ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ : ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ : ಮೀನುಗಾರರಿಗೆ ಮುನ್ನೆಚ್ಚರಿಕೆ
ಮಂಗಳೂರು : ಹವಾಮಾನ ಮುನ್ಸೂಚನೆಯಂತೆ ಜೂ. 6ರಿಂದ 11ರವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಸೂಚಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ …