ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ರಾಜೀನಾಮೆ ಸಲ್ಲಿಕೆಗೂ ಮುನ್ನ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ ‘ಬ್ರೇಕ್ಫಾಸ್ಟ್ ಮೀಟಿಂಗ್’ ನಡೆದಿದ್ದು, ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಸಚಿವರಿಗೆ ಖುದ್ದಾಗಿ ಸಿದ್ದರಾಮಯ್ಯ ತಿಳಿಸಿದ್ದರು.
ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ Read More »










