• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಕರಾವಳಿ ಪ್ರತ್ಯೇಕ ರಾಜ್ಯ : ಚರ್ಚೆಗೆ ಗ್ರಾಸವಾದ ಹರೀಶ್‌ ಪೂಂಜ ಹೇಳಿಕೆ

ಬೆಂಗಳೂರು : ವಿಧಾನ ಮಂಡಲ ಕಲಾಪದಲ್ಲಿ ನಿನ್ನೆ ಕರಾವಳಿಯ ಅಭಿವೃದ್ಧಿ ಕುರಿತು ಚರ್ಚೆ ನಡೆಯುತ್ತಿರುವ ವೇಳೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಪ್ರತ್ಯೇಕ ರಾಜ್ಯದ ಕುರಿತು ಪರೋಕ್ಷವಾಗಿ ಮಾಡಿದ ಉಲ್ಲೇಖ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.ಕರವಾಳಿ ಭಾಗದ ಶಾಸಕರು ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ನಿನ್ನೆ ಕರಾವಳಿ ಜಿಲ್ಲೆಗಳು ಅಭಿವೃದ್ಧಿಯಲ್ಲಿ ಹಿಂದುಳಿದ ಕುರಿತು ಮಾತನಾಡಿದ್ದಾರೆ. ಅಭಿವೃದ್ಧಿಗೆ ಅಪಾರವಾದ ಅವಕಾಶಗಳಿದ್ದರೂ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಶಾಸಕರು ಒಕ್ಕೂರಲಿನಿಂದ ಹೇಳಿದ್ದಾರೆ. ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು

ಕರಾವಳಿ ಪ್ರತ್ಯೇಕ ರಾಜ್ಯ : ಚರ್ಚೆಗೆ ಗ್ರಾಸವಾದ ಹರೀಶ್‌ ಪೂಂಜ ಹೇಳಿಕೆ Read More »

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ?

ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸಲು ಸಚಿವ ಜಮೀರ್‌ ಸೂಚನೆ ಬೆಂಗಳೂರು : ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರಿಗೆ ಸರಕಾರಿ ಗುತ್ತಿಗೆಯಲ್ಲಿ ಶೇ. 4ರ ಮೀಸಲಾತಿ ಒದಗಿಸಲು ಅವಕಾಶ ಮಾಡಿಕೊಟ್ಟ ಬೆನ್ನಲ್ಲೆ ಈಗ ಈ ಮೀಸಲಾತಿಯನ್ನು ಶೇ. 10ಕ್ಕೆ ಹೆಚ್ಚಸಲು ಸದ್ದಿಲ್ಲದೆ ಪ್ರಯತ್ನ ನಡೆದಿದೆ. ಮುಸ್ಲಿಮರಿಗೆ ಸರಕಾರಿ ಗುತ್ತಿಗೆಯಲ್ಲಿ ಶೇ. 4 ಮೀಸಲಾತಿ ಘೋಷಣೆಯಾದ ಬೆನ್ನಲ್ಲೆ ಈಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ. 10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ? Read More »

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ

ಪಕ್ಷದ ಕಾರ್ಯಕರ್ತರಿಗಾಗಿ ಖಜಾನೆ ಲೂಟಿ ಮಾಡಬೇಡಿ; ಕೆಪಿಸಿಸಿ ಹಣ ಕೊಡಿ ಎಂದು ಆಗ್ರಹ ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆ ಸಮಿತಿಗಳನ್ನು ರಚಿಸಿ, ಅವುಗಳಿಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಪ್ರತಿ ತಿಂಗಳು ಸಾವಿರಗಟ್ಟಲೆ ಸಂಬಳ ಕೊಡುತ್ತಿರುವ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷ ಬಿಜೆಪಿ-ಜೆಡಿಎಸ್‌ ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಹೋರಾಟ ಶುರು ಮಾಡಿದೆ. ಸದನದ ಹೊರಗೂ ಇಂದು ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ.ಗ್ಯಾರಂಟಿ ಅನುಷ್ಠಾನ

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಸಂಚಲನ ಹುಟ್ಟಿಸಿದ ಸುನಿಲ್‌ ಕುಮಾರ್‌ ಪ್ರಶ್ನೆ

ಚಿನ್ನ ಸದಾಶಿವ ನಗರಕ್ಕೆ ಹೋಗಿದೆಯಾ? ಚಾಮರಾಜ ಪೇಟೆಗೆ ಹೋಗಿದೆಯಾ ಹೇಳಿಕೆಯಿಂದ ಸಚಿವರಿಗೆ ಕಸಿವಿಸಿ ಬೆಂಗಳೂರು : ಚಿತ್ರನಟಿ ರನ್ಯಾ ರಾವ್ ಶಾಮೀಲಾಗಿರುವ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಶಾಸಕ ಸುನಿಲ್‌ ಕುಮಾರ್‌ ನೀಡಿದ ಹೇಳಿಕೆ ಸಂಚಲನ ಹುಟ್ಟಿಸಿದೆ. ಈ ಹೇಳಿಕೆಗೆ ಹಲವು ಸಚಿವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಜೊತೆಗೆ ಮಾತನಾಡುವಾಗ ಸುನಿಲ್‌ ಕುಮಾರ್‌ ನಟಿ ರನ್ಯಾ ರಾವ್‌ ತಂದ ಚಿನ್ನ ಎಲ್ಲಿಗೆ ಹೋಗಿದೆ ಸದಾಶಿವ ನಗರಕ್ಕೆ ಹೋಗಿದೆಯಾ ಅಥವಾ ಚಾಮರಾಜ ಪೇಟೆಗೆ ಹೋಗಿದೆಯಾ ಎಂಬುದರ ಬಗ್ಗೆ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಸಂಚಲನ ಹುಟ್ಟಿಸಿದ ಸುನಿಲ್‌ ಕುಮಾರ್‌ ಪ್ರಶ್ನೆ Read More »

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ

ಸಿದ್ದರಾಮಯ್ಯನವರ ದಾಖಲೆಯ 16ನೇ ಮುಂಗಡಪತ್ರ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಲಿರುವ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. 2025ನೇ ಸಾಲಿನ ಕರ್ನಾಟಕ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಸಿದ್ದರಾಮಯ್ಯನವರು ಬೆಳಗ್ಗೆ 9.30ಕ್ಕೆ ಸಚಿವ ಸಂಪುಟ ನಡೆಸಲಿದ್ದು, ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. ಬಳಿಕ ಬೆಳಗ್ಗೆ 10.30ಗೆ ಬಜೆಟ್​ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ತಮ್ಮ ದಾಖಲೆಯನ್ನೇ ಮುರಿದು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಮಂಡಿನೋವಿನ ಕಾರಣದಿಂದ ನಿಂತು ಬಜೆಟ್ ಮಂಡಿಸುವ ಬದಲು ಕುಳಿತು

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ Read More »

ಕಾಂಗ್ರೆಸ್‌ ಕುಟುಂಬೋತ್ಸವದಲ್ಲಿ ದಿ. ಗೋಪಾಲ್ ಭಂಡಾರಿ ಅವರಿಗೆ ಅವಮಾನ – ಸುರೇಶ್ ಶೆಟ್ಟಿ ಶಿವಪುರ

ಡಿ.ಕೆ.ಶಿ. ಮುಂದಿನ ಮುಖ್ಯಮಂತ್ರಿಯೆಂದು ಬಿಂಬಿಸಲು ಕಾರ್ಕಳದಲ್ಲಿ ಸಮಾವೇಶವೇ ? ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾ. 2ರಂದು ನಡೆದ ಕುಟುಂಬೋತ್ಸವ ಸಮಾವೇಶದ ವೇದಿಕೆಯಲ್ಲಿ ಹಾಗೂ ಕಾರ್ಯಕ್ರಮದ ಪ್ರಚಾರ ಫಲಕಗಳಲ್ಲಿ ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ್ ಭಂಡಾರಿಯವರ ಫೋಟೋ ಅಳವಡಿಸದೇ ಕಾರ್ಕಳ ಕಾಂಗ್ರೆಸ್ ಭಂಡಾರಿ ಅವರಿಗೆ ಅವಮಾನ ಮಾಡಿದೆ ಎಂದು ಬಿಜೆಪಿ ಕಾರ್ಕಳ ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿವಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿಂಬಾಲಕರಿಗೆ ಮಾತ್ರ ಪ್ರಾಶಸ್ತ್ಯಒಂದು ಸಂದರ್ಭದಲ್ಲಿ ಕಾರ್ಕಳದಲ್ಲಿ ಕಾಂಗ್ರೆಸ್ಸನ್ನು

ಕಾಂಗ್ರೆಸ್‌ ಕುಟುಂಬೋತ್ಸವದಲ್ಲಿ ದಿ. ಗೋಪಾಲ್ ಭಂಡಾರಿ ಅವರಿಗೆ ಅವಮಾನ – ಸುರೇಶ್ ಶೆಟ್ಟಿ ಶಿವಪುರ Read More »

ಮುಂಡ್ಲಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಘಟನೆಯನ್ನು ಸದನದಲ್ಲಿ ಪ್ರಸ್ತಾಪಿಸಿದ ಸುನಿಲ್‌ ಕುಮಾರ್‌

ಸ್ಪೀಕರ್‌ ಖಾದರ್‌ ಬೆಂಬಲ : ಸರಕಾರದಿಂದ ನಿಯಮ ಸರಳ ಮಾಡುವ ಭರವಸೆ ಬೆಂಗಳೂರು : ಕಾರ್ಕಳದ ಮುಂಡ್ಲಿಯಲ್ಲಿ ಕಳೆದ ಜ. 14ರಂದು ಪೊಲೀಸರು ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಪಡಿಸಿ ಅರ್ಧಕ್ಕೆ ಮೊಟಕುಗೊಳಿಸಿ ಆಯೋಜಕರ ಮೇಲೆ ಕೇಸ್‌ ದಾಖಲಿಸಿದ ಪ್ರಕರಣವನ್ನು ನಿನ್ನೆ ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌ ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕಿರುವ ನಿಯಮಗಳನ್ನು ಸರಳಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.ಗಮನ ಸೆಳೆಯುವ ಸೂಚನೆ ವೇಳೆ ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಯಕ್ಷಗಾನ ಪ್ರದರ್ಶನಗಳನ್ನು ನಿಲ್ಲಿಸಿ

ಮುಂಡ್ಲಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಘಟನೆಯನ್ನು ಸದನದಲ್ಲಿ ಪ್ರಸ್ತಾಪಿಸಿದ ಸುನಿಲ್‌ ಕುಮಾರ್‌ Read More »

ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಫೈಟ್‌ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಅದರಲ್ಲೂ ಭಾನುವಾರ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್‌ನ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಕಾಂಗ್ರೆಸ್‌ನೊಳಗೆ ತಳಮಳಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.ಭಾನುವಾರ ಡಿ.ಕೆ ಶಿವಕುಮಾರ್ ಭಾಗವಹಿಸಿದ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಅವರ ಎದುರೇ ಮೊಯ್ಲಿಯವರು ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದರು. ಈ ಹೇಳಿಕೆ

ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು Read More »

ಉದ್ಯಮಿಯನ್ನು ಅಪಹರಿಸಿ 5 ಕೋ.ರೂ. ಸುಲಿಗೆ ಯತ್ನ: ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಬಂಧನ

ಗೋಕಾಕ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ಪ್ರಕರಣದ ಸೂತ್ರಧಾರಿ ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಆಪ್ತೆ, ರಾಮಗನಟ್ಟಿ ಗೋಕಾಕ್ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ಉದ್ಯಮಿಯನ್ನು ಅಪಹರಿಸಿ 5 ಕೋ.ರೂ. ಸುಲಿಗೆ ಯತ್ನ: ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಬಂಧನ Read More »

ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದ ವೀರಪ್ಪ ಮೊಯ್ಲಿ ಹೇಳಿಕೆ

ಡಿಕೆಶಿ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಹೇಳಿಕೆಗೆ ನಾನಾ ಬಣ್ಣ ಕಾರ್ಕಳ : ಮುಖ್ಯಮಂತ್ರಿ ಹುದ್ದೆಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್‌ ಬಣಗಳ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆಯೇ ನಿನ್ನೆ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಭಾರಿ ಸಂಚಲನ ಉಂಟುಮಾಡಿದೆ. ರಾಜಕೀಯ ವಲಯದಲ್ಲಿ ಈ ಹೇಳಿಕೆಗೆ ನಾನಾ ರೀತಿಯ ಬಣ್ಣ ಬಳಿದು ವಿಶ್ಲೇಷಿಸಲಾಗುತ್ತಿದೆ.ಕಾರ್ಕಳದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ವೀರಪ್ಪ ಮೊಯ್ಲಿಯವರು ಡಿ.ಕೆ.

ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದ ವೀರಪ್ಪ ಮೊಯ್ಲಿ ಹೇಳಿಕೆ Read More »

error: Content is protected !!
Scroll to Top