ ಭರವಸೆ ಸಿಕ್ಕಿಲ್ಲ ಎನ್ನಲಾಗಿದೆ































































































































error: Content is protected !!
Scroll to Top