ಜಯಂತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ದುರ್ಗತೆಳ್ಳಾರು: ಜಯಂತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ದುರ್ಗತೆಳ್ಳಾರು ಇಲ್ಲಿ ವಿಜೃಂಭಣೆಯಿಂದ ನಡೆಯಿತು.

ಎಸ್‌ಡಿಎಂಸಿ ಅಧ್ಯಕ್ಷ ರಮಾನಂದ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಊರಿನ ಹಿರಿಯರು ಹಾಗೂ ಮಹಾದಾನಿ ಶ್ರೀ ಕೃಷ್ಣ ಭಟ್ ಬಲಾಜೆಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಪ್ರತಿಭಾ ಕಾರಂಜಿಯ ಸ್ಪರ್ಧೆಗಳ ಸಾಂಕೇತಿಕ ಉದ್ಘಾಟನೆಯನ್ನು ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಇಂದಿರಾ ಭಟ್ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ, ರಾಜ್ಯಮಟ್ಟದ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಧ್ಯಾಯ ಸಂಜೀವ ದೇವಾಡಿಗ ಅವರು, ಶಾಲೆಯಲ್ಲಿ ಸಭಾಂಗಣ ಸೇರಿದಂತೆ ಕೆಲವು ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೂ ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿರುವುದು ಶ್ಲಾಘನೀಯ ಎಂದರು.

SDMC ಅಧ್ಯಕ್ಷ ರಮಾನಂದ ಪೂಜಾರಿ ಮಾತನಾಡಿ, ಸತತ 3 ವರ್ಷಗಳಿಂದ ನಿರಂತರವಾಗಿ 2 ಬಾರಿ ಪ್ರತಿಭಾಕಾರಂಜಿ ಮತ್ತು ಒಂದು ಬಾರಿ ಕಲೋತ್ಸವವನ್ನು ಆಯೋಜಿಸುತ್ತಾ ಬಂದಿದ್ದೇವೆ. ಇದಕ್ಕೆ SDMC, ಪೋಷಕರು,ಶಿಕ್ಷಕವೃಂದ ಮತ್ತು ದಾನಿಗಳ ಸಹಕಾರವೇ ಕಾರಣ ಎಂದರು.

ಈ ಪ್ರತಿಭಾ ಕಾರಂಜಿಯಲ್ಲಿ 18ಕ್ಕೂ ಹೆಚ್ಚು ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಈ ಕಾರ್ಯಕ್ರಮ ಉತ್ತಮ ವೇದಿಕೆಯಾಯಿತು.

ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ್ ನಾಯಕ್, ನಿವೃತ್ತ ಮುಖ್ಯೋಪಾಧ್ಯಾಯ ಜಗದೀಶ್ ಹೆಗ್ಡೆ, ನಿವೃತ್ತ ಶಿಕ್ಷಕಿ ಪ್ರೇಮಾಬಾಯಿ ,ಎಸ್‌ಡಿಎಂಸಿ ಉಪಾಧ್ಯಕ್ಷ ಶಾಹಿನ್ ಬಾನು, ಶಾಲಾ ಮುಖ್ಯೋಪಾಧ್ಯಾಯ ಪ್ರೇಮಲತಾ ಹಾಗೂ ಸಿಆರ್‌ಪಿಗಳಾದ ನಾಗರತ್ನ, ಮಮತಾ, ಜ್ಯೋತಿ ಮತ್ತು ವಿಶ್ವನಾಥ ಪೂಜಾರಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪ್ರೇಮಲತಾ ಸ್ವಾಗತಿಸಿದರು. ಸಹ ಶಿಕ್ಷಕರಾದ ಹರೀಶ್ ನಾಯ್ಕ್ ಹಾಗೂ ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಸುನೀತಾ ವಂದಿಸಿದರು.































































































































error: Content is protected !!
Scroll to Top