Author name: News desk

ಗುಣಪಾಲ ಹೆಗ್ಡೆಯವರಿಗೆ ಶಿರ್ಲಾಲು ಸೂಡಿ ಬಸದಿಯಲ್ಲಿ ಹುಟ್ಟೂರ ಸನ್ಮಾನ

ಕಾರ್ಕಳ : ಶಿರ್ಲಾಲು ಸೂಡಿ 1008 ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಪೂರ್ವಕ ನೂತನ ಬಸದಿಯ ಜಿನಬಿಂಬ ಪ್ರತಿಷ್ಠಾ ಮಹೋತ್ಸವದಲ್ಲಿ ಬೆಳಗಾವಿಯ ಉದ್ಯಮಿ, ಶಿರ್ಲಾಲು ಬಿ. ಗುಣಪಾಲ ಹೆಗ್ಡೆಯವರನ್ನು ಸನ್ಮಾನಿಸಲಾಯಿತು. 108 ಶ್ರೀ ಅಮೋಘ ಕೀರ್ತಿ ಮುನಿ ಮಹಾರಾಜರು, 108 ಶ್ರೀ ಅಮರ ಕೀರ್ತಿ ಮುನಿ ಮಹಾರಾಜರ ಪಾವನ ಸಾನ್ನಿಧ್ಯ ಹೊಂದಿದ್ದರು. ಈ ಸಂದರ್ಭ ಶಾಸಕ ವಿ.ಸುನಿಲ್ ಕುಮಾರ್ ಹಾಗೂ ಬಸದಿಯ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಗುಣಪಾಲ ಹೆಗ್ಡೆಯವರಿಗೆ ಶಿರ್ಲಾಲು ಸೂಡಿ ಬಸದಿಯಲ್ಲಿ ಹುಟ್ಟೂರ ಸನ್ಮಾನ Read More »

ಫೆ.18 ರಂದು ಆಶಾಕಿರಣ ಯೋಜನೆಗೆ ಸಿಎಂ ಚಾಲನೆ

ದೃಷ್ಟಿದೋಷ ಹೊಂದಿರುವ 2.45 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಆಶಾಕಿರಣ ಯೋಜನೆ ಸಿಎಂ ಸಿದ್ಧರಾಮಯ್ಯ ನಾಳೆ ಫೆ.18 ರಂದು ಹಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಶಾಕಿರಣ ಯೋಜನೆಯಡಿ ಈಗಾಗಲೇ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದ್ದು, ದೃಷ್ಟಿದೋಷ ಹೊಂದಿರುವ 2.45 ಲಕ್ಷ ಜನರಿಗೆ ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಉಚಿತವಾಗಿ

ಫೆ.18 ರಂದು ಆಶಾಕಿರಣ ಯೋಜನೆಗೆ ಸಿಎಂ ಚಾಲನೆ Read More »

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 9 ಕೋಟಿ ಮೌಲ್ಯದ ಕೊಕೇನ್‌, 920 ಗ್ರಾಂ ಡ್ರಗ್ಸ್ ವಶ

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ವಲಯದ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವೆನಿಜುವೆಲಾ ಮೂಲದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು 9 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಆರೋಪಿಯು ಫೆ. 9ರಂದು ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದಾಗ ಆತನನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಬಂದಿದ್ದ 40 ವರ್ಷದ ಪ್ರಯಾಣಿಕನ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆತನ ಹೊಟ್ಟೆಯಲ್ಲಿ ಕೊಕೇನ್ ಇರುವುದು ಪತ್ತೆಯಾಗಿದೆ. ನಂತರ 920 ಗ್ರಾಂ ಕೊಕೇನ್ 91

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 9 ಕೋಟಿ ಮೌಲ್ಯದ ಕೊಕೇನ್‌, 920 ಗ್ರಾಂ ಡ್ರಗ್ಸ್ ವಶ Read More »

