ಜೂ. 23 : ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಾರ್ಕಳ ಕ್ಷೇತ್ರದ ಗ್ರಾ. ಪಂ. ಮುಂಭಾಗ ಏಕಕಾಲದಲ್ಲಿ ಧರಣಿ ಸತ್ಯಾಗ್ರಹ
ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಆಡಳಿತಕ್ಕೆ ಬಂದು ಎರಡು ವರ್ಷಗಳಾಗಿದ್ದು, ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಜನವಿರೋಧಿ ನೀತಿಗಳಿಂದಲೇ ಗುರುತಿಸಿಕೊಂಡಿದೆ. ಅದರಲ್ಲಿಯೂ ಕರಾವಳಿ ಜಿಲ್ಲೆಗಳನ್ನು ರಾಜ್ಯ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಇದರ ವತಿಯಿಂದ ಸರಕಾರದ ಈ ಜನವಿರೋಧಿ ನೀತಿಯನ್ನು ಖಂಡಿಸಿ ಈಗಾಗಲೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಜನರನ್ನು ಸೇರಿಸಿ ಕಾರ್ಕಳ ತಾಲೂಕು ಕಚೇರಿ ಮುಂಭಾಗ ಒಂದು ಬೃಹತ್ ಪ್ರತಿಭಟನೆಯನ್ನು ಮಾಡಿ ಎಚ್ಚರಿಕೆಯನ್ನು ನೀಡಲಾಗಿತ್ತು. ಆದರೆ, ಈ ಲಜ್ಜೆಗೆಟ್ಟ



