• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಜಿಲ್ಲಾ

ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಾವಣನಂತೆ ಬಿಂಬಿಸಿ ಕಟೌಟ್‌ಗೆ ಮೊಟ್ಟೆ ಎಸೆತ – ಪ್ರತಿಕೃತಿ ದಹಿಸಿ ಆಕ್ರೋಶ ಉಡುಪಿ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಂಶ ಧ್ವಂಸ ಮಾಡುವ ಜೀವ ಬೆದರಿಕೆ ಒಡ್ಡಿ, ನೀಟ್ ವಿದ್ಯಾರ್ಥಿ ಚಳವಳಿಯನ್ನು ಹೀನಾಯವಾಗಿ ನಿಂದಿಸಿ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣರ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ನಗರದ ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಶುಕ್ರವಾರ ಬೆಳಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು

ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ Read More »

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಆ.19ಕ್ಕೆ ಮುಂದೂಡಿ ಸುಪ್ರೀಂ ಆದೇಶ

ಚಿಕ್ಕಮಗಳೂರು: 2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 19ಕ್ಕೆ ಮುಂದೂಡಿ ಆದೇಶ ಹೊರಡಿಸಲಾಗಿದೆ. 2023ರ ಚುನಾವಣಾ ಫಲಿತಾಂಶದಲ್ಲಿ ಶೃಂಗೇರಿಯ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಫಲಿತಾಂಶ ಪ್ರಶ್ನಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಅಂಚೆ ಮತಗಳ ಮರು ಎಣಿಕೆಗೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆ ನಡೆಸಿ ಹೊಸ

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಆ.19ಕ್ಕೆ ಮುಂದೂಡಿ ಸುಪ್ರೀಂ ಆದೇಶ Read More »

ಉಡುಪಿ ಜಿಲ್ಲೆಯಲ್ಲಿ 4691 ಹೆಚ್‌ಐವಿ ಸೋಂಕಿತರಿಗೆ ಚಿಕಿತ್ಸೆ

ಮಿಷನ್ ಏಡ್ಸ್ ಸುರಕ್ಷಾ ಮೊಬಿಲೈಸೇಶನ್ ಅಭಿಯಾನ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಎಡಿಸಿ ಗದ್ಯಾಳ್ ಸೂಚನೆ ಉಡುಪಿ : ಹೆಚ್.ಐ.ವಿ. ಸೋಂಕಿನ ಬಗ್ಗೆ ಅರಿವು ಮೂಡಿಸುವುದು ಹಾಗೂ ಹೆಚ್.ಐ.ವಿ. ಸೋಂಕಿತರನ್ನು ಗುರುತಿಸಿ, ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸರಕಾರ ಮಿಷನ್ ಏಡ್ಸ್ ಸುರಕ್ಷಾ ಮೊಬಿಲೈಸೇಶನ್ ಅಭಿಯಾನ ಆರಂಭಿಸಿದ್ದು, ಅಭಿಯಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಅಧಿಕಾರಿಗಳಿಗೆ ಸೂಚಿಸಿದರು.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಫಸ್ಟ್ 95 ಸಮಿತಿ ಹಾಗೂ ಜಿಲ್ಲಾ ಜಂಟಿ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ 4691 ಹೆಚ್‌ಐವಿ ಸೋಂಕಿತರಿಗೆ ಚಿಕಿತ್ಸೆ Read More »

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಾರ್ಕಳ : ಕಳೆದ 36 ವರ್ಷದಿಂದ ತಲೆಮೆರೆಸಿಕೊಂಡಿದ್ದ ಆರೋಪಿಯನ್ನು ಕಾರ್ಕಳ ನಗರ ಪೊಲೀಸರು ಜು. 27ರಂದು ಬಂಧಿಸಿದ್ದಾರೆ. ಕಾರ್ಕಳ ರಾಮಸಮುದ್ರ ನಿವಾಸಿ ಪೀಟರ್ ಆಗಸ್ಟಿನ್ ಮಾರ್ಟೀಸ್ (60) ಬಂಧಿತ ಆರೋಪಿ. ಈತ 92/1989 ಕಲಂ: 143, 147, 148, 447, 448, 323, 326 ಜೊತೆಗೆ 149 ಐಪಿಸಿ ಮತ್ತು ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಎಲ್.ಪಿ.ಸಿ 14/2004 ಪ್ರಕರಣದಲ್ಲಿ 36 ವರ್ಷದಿಂದ ತಲೆಮೆರೆಸಿಕೊಂಡಿದ್ದನು. ಕಾರ್ಕಳ ಉಪ ವಿಭಾಗದ ಉಪಾಧೀಕ್ಷಕರ ಮಾರ್ಗದರ್ಶನದಂತೆ, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರು

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಉಡುಪಿ ಜ್ಞಾನಸುಧಾದಲ್ಲಿ ನೀಟ್ ಸಾಧಕರಿಗೆ ಅಭಿನಂದನೆ

ಉಡುಪಿ : ರಾಷ್ಟ್ರ ಮಟ್ಟದ ಎಂಬಿಬಿಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಎನ್‌ಟಿಎ ನಡೆಸಿದ ನೀಟ್ 2026ರ ಫಲಿತಾಂಶದಲ್ಲಿ 720ಕ್ಕೆ 680 ಅಂಕಗಳೊಂದಿಗೆ ಜನರಲ್ ಮೆರಿಟ್‌ನಲ್ಲಿ 267ನೇ ರ‍್ಯಾಂಕ್ ಪಡೆದು ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಮೇಧಾಂಶ್‌ ಎನ್.ಬಿ ಹಾಗೂ 670 ಅಂಕಗಳೊಂದಿಗೆ ರಾಷ್ಟ್ರ ಮಟ್ಟದಲ್ಲಿ 701ನೇ ರ‍್ಯಾಂಕ್ ಪಡೆದುಕೊಂಡ ಅನಿರುದ್ಧ್ ಆರ್‌. ಉಡುಪ ಅವರನ್ನು ಉಡುಪಿ ಜ್ಞಾನಸುಧಾದಲ್ಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ನೀಟ್ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಅಜೆಕಾರು

ಉಡುಪಿ ಜ್ಞಾನಸುಧಾದಲ್ಲಿ ನೀಟ್ ಸಾಧಕರಿಗೆ ಅಭಿನಂದನೆ Read More »

ತುಳುವ ಮಹಾಸಭಾ ಇಂಟರ್ನ್ಯಾಷನಲ್ ಜಿಲ್ಲಾಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಯರ್ಲಪಾಡಿ

ಉಡುಪಿ : 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ ಇದರ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿಯ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಉದಯ ಕುಮಾರ್ ಹೆಗ್ಡೆ ಅವರು ಯರ್ಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕಾರ್ಕಳ ಭೂನ್ಯಾಯ ಮಂಡಳಿ ಸದಸ್ಯರಾಗಿ, ಮೂರು ಅವಧಿಗಳಲ್ಲಿ ನೀರೆ ಬೈಲೂರು ವ್ಯವಸಾಯ ಸೇವಾ ಸಂಘದ ನಿರ್ದೇಶಕರಾಗಿ, ಸ್ವರ್ಣ ಸೌಹಾರ್ದ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ, ಕಾರ್ಕಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಜನಜಾಗೃತಿ

ತುಳುವ ಮಹಾಸಭಾ ಇಂಟರ್ನ್ಯಾಷನಲ್ ಜಿಲ್ಲಾಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಯರ್ಲಪಾಡಿ Read More »

ಮಾದಕವಸ್ತು ಸಾಗಟ – ಕಾರ್ಕಳದ ಇಬ್ಬರು ಸಹಿತ ಮೂವರ ಬಂಧನ

ಉಡುಪಿ : ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಬುಡ್ನಾರ್‌ನಲ್ಲಿ ಎಂ.ಡಿ.ಎಂ.ಎ ಪೌಡರ್, ಎಂ.ಡಿ.ಎಂ.ಎ ಟ್ಯಾಬ್ಲೆಟ್ ಹಾಗೂ ಹೈಡ್ರೋ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಉದ್ಯಾವರ ಪಿತ್ರೋಡಿಯ ವಿಜಯ ಪೂಜಾರಿ (36), ಕಾರ್ಕಳದ ಕುಕ್ಕಂದೂರು ಹಾರ್ಜಿಡ್ಡು ನಿವಾಸಿ ಪಿ.ಎ.ಮುಹಮ್ಮದ್ ಶಮ್ಮಾಸ್(24) ಹಾಗೂ ಕಾರ್ಕಳ ತಾಲೂಕು ಕುಂಟಿಬೈಲು ಮಿಯಾರು ಗ್ರಾಮದ ಆಕಾಶ್ ಶೆಟ್ಟಿ (20) ಬಂಧಿತ ಆರೋಪಿಗಳು. ಆರೋಪಿಗಳಿಂದ 4 ಗ್ರಾಂ ಎಂ.ಡಿ.ಎಂ.ಎ ಪೌಡರ್, 2.5 ಗ್ರಾಂ ಹೈಡ್ರೋ ಗಾಂಜಾ, 3.65 ಗ್ರಾಂ, ಎಂ.ಡಿ.ಎಂ.ಎ ಟ್ಯಾಬ್ಲೆಟ್‌ ಹಾಗೂ ಗಾಂಜಾ ವಶಕ್ಕೆ

ಮಾದಕವಸ್ತು ಸಾಗಟ – ಕಾರ್ಕಳದ ಇಬ್ಬರು ಸಹಿತ ಮೂವರ ಬಂಧನ Read More »