ಕರಾವಳಿಗೆ ಆದ್ಯತೆ ನೀಡದ ಬಜೆಟ್ – ಸುನಿಲ್ ಕುಮಾರ್

ಕಾರ್ಕಳ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಕಂಡ ಕೆಟ್ಟ ಬಜೆಟ್ ಆಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿಲ್ಲ. ಬಜೆಟ್ ಪೂರ್ತಿ ಸುಳ್ಳುಗಳೇ ತುಂಬಿದ್ದು, ಮುಗ್ಗರಿಸುತ್ತಿರುವ ರಾಜ್ಯದ ಆರ್ಥಿಕತೆಯ ಪ್ರತಿಬಿಂಬ ಇದಾಗಿದೆ.ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಬಜೆಟ್ ನಲ್ಲಿ ಅವಕಾಶ ಕಲ್ಪಿಸುತ್ತೇನೆ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಕೈ ಕೊಟ್ಟಿದ್ದಾರೆ. ಬ್ರಹ್ಮರ್ಷಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಒಂದು ರೂ. ಅನುದಾನವನ್ನೂ ನೀಡಿಲ್ಲ. ಪಶ್ಚಿಮ ವಾಹಿನಿ ಸೇರಿದಂತೆ ನೀರಾವರಿ ಯೋಜನೆಗಳಿಗೆ

ಕರಾವಳಿಗೆ ಆದ್ಯತೆ ನೀಡದ ಬಜೆಟ್ – ಸುನಿಲ್ ಕುಮಾರ್ Read More »

ಫೆ. 13-21 : ಹೆಬ್ರಿ ಕಜ್ಕೆ ಮಠದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

ಶಿಲಾಬಿಂಬ ಪ್ರತಿಷ್ಠೆ : ಮಹಾಕುಂಭಾಭಿಷೇಕ ಶಿಲ್ಪಿ ಅರುಣ್‌ ಯೋಗಿರಾಜ್‌ರಿಂದ ಶ್ರೀಅನ್ನಪೂರ್ಣೇಶ್ವರಿ ದೇವಿಯ ಶಿಲಾ ವಿಗ್ರಹ ರಚನೆ ಹೆಬ್ರಿ : ಸುತ್ತಲೂ ಅರಣ್ಯ ಪ್ರದೇಶವನ್ನು ಆವರಿಸಿರುವ ಕಜ್ಕೆಯಲ್ಲಿ ಆದಿಶಂಕರಾಚಾರ್ಯರು ಕಾಲ್ನಡಿಗೆಯಲ್ಲಿ ಕೊಲ್ಲೂರಿಗೆ ಸಂಚರಿಸುವಾಗ ಮಧ್ಯಾಹ್ನದ ಹೊತ್ತು ಈ ಸುಂದರವಾದ ಪುಣ್ಯಭೂಮಿಯಲ್ಲಿ ಭಿಕ್ಕಷೆ ಪಡೆದಿದ್ದರು ಎನ್ನುವ ಪ್ರತೀತಿ ಇದೆ. ಸಹಸ್ರಾರು ವರುಷಗಳಿಂದ ಭೂಗತವಾಗಿದ್ದ ಈ ಸ್ಥಳವು, ಪ್ರಸ್ತುತ ಕೃಷ್ಣಯ್ಯ ಶೆಟ್ಟಿ ಮತ್ತು ಶ್ರೀಧರ ಕಾಮತ್‌ ಎಂಬವರು ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಎರಡು ಎಕರೆ ಜಾಗವನ್ನು ದಾನವಾಗಿ ನೀಡಿರುತ್ತಾರೆ. ಶ್ರೀ ವಿಶ್ವಕರ್ಮ

ಫೆ. 13-21 : ಹೆಬ್ರಿ ಕಜ್ಕೆ ಮಠದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಶಿಲಾಮಯ ದೇವಸ್ಥಾನ ಲೋಕಾರ್ಪಣೆ Read More »

