ಚಳಿಗಾಲದ ಅಧಿವೇಶನಕ್ಕೂ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಚಳಿಗಾಲದ ಅಧಿವೇಶನಕ್ಕೂ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸಲು ನಾಳೆ ಇಲ್ಲವೇ ನಾಡಿದ್ದು ದೆಹಲಿಗೆ ತೆರಳುವ ಸಾಧ್ಯತೆಯಿದೆ.

ಪ್ರಸ್ತುತ ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಇಲ್ಲದಿರುವುದರಿಂದ, ಖಾಲಿ ಇರುವ ಎರಡು ಸ್ಥಾನಗಳ ಪೈಕಿ ಒಂದನ್ನು ಮಹಿಳೆಗೆ ನೀಡುವ ಪ್ರಸ್ತಾವನೆಯನ್ನು ಸಿಎಂ ಮುಂದಿಡಲಿದ್ದಾರೆ ಎನ್ನಲಾಗಿದೆ. ಈ ಸ್ಥಾನಕ್ಕೆ ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್‌ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.

ಇನ್ನೊಂದು ಸ್ಥಾನಕ್ಕಾಗಿ ಶಾಸಕರ ನಡುವೆ ಪೈಪೋಟಿ ಆರಂಭವಾಗಿದೆ. ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರೆ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವ‌ರ್ ಪರವಾಗಿಯೂ ಲಾಬಿ ನಡೆಯುತ್ತಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಒಂದು ಸ್ಥಾನವನ್ನು ಮಹಿಳೆಗೆ, ಮತ್ತೊಂದನ್ನು ಹಿಂದುಳಿದ ವರ್ಗದವರಿಗೆ ನೀಡುವಂತೆ ಅಭಿಪ್ರಾಯಪಟ್ಟಿದ್ದಾರೆ.































































































































error: Content is protected !!
Scroll to Top