ಉಡುಪಿ ಜ್ಞಾನಸುಧಾದಲ್ಲಿ ಪ್ರತಿಭಾ ಪುರಸ್ಕಾರ – 39.2 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಬದುಕಿಗಿಂತ ದೇಶ ಮಿಗಿಲೆಂಬ ಭಾವ ಸರ್ವರಲ್ಲಿರಲಿ : ಕೋಟ ಶ್ರೀನಿವಾಸ ಪೂಜಾರಿ ಕಾರ್ಕಳ : ಜ್ಞಾನಸುಧಾ ಶಿಕ್ಷಣ ಸಂಸ್ಥೆಯಿಂದ ಒಂದು ವರ್ಷಕ್ಕೆ 227 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್.ಗೆ ಸೇರ್ಪಡೆಯಾಗಿರುವುದು ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೆ ಮಾದರಿ. ಜ್ಞಾನಸುಧಾದಂತಹ ಒಂದು ಸಂಸ್ಥೆಯನ್ನು ಸೃಷ್ಟಿ ಮಾಡಲು ಯಾವ ಸರ್ಕಾರಕ್ಕೂ ಸಾಧ್ಯವಿಲ್ಲ. ಇಂತಹ ಸಂಸ್ಥೆಯನ್ನು ದೇಶಕ್ಕೆ ಕೊಡುಗೆಯಾಗಿ ನೀಡಿ ಬದುಕಿಗಿಂತ ದೇಶ ಮಿಗಿಲೆಂಬ ಡಾ. ಸುಧಾಕರ ಶೆಟ್ಟಿಯವರ ಗುಣ ಅಣುಕರಣೀಯ ಎಂದು ಉಡುಪಿ, ಚಿಕ್ಕಮಗಳೂರು ಲೋಕಸಭಾಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಉಡುಪಿ

ಉಡುಪಿ ಜ್ಞಾನಸುಧಾದಲ್ಲಿ ಪ್ರತಿಭಾ ಪುರಸ್ಕಾರ – 39.2 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ Read More »

ಜಾತಿ ನಿಂದನೆ – ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುಧಾಕರ್ ದಾನಶಾಲೆ ಆಗ್ರಹ

ಕಾರ್ಕಳ : ಬೆಳ್ತಂಗಡಿ ತಾಲೂಕಿನಲ್ಲಿ ಎಸ್‌ಐಆರ್ ಕರ್ತವ್ಯ ನಿರ್ವಹಿಸಲು ತೆರಳಿದ್ದ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವುದು ಖಂಡನೀಯ. ಕರ್ತವ್ಯ ನಿರ್ವಹಿಸಲು ತೆರಳಿದ ಸರಕಾರಿ ಅಧಿಕಾರಿಯನ್ನು ಜಾತಿಯ ಹೆಸರಿನಲ್ಲಿ ಅವಮಾನಿಸುವುದು ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧವಾದ ಕೃತ್ಯವೆಂದು ಕರ್ನಾಟಕ ಭೀಮ್ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಸುಧಾಕರ್‌ ದಾನಶಾಲೆ ತಿಳಿಸಿದ್ದಾರೆ. ಜಾತಿ ನಿಂದನೆ ಮತ್ತು ಸಾಮಾಜಿಕ ಅವಮಾನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜಾತಿ ಆಧಾರಿತ ದೌರ್ಜನ್ಯ ಮತ್ತು ಅವಮಾನ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಹ

ಜಾತಿ ನಿಂದನೆ – ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುಧಾಕರ್ ದಾನಶಾಲೆ ಆಗ್ರಹ Read More »

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಈ ವರ್ಷ 3 ಕೋಟಿ 6 ಲಕ್ಷದ 30 ಸಾವಿರ ರೂ. ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ : ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್‌ ಟ್ರಸ್ಟ್ನ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಕಳ, ಉಡುಪಿ, ಮಣಿಪಾಲ ಹಾಗೂ ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಂತದ ವಿದ್ಯಾರ್ಥಿ ವೇತನ ರೂ.1 ಕೋಟಿ 44 ಲಕ್ಷವನ್ನು 2026ರ ಮೇ 29 ರಂದು ಕಾರ್ಕಳ ಜ್ಞಾನಸುಧಾದಲ್ಲಿ ಹಾಗೂ ರೂ. 67 ಲಕ್ಷದ 80 ಸಾವಿರವನ್ನು ಜೂ.3ರಂದು ಅಜೆಕಾರು ಜ್ಞಾನಸುಧಾದಲ್ಲಿ ವಿತರಿಸಲಾಗಿದ್ದು, ಇದೀಗ ದ್ವಿತೀಯ ಹಂತದ ವಿದ್ಯಾರ್ಥಿವೇತನವಾಗಿ ರೂ.55 ಲಕ್ಷದ 30 ಸಾವಿರವನ್ನು ಜು. 13ರಂದು ