ಜೂ.27ರಿಂದಲೇ ಗೃಹಲಕ್ಷ್ಮೀ ಅರ್ಜಿ ಪ್ರಕ್ರಿಯೆ ಆರಂಭ : ಆಗಸ್ಟ್ ತಿಂಗಳಲ್ಲಿ ಮನೆ ಯಜಮಾನಿ ಖಾತೆಗೆ ಹಣ -ಲಕ್ಷ್ಮೀ ಹೆಬ್ಬಾಳ್ಕರ್
ಮೈಸೂರು : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ಬರುತ್ತದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಅವರು ಜೂ. 24ರಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್








