• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೈಂ

ಬೈಕ್‌ಗಳ ಮುಖಾಮುಖಿ ಡಿಕ್ಕಿ, ಸವಾರನ ತಲೆಗೆ ಗಂಭೀರ ಗಾಯ

ಅಜೆಕಾರು: ನಿಯಂತ್ರಣ ತಪ್ಪಿ ಬಂದ ಬೈಕೊಂದು ಸ್ಕೂಟರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕೆರ್ವಾಶೆ ಗರಡಿ ಬಳಿ ಮೇ 31ರಂದು ನಡೆದಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ನಾಗೇಶ ಬಿ. ಬಾಳಿಗ ಎಂಬುವವರ ತಲೆಗೆ ತೀವ್ರ ರಕ್ತಗಾಯವಾಗಿದ್ದು, ಬಲಗಾಲು ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿವೆ. ಇವರನ್ನು ತಕ್ಷಣ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರ್ಲಾಲಿನ ಎಸ್. ವೆಂಕಟೇಶ ಪ್ರಭು (59) ಎಂಬುವವರು ನೀಡಿದ ದೂರಿನ ಮೇರೆಗೆ

ಬೈಕ್‌ಗಳ ಮುಖಾಮುಖಿ ಡಿಕ್ಕಿ, ಸವಾರನ ತಲೆಗೆ ಗಂಭೀರ ಗಾಯ Read More »

ಹೆಂಡತಿಯಿಂದ ಗಂಡನಿಗೆ ಚೂರಿ ಇರಿತ

ಕಾರ್ಕಳ : ಹೆಂಡತಿ ಗಂಡನಿಗೆ ಚೂರಿಯಿಂದ ಇರಿದ ಘಟನೆ ಮೇ 18ರಂದು ಕಸಬಾ ಗ್ರಾಮದ ಮಟನ್‌ಸ್ಟಾಲ್‌ ಬಳಿಯಿರುವ ಮನೆಯಲ್ಲಿ ನಡೆದಿದೆ. ಆಪಾದಿತಳಾದ ನಾಗಮ್ಮ ತನ್ನ ಗಂಡ ಧನಪಾಲ ಅವರಿಗೆ ʼನೀನು ಕೆಲಸ ಮಾಡುವುದಿಲ್ಲ, ನನ್ನ ಸಂಬಳದಲ್ಲಿ ನಾನು ನಿನ್ನನ್ನು ಸಾಕುವುದು, ನನಗೆ ವಿಚ್ಚೇಧನ ನೀಡು, ನಿನ್ನ ಮಕ್ಕಳನ್ನು ಕರೆದುಕೊಂಡು ಮನೆ ಬಿಟ್ಟು ಹೋಗುʻ ಎಂದು ಹೇಳಿ ಚೂರಿಯಿಂದ ಕುತ್ತಿಗೆ ಹಾಗೂ ಕೆನ್ನೆಗೆ ತಿವಿದಿದ್ದಾಳೆ. ಅಲ್ಲದೆ ಆಕೆಯ ತಮ್ಮ ಆಪಾದಿತ ಗಣೇಶನು ಧನಪಾಲರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ

ಹೆಂಡತಿಯಿಂದ ಗಂಡನಿಗೆ ಚೂರಿ ಇರಿತ Read More »

ವ್ಯವಹಾರದ ಹಣ ದುರುಪಯೋಗಪಡಿಸಿಕೊಂಡ ಮ್ಯಾನೇಜರ್

ವಿಚಾರಿಸಿದಾಗ ಮಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ ಕಾರ್ಕಳ : ವ್ಯವಹಾರದ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಮಾಲಕನು ಮ್ಯಾನೇಜರ್‌ ಬಳಿ ವಿಚಾರಿಸಿದಾಗ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವ ಘಟನೆ ಮೇ 7ರಂದು ಜೋಡುರಸ್ತೆಯ ಟಯರ್ ಅಂಗಡಿಯಲ್ಲಿ ನಡೆದಿದೆ. ಗುರುವಾಯನಕೆರೆಯ ಅಪ್ಸರ್‌ ಪಿ.ಕೆ. ಅವರು ಜೋಡುರಸ್ತೆಯಲ್ಲಿ ಟೈರ್‌ ಮಾರ್ಟ್‌ ಎಂಬ ಹೆಸರಿನ ಟಯರ್ ಅಂಗಡಿಯನ್ನು ನಡೆಸಿಕೊಂಡಿದ್ದು, ಈ ಅಂಗಡಿಯಲ್ಲಿ ಆಪಾದಿತ ಮಹಮದ್‌ ಸಿನಾನ್‌ ಮ್ಯಾನೇಜರ್‌ ಆಗಿ ಕೆಲಸ ಮಾಡಿಕೊಂಡಿರುತ್ತಾನೆ. ಮಹಮದ್‌ ಸಿನಾನ್‌ ಅಂಗಡಿ