ಐದು ಗಂಟೆಗಳ ಕಾಲ ನಡೆದ ಮೂರನೇ ಸುತ್ತಿನ ಮಾತುಕತೆ ; ಕೇಂದ್ರ ಮತ್ತು ರೈತರ ನಡುವೆ ಮೂಡಿಲ್ಲ ಒಮ್ಮತ

ಚಂಡೀಗಢ : ಚಂಡೀಗಢದಲ್ಲಿ ಕೇಂದ್ರ ಸಚಿವರು ಮತ್ತು ರೈತ ಮುಖಂಡರ ನಡುವೆ ಗುರುವಾರ ಸಂಜೆ ಸುಮಾರು 5 ಗಂಟೆಗಳ ಕಾಲ ಮಾತುಕತೆ ನಡೆದಿದ್ದು ಒಮ್ಮತ ಮೂಡಿಲ್ಲ. ಹಲವು ಅಂಶಗಳ ಬಗ್ಗೆ ಮಾತುಕತೆಗಳನ್ನು ಮುಂದಕ್ಕೆ ಕೊಂಡೊಯ್ಯುವ ಸೂಚನೆಗಳು ಕಂಡುಬಂದಿದ್ದು ಮಾತುಕತೆಗಳು ಸಕಾರಾತ್ಮಕವಾಗಿವೆ ಎಂದು ಹೇಳಲಾಗಿದೆ. ಫೆ. 18 ಭಾನುವಾರ ಮತ್ತೊಂದು ಸಭೆ ನಡೆಯಲಿದೆ. ಭಾನುವಾರದ ಸಭೆಯವರೆಗೂ ರೈತರು ಶಂಭು ಗಡಿಯಲ್ಲಿ ಮುಂದೆ ಹೋಗುವುದಿಲ್ಲ. ಅದೇ ಸಮಯದಲ್ಲಿ, ಹರಿಯಾಣ ಪೊಲೀಸರು ಮತ್ತು ಅರೆಸೇನಾ ಪಡೆ ಕೂಡ ಕದನ ವಿರಾಮಕ್ಕೆ ಒಪ್ಪಿಗೆ

ಐದು ಗಂಟೆಗಳ ಕಾಲ ನಡೆದ ಮೂರನೇ ಸುತ್ತಿನ ಮಾತುಕತೆ ; ಕೇಂದ್ರ ಮತ್ತು ರೈತರ ನಡುವೆ ಮೂಡಿಲ್ಲ ಒಮ್ಮತ Read More »

ಇಂದು ಗ್ರಾಮೀಣ ಭಾರತ್ ಬಂದ್ : ಕರ್ನಾಟಕದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಬಂದ್‌ಗೆ ಕರೆ

ಬೆಂಗಳೂರು : ದೇಶಾದ್ಯಂತ ರೈತರ ಸಾಲಮನ್ನಾ, ರೈತರು, ಕೃಷಿ ಕಾರ್ಮಿಕರಿಗೆ ಪಿಂಚಣಿ, ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಭದ್ರತೆ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ದೆಹಲಿ ಚಲೋ ನಡೆಸ್ತಿದ್ದಾರೆ. ಹರಿಯಾಣದ ಶಂಭು ಗಡಿಯಲ್ಲಿ ಠಿಕಾಣಿ ಹೂಡಿರೋ ರೈತರು ಯಾವುದೇ ಕಾರಣಕ್ಕೂ ಹಿಂದೆ ಸರಿಯೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ರೈತರ ಮನವೊಲಿಸಲು ಕೇಂದ್ರ ಸರ್ಕಾರ ಸಭೆ ಮೇಲೆ ಸಭೆ ಮಾಡುತ್ತಾ ಕಸರತ್ತು ನಡೆಸ್ತಿದೆ. ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹೊತ್ತಲ್ಲೇ ಇಂದು ದೇಶಾದ್ಯಂತ ಗ್ರಾಮೀಣ

ಇಂದು ಗ್ರಾಮೀಣ ಭಾರತ್ ಬಂದ್ : ಕರ್ನಾಟಕದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಬಂದ್‌ಗೆ ಕರೆ Read More »

