ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ – 16 ಹೊಸಮುಖಗಳಿಗೆ ಅವಕಾಶ
ಕಾರ್ಕಳ : ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, ಈಗಾಗಲೇ ಮೊದಲ ಪಟ್ಟಿಯಲ್ಲಿ 124 ಹಾಗೂ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್ ಈಗ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, ಇನ್ನು 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ. 16 ಹೊಸಮುಖಗಳಿಗೆ ಅವಕಾಶ ನೀಡಲಾಗಿದ್ದು, ಕೋಲಾರ ಕ್ಷೇತ್ರದಿಂದ ಭಾರೀ ನಿರೀಕ್ಷೆ ಹುಟ್ಟಿಸಿದ್ದ ಸಿದ್ಧರಾಮಯ್ಯ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿಲ್ಲ. ಕೋಲಾರದಿಂದ ಕೊತ್ತೂರು ಜಿ ಮಂಜುನಾಥ್‌ಗೆ ಟಿಕೆಟ್ ನೀಡಲಾಗಿದೆ.
ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ – 16 ಹೊಸಮುಖಗಳಿಗೆ ಅವಕಾಶ Read More »









