• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ನಿಧನ

ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ: ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರು

ಮುಂಬೈ: ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ‘ಪದ್ಮ ವಿಭೂಷಣ’ ಪುರಸ್ಕೃತೆ ಆಶಾ ಭೋಸ್ಲೆ (92) ಅವರು ಭಾನುವಾರ ನಿಧನರಾದರು. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ​ಹೃದಯಾಘಾತದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿತ್ತಾದರೂ, ಭಾನುವಾರ ಬೆಳಿಗ್ಗೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿ ಅಂತಿಮ ಪ್ರಯಾಣ ಬೆಳೆಸಿದರು.​ಸ್ವರ ಮಾಧುರ್ಯದ ಪಯಣ​1933 ರಲ್ಲಿ […]

ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ: ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರು Read More »

ತೋಟದ ಬೆಂಕಿ ನಂದಿಸಲು ಹೋಗಿದ್ದ ವೃದ್ಧ ಸಾವು

ಕಾರ್ಕಳ : ತೋಟಕ್ಕೆ ಬಿದ್ದ ಬೆಂಕಿಯನ್ನು ನಂದಿಸಲು ಹೋಗಿ ತೀವ್ರವಾಗಿ ಗಾಯಗೊಂಡಿದ್ದ ನಿಟ್ಟೆ ಗ್ರಾಮದ ಬಜೆಕ್ಕಳ ನಿವಾಸಿ ಜಯಕರ ಶೆಟ್ಟಿ (80) ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ ನಿಧನರಾದರು. ನಿಟ್ಟೆ ಗ್ರಾಮದ ಬಜೆಕ್ಕಳದ ಜಯಕರ ಶೆಟ್ಟಿ ಅವರು ಎ. 9ರಂದು ಬೆಳಿಗ್ಗೆ ತಮ್ಮ ಮನೆಯ ಹಿತ್ತಲಿನಲ್ಲಿ ಕಸಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಹಬ್ಬಿದ್ದು, ವಯೋಸಹಜ ಅಶಕ್ತತೆಯ ನಡುವೆಯೂ ಜಯಕರ ಶೆಟ್ಟಿ ಅವರು ಊರುಗೋಲು ಹಿಡಿದುಕೊಂಡು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಗಾಳಿಯ

ತೋಟದ ಬೆಂಕಿ ನಂದಿಸಲು ಹೋಗಿದ್ದ ವೃದ್ಧ ಸಾವು Read More »

ಹೆಬ್ರಿ : ಏಣಿಯಿಂದ ಬಿದ್ದು ಯುವಕ ಸಾವು

ಹೆಬ್ರಿ : ಏಣಿಯಿಂದ ಬಿದ್ದು ಯುವಕನೋರ್ವ ಸಾವನ್ನಪ್ಪಿದ ದುರ್ಘಟನೆ ಮಾ.25ರಂದು ಹೆಬ್ರಿಯಲ್ಲಿ ನಡೆದಿದೆ. ಕುಚ್ಚೂರು ಕೆಳಬಾದ್ಲು ನಿವಾಸಿ ಸಾತ್ವಿಕ್ (17) ಮೃತ ದುರ್ದೈವಿ. ಸಾತ್ವಿಕ್‌ ದ್ವಿತೀಯ ಪಿಯುಸಿಯ ಪರೀಕ್ಷೆ ಮುಗಿದ ಬಳಿಕ ತನ್ನ ಮುಂದಿನ ವಿದ್ಯಾಭ್ಯಾಸ ಹಾಗೂ ಮನೆಯ ಖರ್ಚಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಕೆಲಸಕ್ಕೆ ಹೋಗುತ್ತಿದ್ದರು. ಅದರಂತೆ ಹೆಬ್ರಿ ಹುತುರ್ಕೆ ಎಂಬಲ್ಲಿ ಕೆಲಸ ಮಾಡುತ್ತಿದ್ದಾಗ ಏಣಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

ಹೆಬ್ರಿ : ಏಣಿಯಿಂದ ಬಿದ್ದು ಯುವಕ ಸಾವು Read More »

ಮುದ್ರಾಡಿ ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ

ಹೆಬ್ರಿ : ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರ ತಾಯಿ,‌‌‌ ‌‌‌ಮಂಡಲ ಪಂಚಾಯತ್ ಮಾಜಿ ಸದಸ್ಯ ಚಂದು ಪೂಜಾರಿಯವರ ಪತ್ನಿ ಕಮಲ ಪೂಜಾರಿ (88) ಮಾ. 20ರಂದು ನಿಧನರಾದರು. ಮೃತರು 8 ಮಂದಿ ಮಕ್ಕಳನ್ನು ಅಗಲಿದ್ದಾರೆ. ಕಮಲ ಅವರು ಪಂಚಾಯತ್ ಸದಸ್ಯರಾಗಿಯೂ‌ ಸೇವೆ ಸಲ್ಲಿಸಿದ್ದರು. ಮೃತರ ಅಂತ್ಯಸಂಸ್ಕಾರ ಮುದ್ರಾಡಿ ಮನೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮುದ್ರಾಡಿ ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ Read More »

ಕುಸಿದು ಬಿದ್ದು ವ್ಯಕ್ತಿ ಸಾವು

ಕಾರ್ಕಳ : ಕುಸಿದು ಬಿದ್ದು ವ್ಯಕ್ತಿ ಸಾವನಪ್ಪಿದ ದುರ್ಘಟನೆ ಮಾ. 12ರಂದು ಮರ್ಣೆ ಗ್ರಾಮದಲ್ಲಿ ನಡೆದಿದೆ. ಕುರ್ಪಾಡಿ ರಸ್ತೆ ವಿಜಯ್‌ (55) ಮೃತ ವ್ಯಕ್ತಿ. ಇವರು ಬೆಳಿಗ್ಗೆ ಮರ್ಣೆ ಗ್ರಾಮದ ಗುಡ್ಡೆಯಂಗಡಿಯಲ್ಲಿರುವ ತಮ್ಮ ತೋಟದ ಕೆಲಸಕ್ಕೆ ಹೋಗಿದ್ದು ಸ್ವಲ್ಪ ಸಮಯದ ನಂತರ ಅವರ ಹೆಂಡತಿಯ ತಂದೆ ಬಾಲಕೃಷ್ಣ ಅವರು ತೋಟಕ್ಕೆ ಹೋಗಿ ನೋಡಿದಾಗ ವಿಜಯ ಅವರು ಗೊಬ್ಬರದ ರಾಶಿಯ ಮೇಲೆ ಬಿದ್ದಿದ್ದರು. ಅಸ್ವಸ್ಥರಾಗಿದ್ದ ಅವರನ್ನು ಅಜೆಕಾರು ಪ್ರಾಥಮಿಕ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ

ಕುಸಿದು ಬಿದ್ದು ವ್ಯಕ್ತಿ ಸಾವು Read More »

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಾರ್ಕಳ : ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಶವವಾಗಿ ಪತ್ತೆಯಾದ ಘಟನೆ ಕಸಬಾ ಗ್ರಾಮದಲ್ಲಿ ನಡೆದಿದೆ. ರಾಮಸಮುದ್ರ ನಿವಾಸಿ ಜೋಕಿ ಪಿರೇರಾ (74) ಮೃತ ವ್ಯಕ್ತಿ. ಇವರು ಮದ್ಯವ್ಯಸನಿಯಾಗಿದ್ದು ಮೂರ್ಛೆ ರೋಗದಿಂದ ಬಳಲುತ್ತಿದ್ದರು. ಫೆ. 28ರಂದು ಬೆಳಿಗ್ಗೆ 7 ಗಂಟೆಗೆ ತನ್ನ ಮನೆಯಿಂದ ಕಾರ್ಕಳ ಪೇಟೆಗೆ ಹೋಗುತ್ತೇನೆಂದು ಹೇಳಿ ಹೋದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಮಾ. 9ರಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಜೋಕಿ ಪಿರೇರಾ ಕಾಣೆಯಾಗಿರುವ ಬಗ್ಗೆ ಅವರ ಪತ್ನಿ ನತಾಲಿಯಾ ಪಿರೇರಾ ದೂರು ನೀಡಿರುತ್ತಾರೆ. ಆ ದಿನ

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ Read More »

ಪಿಎಸ್ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ

ಕಾರ್ಕಳ : ಕುಂದಾಪುರ ಕಂಡ್ಲೂರು ಪೊಲೀಸ್ ಠಾಣೆಯ ಎಸ್ಐ ನಾಸೀರ್ ಹುಸೇನ್ (58) ಮಾ.1 ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಅವರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ನಡೆಯುತ್ತಿದ್ದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ವೇಳೆ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ

ಪಿಎಸ್ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ Read More »

ಸಾಮಾಜಿಕ ಮುಂದಾಳು ತೆಳ್ಳಾರು ಶಾಬುದ್ಧೀನ್‌ ನಿಧನ

ಕಾರ್ಕಳ : ತೆಳ್ಳಾರು ಮಂಜುನಾಥ ಫೈ ಸ್ಮಾರಕ ಪ್ರೌಢಶಾಲಾ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ, ಶಾಲಾ ಕಟ್ಟಡ ಸಮಿತಿಯ ಸದಸ್ಯ, ತೆಳ್ಳಾರು ಸುನ್ನಿ ಜಮಾತ್‌ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್‌ ಮುಂದಾಳು, ತೆಳ್ಳಾರು ನಿವಾಸಿ ಶಾಬುದ್ದೀನ್‌ ಸಾಹೇಬ್‌ (65) ಅವರು ಫೆ. 17ರಂದು ಹೃದಯಾಘಾತಕ್ಕೀಡಾಗಿ ನಿಧನ ಹೊಂದಿದರು. ಜಾತಿ, ಮತ, ಪಕ್ಷ ಭೇದವಿಲ್ಲದೇ ಅವರು ಎಲ್ಲರೊಂದಿಗೂ ಬೆರೆಯುತ್ತಿದ್ದ ಕಾರಣ ಸಮಾಜದ ಮೆಚ್ಚುಗೆಗೆ ಪಾತ್ರರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸಾಮಾಜಿಕ ಮುಂದಾಳು ತೆಳ್ಳಾರು ಶಾಬುದ್ಧೀನ್‌ ನಿಧನ Read More »

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಉಡುಪಿ : ಮಾಜಿ ಶಾಸಕ ರಾಜಕೀಯ, ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ (91) ಫೆ.7ರಂದು ನಿಧನರಾಗಿದ್ದಾರೆ. 1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದು, ಜನಪ್ರತಿನಿಧಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಕೆಗೆ ಹೆಸರುವಾಸಿಯಾಗಿದ್ದರು. ಶಾಸಕರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ರಾಜಕೀಯ ಹಾಗೂ ನಿಜ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ Read More »

ದೇವಕಿ ಬಿ. ಶೆಟ್ಟಿ ನಿಧನ

ಕಾರ್ಕಳ : ಕಾಬೆಟ್ಟು ದೇವಿಕಾ ಬಾರ್‌ ಮಾಲಕ ಸೀತಾರಾಮ ಶೆಟ್ಟಿಯವರ ತಾಯಿ ದೇವಕಿ ಬಿ. ಶೆಟ್ಟಿ (85) ಅವರು ಜ. 28ರಂದು ರಾತ್ರಿ ನಿಧನ ಹೊಂದಿದರು. ವಯೋಸಹಜ ಅಸೌಖ್ಯದಿಂದ ಬಳಲುತ್ತಿದ್ದ ಅವರನ್ನು ಬುಧವಾರ ರಾತ್ರಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ. ಮೃತರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ದೇವಕಿ ಬಿ. ಶೆಟ್ಟಿ ನಿಧನ Read More »

error: Content is protected !!
Scroll to Top