ವ್ಯವಹಾರದ ಹಣ ದುರುಪಯೋಗಪಡಿಸಿಕೊಂಡ ಮ್ಯಾನೇಜರ್ Read More »

ಬೈಲೂರು; ಗೂಡ್ಸ್ ವಾಹನ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಕಾರ್ಕಳ: ಇಲ್ಲಿನ ಪರಶುರಾಮ ಥೀಮ್ ಪಾರ್ಕ್ ಬಳಿ ಮೇ 14ರಂದು ರಾತ್ರಿ ಗೂಡ್ಸ್ ವಾಹನ ಮತ್ತು ಮೋಟಾರ್ ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.​ದೀಕ್ಷಿತ್ ಹಾಗೂ ಸಹ ಸವಾರ ಸಂಜೀವ ಪೂಜಾರಿ ಸಂಚರಿಸುತ್ತಿದ್ದ ಬೈಕ್‌ಗೆ, ಅತಿ ವೇಗವಾಗಿ ಬಂದ ಗೂಡ್ಸ್ ವಾಹನ ಢಿಕ್ಕಿ ಹೊಡೆದಿದೆ. ಮೂಳೆ ಮುರಿತಕ್ಕೊಳಗಾದ ಇಬ್ಬರನ್ನೂ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಎಸಗಿದ ಚಾಲಕನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಲೂರು; ಗೂಡ್ಸ್ ವಾಹನ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ Read More »

35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಹಿತ ವಿದ್ಯಾರ್ಥಿನಿ ಬಂಧನ

ಮಂಗಳೂರು : ಲಕ್ಷಾಂತರ ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಆಕೆಯಿಂದ 35 ಲಕ್ಷ ರೂ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡೋವಿಡ್ ಗಾಂಜಾ ವಶಪಡಿಸಿಕೊಂಡಿದ್ದಾರೆ.​ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸುಹಾನಾ (21) ಬಂಧಿತ ಆರೋಪಿತೆ. ಈಕೆ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದಳು. ಮಂಗಳೂರಿನ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ

35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಹಿತ ವಿದ್ಯಾರ್ಥಿನಿ ಬಂಧನ Read More »

ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮದ್ಯವ್ಯಸನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 9ರಂದು ಮರ್ಣೆ ಗ್ರಾಮದ ಮುಳ್ಳಕಾಡಿನಲ್ಲಿ ನಡೆದಿದೆ.ದಿನೇಶ ನಾಯ್ಕ್ (48) ನೇಣಿಗೆ ಶರಣಾದವರು. ಅವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮರ್ಣೆ ಗ್ರಾಮದ ಕೈಕಂಬ ಬಳಿ ಮುಳ್ಳಕಾಡು ಎಂಬಲ್ಲಿರುವ ಮನೆಯ ಎದುರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ Read More »

ಕಾರು-ಬೈಕ್ ಅಪಘಾತ; ಸವಾರನಿಗೆ ಗಂಭೀರ ಗಾಯ

ಕಾರ್ಕಳ: ಇಲ್ಲಿನ ಕಸಬಾ ಗ್ರಾಮದ ಮೂರುಮಾರ್ಗ ಜಂಕ್ಷನ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೆಳ್ಳಾರ್ ದುರ್ಗಾ ಗ್ರಾಮದ ನಿವಾಸಿ ಜನಾರ್ಧನ ಆಚಾರ್ (65) ಗಾಯಗೊಂಡ ವ್ಯಕ್ತಿಯಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.​ಜನಾರ್ಧನ ಆಚಾರ್ ಅವರು ಮಧ್ಯಾಹ್ನದ ವೇಳೆ ತಮ್ಮ ದ್ವಿಚಕ್ರ ವಾಹನದಲ್ಲಿ ಮೂರು ಮಾರ್ಗದಿಂದ ಗಾಂಧಿ ಮೈದಾನದ ಕಡೆಗೆ ತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಇದೇ ವೇಳೆ ಆನೆಕೆರೆ ಕಡೆಯಿಂದ ಬಂದ ಕಾರೊಂದು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸಿ

ಕಾರು-ಬೈಕ್ ಅಪಘಾತ; ಸವಾರನಿಗೆ ಗಂಭೀರ ಗಾಯ Read More »

ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ

ಕಾರ್ಕಳ: ಬೈಲೂರು ಪಳ್ಳಿ ಕ್ರಾಸ್ ಬಳಿ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಗಾಯಗೊಂಡ ಘಟನೆ ನಡೆದಿದೆ.​ರಮೇಶ ಎಂಬುವವರು ತಮ್ಮ ಸ್ಕೂಟರ್‌ನಲ್ಲಿ ಗುಡ್ಡೆಯಂಗಡಿ ಕಡೆಗೆ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸೊಂದು ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.​ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಾಯಗೊಂಡ ರಮೇಶ ಅವರನ್ನು ತಕ್ಷಣವೇ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ Read More »

ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ – ಪೊಲೀಸ್‌ ದಾಳಿ

ಕಾರ್ಕಳ : ಕುಕ್ಕುಜೆ ಗ್ರಾಮದ ದೊಂಡೆರಂಗಡಿ ಪೇಟೆಯಲ್ಲಿ ಸಂತೋಷ್‌ ಪೂಜಾರಿಯವರ ಅಂಗಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಅಶ್ವಿನ್‌ 1 ರೂಪಾಯಿಗೆ 70 ರೂಪಾಯಿ ಕೊಡುವುದಾಗಿ ಕೂಗುತ್ತಾ ಮಟ್ಕಾ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಅಜೆಕಾರು ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಮಹೇಶ್‌ ಟಿ. ಎಮ್‌. ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಅಶ್ವಿನ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಜನರಿಂದ ಸಂಗ್ರಹಿಸಿದ ಹಣವನ್ನು ಸಂತೋಷ ಪೂಜಾರಿಯವರಿಗೆ ನೀಡುತ್ತಿದ್ದು ಅವರು ಆತನಿಗೆ 100 ರೂಪಾಯಿಗೆ 20 ರೂಪಾಯಿಯಂತೆ ಕಮಿಷನ್‌

ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ – ಪೊಲೀಸ್‌ ದಾಳಿ Read More »

ರೌಡಿಶೀಟರ್ ಸೋಮನಾಥ ಉಡುಪಿ ಜಿಲ್ಲೆಯಿಂದ ಗಡಿಪಾರು

ಕಾರ್ಕಳ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ನಿರಂತರವಾಗಿ ಧಕ್ಕೆ ತರುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ, ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸೋಮನಾಥ ಅಲಿಯಾಸ್ ಸೋಮು (40) ಎಂಬಾತನನ್ನು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಗುರುವಾರ ಆದೇಶ ಹೊರಡಿಸಿದ್ದಾರೆ.​11 ಪ್ರಕರಣಗಳ ದಾಖಲೆ:ಕಾರ್ಕಳ ತಾಲೂಕು ಕಸಬ ಗ್ರಾಮದ ತೆಳ್ಳಾರು ರಸ್ತೆ ನಿವಾಸಿಯಾಗಿರುವ ಸೋಮನಾಥನ ವಿರುದ್ಧ ಈಗಾಗಲೇ ಕಾರ್ಕಳ ನಗರ ಠಾಣೆಯಲ್ಲಿ ರೌಡಿ ಪಟ್ಟಿ (Rowdy Sheet) ತೆರೆಯಲಾಗಿತ್ತು. ಈತನ ಮೇಲೆ ಹಲ್ಲೆ, ಬೆದರಿಕೆ ಸೇರಿದಂತೆ

ರೌಡಿಶೀಟರ್ ಸೋಮನಾಥ ಉಡುಪಿ ಜಿಲ್ಲೆಯಿಂದ ಗಡಿಪಾರು Read More »

error: Content is protected !!
Scroll to Top