ಅಲಿಪುರ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 11 ಮಂದಿ ಸಾವು

ದೆಹಲಿ : ಅಲಿಪುರದಲ್ಲಿರುವ ರಾಸಾಯನಿಕ ಗೋದಾಮುಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 11 ಜನರು ಸಾವನ್ನಪ್ಪಿದ್ದಾರೆ ಮತ್ತು 4 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ಮತ್ತು ನಾಲ್ವರು ಗಾಯಾಳುಗಳನ್ನು ರಾಜಾ ಹರಿಶ್ಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಫೆ. 15ರಂದು ದೆಹಲಿಯ ಅಲಿಪೋರ್‌ನಲ್ಲಿರುವ ಪೇಂಟ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಬೆಂಕಿ ಕಾಣಿಸಿಕೊಂಡಿತ್ತು. ಈ ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರ ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅವರನ್ನು ಗುರುತಿಸುವುದೂ ಕಷ್ಟವಾಗುತ್ತಿದೆ.

ಅಲಿಪುರ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 11 ಮಂದಿ ಸಾವು Read More »

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪುಲ್ವಾಮ ಹುತಾತ್ಮ ಯೋಧರಿಗೆ ನಮನ

ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪುಲ್ವಮಾ ಹುತಾತ್ಮ ಯೋಧರಿಗೆ ಫೆ. 14ರ ರಾತ್ರಿ ಸರ್ವಜ್ಞ ವೃತ್ತ ಬಳಿ ವೀರ ನಮನ ಅರ್ಪಿಸಲಾಯಿತು. ಮಂಗಳೂರು ವಿಭಾಗ ಸಂಘಟನ ಕಾರ್ಯದರ್ಶಿ ಶ್ರೀರಾಮ್ ಅಂಗಿರಸರವರು ಮಾತನಾಡಿ, ಯೋಧರು ತಮ್ಮ ಕುಟುಂಬವನ್ನು ಬಿಟ್ಟು ದೇಶವನ್ನು ರಕ್ಷಣೆ ಮಾಡುತ್ತಾರೆ. ಆದರೆ ಸಮಾಜವನ್ನು ಯುವಕರು ರಕ್ಷಣೆ ಮಾಡುವ ಕಾರ್ಯವನ್ನು ಮಾಡಬೇಕೆಂದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಗಣೇಶ್ ಪೂಜಾರಿ, ತಾಲೂಕು ಸಂಚಾಲಕ ಶ್ರೇಯಸ್ ಅಂಚನ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಪವನ್ ಕುಲಾಲ್,

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪುಲ್ವಾಮ ಹುತಾತ್ಮ ಯೋಧರಿಗೆ ನಮನ Read More »

ಫೆ. 18 : ನೀರೆ ಬೈಲೂರು ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ 41ನೇ ವಾರ್ಷಿಕ ಮಹಾಸಭೆ

ಯಕ್ಷ ಸಾಂಗತ್ಯ ಮಿತ್ರ ಮಂಡಳಿಯಿಂದ ಮಹಿಷ ಮರ್ದಿನಿ ಯಕ್ಷಗಾನ ಬೈಲೂರು : ನೀರೆ ಬೈಲೂರು ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ 41ನೇ ವಾರ್ಷಿಕ ಮಹಾಸಭೆ ಫೆ. 18ರಂದು ಮಧ್ಯಾಹ್ನ 2ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿರುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಎಸ್. ದಿನೇಶ್ ಆಚಾರ್ಯ ವಹಿಸಲಿದ್ದು, ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು, ಕಟಪಾಡಿ ವೇಣುಗಿರಿ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನ ಆಡಳಿತ

ಫೆ. 18 : ನೀರೆ ಬೈಲೂರು ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ 41ನೇ ವಾರ್ಷಿಕ ಮಹಾಸಭೆ Read More »

error: Content is protected !!
Scroll to Top