• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಉಡುಪಿ-ಅಂಚೆ ಜೀವ ವಿಮೆ; ಉದ್ಯೋಗಾವಕಾಶ

ಉಡುಪಿ: ಅಂಚೆ ಜೀವವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನವು ಆ.19ರ ಬೆಳಗ್ಗೆ 10.15 ಕ್ಕೆ ಉಡುಪಿಯ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ. ಆಸಕ್ತ ಎಸೆಸೆಲ್ಸಿ ಉತ್ತೀರ್ಣರಾದ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಮಾಹಿತಿಗೆ ಸಮೀಪದ ಅಂಚೆ ಕಚೇರಿ ಅಥವಾ ಉಡುಪಿ ಅಂಚೆ ವಿಭಾಗದ ಅಂಚೆ ಜೀವವಿಮೆ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸುವಂತೆ ಅಂಚೆ ಅಧೀಕ್ಷಕರ ಕಚೇರಿ

ಉಡುಪಿ-ಅಂಚೆ ಜೀವ ವಿಮೆ; ಉದ್ಯೋಗಾವಕಾಶ Read More »

ಪಶ್ಚಿಮ ಘಟ್ಟದ 1,269 ಗ್ರಾಮಗಳ ಮೇಲೆ ಮತ್ತೆ ತೂಗುಗತ್ತಿ.!

ಕಸ್ತೂರಿ ರಂಗನ್ ವರದಿ: 7ನೇ ಕರಡು ಅಧಿಸೂಚನೆ ಪ್ರಕಟ ಸುಳ್ಯ: ಪಶ್ಚಿಮ ಘಟ್ಟಗಳ ಸಂರಕ್ಷಣೆ ಹೆಸರಿನಲ್ಲಿ ಕಳೆದ ಒಂದು ದಶಕದಿಂದ ಚರ್ಚೆಯಲ್ಲಿರುವ ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ ಬಂದಿದೆ. ಪರಿಸರ ಸೂಕ್ಷ್ಮ ವಲಯ (ಇಎಸ್‌ಎ) ಘೋಷಣೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 7ನೇ ಕರಡು ಅಧಿಸೂಚನೆ ಪ್ರಕಟಿಸಿದ್ದು, ಪಶ್ಚಿಮ ಘಟ್ಟ ವ್ಯಾಪ್ತಿಯ ಕರ್ನಾಟಕದ 7 ಜಿಲ್ಲೆಗಳ 1,269 ಗ್ರಾಮಗಳು ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವಾಗಿವೆ. ಹೊಸ ಕರಡು ಅಧಿಸೂಚನೆಯಲ್ಲಿ ದಕ್ಷಿಣ ಕನ್ನಡ

ಪಶ್ಚಿಮ ಘಟ್ಟದ 1,269 ಗ್ರಾಮಗಳ ಮೇಲೆ ಮತ್ತೆ ತೂಗುಗತ್ತಿ.! Read More »

ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಮಳೆ ಅಲರ್ಟ್ ಘೋಷಿಸಿದೆ. ಇಂದಿನ ಮಳೆ ಮುನ್ಸೂಚನೆಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಇದರೊಂದಿಗೆ ಮಲೆನಾಡು ಭಾಗದ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಭಾರಿ ಮಳೆಯ ಮುನ್ನೆಚ್ಚರಿಕೆಯಾಗಿ ಆರೆಂಜ್

ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್ Read More »

ಉಡುಪಿ ಜಿಲ್ಲೆಯಲ್ಲಿ 4691 ಹೆಚ್‌ಐವಿ ಸೋಂಕಿತರಿಗೆ ಚಿಕಿತ್ಸೆ

ಮಿಷನ್ ಏಡ್ಸ್ ಸುರಕ್ಷಾ ಮೊಬಿಲೈಸೇಶನ್ ಅಭಿಯಾನ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಎಡಿಸಿ ಗದ್ಯಾಳ್ ಸೂಚನೆ ಉಡುಪಿ : ಹೆಚ್.ಐ.ವಿ. ಸೋಂಕಿನ ಬಗ್ಗೆ ಅರಿವು ಮೂಡಿಸುವುದು ಹಾಗೂ ಹೆಚ್.ಐ.ವಿ. ಸೋಂಕಿತರನ್ನು ಗುರುತಿಸಿ, ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸರಕಾರ ಮಿಷನ್ ಏಡ್ಸ್ ಸುರಕ್ಷಾ ಮೊಬಿಲೈಸೇಶನ್ ಅಭಿಯಾನ ಆರಂಭಿಸಿದ್ದು, ಅಭಿಯಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಅಧಿಕಾರಿಗಳಿಗೆ ಸೂಚಿಸಿದರು.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಫಸ್ಟ್ 95 ಸಮಿತಿ ಹಾಗೂ ಜಿಲ್ಲಾ ಜಂಟಿ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ 4691 ಹೆಚ್‌ಐವಿ ಸೋಂಕಿತರಿಗೆ ಚಿಕಿತ್ಸೆ Read More »

ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುತ್ತೇವೆ ಎಂದ ಶಾಸಕ ಯಶ್‌ಪಾಲ್‌ ವಿರುದ್ಧ ದೂರು ದಾಖಲು

ಉಡುಪಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನೆಪವೊಡ್ಡಿ ಕಾಕ್ರೋಚ್ ಜನತಾ ಪಾರ್ಟಿ, ಕಾಂಗ್ರೆಸ್ ಹಾಗೂ ಎಡಪಕ್ಷಗಳು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಜಟ್ಕಾ ಸ್ಟ್ಯಾಂಡ್ ಬಳಿ ನಡೆದ ಪ್ರತಿಭಟನೆ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ದ್ವೇಷ ಭಾಷಣ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದಾ ನಶೆಯಲ್ಲಿ ತೇಲುತ್ತಿರುವ ರಾಹುಲ್ ಗಾಂಧಿಗೆ ಚಿಂತನೆ ಮಾಡುವ ಶಕ್ತಿ ಇಲ್ಲ. ಕ್ರಾಕೋಚ್‌ಗಳೊಂದಿಗೆ ಸೇರಿ ಪ್ರಧಾನಿಯನ್ನು ಟೀಕೆ ಮಾಡುವ

ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುತ್ತೇವೆ ಎಂದ ಶಾಸಕ ಯಶ್‌ಪಾಲ್‌ ವಿರುದ್ಧ ದೂರು ದಾಖಲು Read More »

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು (ಮತ್ತೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಆ.7-8 : ಆಳ್ವಾಸ್ ಪ್ರಗತಿ – ಬೃಹತ್ ಉದ್ಯೋಗ ಮೇಳ

350ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆ – 15,860ಕ್ಕೂ ಹೆಚ್ಚು ಉದ್ಯೋಗಾವಕಾಶ ಉಡುಪಿ : ಆಳ್ವಾಸ್ ಪ್ರಗತಿ-2026ರ 16ನೇ ಆವೃತ್ತಿ ಆ.7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಜು.21ರಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2007ರಿಂದ ನಿರಂತರವಾಗಿ ಆಯೋಜಿಸಲಾಗುತ್ತಿರುವ ಆಳ್ವಾಸ್ ಪ್ರಗತಿ, ಉದ್ಯೋಗಾಕಾಂಕ್ಷಿಗಳು ಮತ್ತು ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಕಂಪನಿಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ವಿಶ್ವಾಸಾರ್ಹ ಉದ್ಯೋಗ ಮೇಳವಾಗಿ

ಆ.7-8 : ಆಳ್ವಾಸ್ ಪ್ರಗತಿ – ಬೃಹತ್ ಉದ್ಯೋಗ ಮೇಳ Read More »

ಮಂಗಳೂರು : ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬಿದ್ದ ಮರ – ಐದು ವರ್ಷದ ಬಾಲಕಿ ಸಾವು

ಮಂಗಳೂರು : ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿಳಿಯೂರಿನ ಚಂದ್ರಹಾಸ ಅವರ ಪುತ್ರಿ ಚಿರನ್ವಿ (5) ಮೃತಪಟ್ಟ ಮಗು. ಕಲ್ಲಡ್ಕ ಶ್ರೀರಾಮ ಶಾಲೆಗೆ ಸೇರಿದ ಶಾಲಾ ವಾಹನದ ಮೇಲೆ ಮರ ಬಿದ್ದು ಈ ಅವಘಡ ಸಂಭವಿಸಿದೆ. ಬಂಟ್ವಾಳ ತಾಲೂಕಿನ ಕಲ್ಲೇಟಿ ಕಾನಲ್ತಾಯ ದೈವಸ್ಥಾನದ ಬಳಿ ದುರ್ಘಟನೆ ನಡೆದಿದೆ. ಶ್ರೀರಾಮ ಶಾಲೆಯಲ್ಲಿ ಚಿರನ್ವಿ ಯುಕೆಜಿ

ಮಂಗಳೂರು : ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬಿದ್ದ ಮರ – ಐದು ವರ್ಷದ ಬಾಲಕಿ ಸಾವು Read More »

ಕಾರ್ಕಳ – ಕಳಸ ರಸ್ತೆ ಅಭಿವೃದ್ಧಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣ

ಮಹಾಮಸ್ತಕಾಭಿಷೇಕಕ್ಕೆ ಸರಕಾರದಿಂದ ಅನುದಾನ – ಸತೀಶ್‌ ಜಾರಕಿಹೊಳಿ ಕಾರ್ಕಳ : ಕಾರ್ಕಳ ಎಸ್‌ಕೆ ಬಾರ್ಡರ್‌ ಆಗಿ ಕಳಸ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಲೋಕೋಪಯೋಗಿ ಇಲಾಖಾ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.ಅವರು ಜು. 15ರಂದು ತೀರ್ಥಹಳ್ಳಿ ಉಡುಪಿ ರಾಜ್ಯ ಹೆದ್ದಾರಿ 27ರ ಆಗುಂಬೆ ಘಾಟಿ ವೀಕ್ಷಣೆಗೆ ಆಗಮಿಸಿದ್ದ ವೇಳೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾರ್ಕಳದಿಂದ ಮಾಳ ಎಸ್.‌ಕೆ. ಬಾರ್ಡರ್‌, ಮೂಡಿಗೆರೆಯಾಗಿ ಕಳಸಕ್ಕ ಸಂಪರ್ಕಿಸುವ ರಸ್ತೆ ದುರಸ್ತಿ ಕುರಿತು ಮಾತನಾಡಿ, ಟೆಂಡರ್‌

ಕಾರ್ಕಳ – ಕಳಸ ರಸ್ತೆ ಅಭಿವೃದ್ಧಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣ Read More »

ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು – ಬಂಧಿತರ ಸಂಖ್ಯೆ 17ಕ್ಕೆ ಏರಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ನಾಲ್ವರು ಅಪ್ರಾಪ್ತರೂ ಸೇರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾಗ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಇದರೊಂದಿಗೆ, ಕಳೆದ ಕೆಲವು ದಿನಗಳಲ್ಲಿ ಮಂಗಳೂರಿನಲ್ಲಿ ಪತ್ತೆಯಾದ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ. ಬಂಧಿತರನ್ನು ಎಂ.ಡಿ. ಕೌಸರ್

ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು – ಬಂಧಿತರ ಸಂಖ್ಯೆ 17ಕ್ಕೆ ಏರಿಕೆ Read More »

error: Content is protected !!
Scroll to Top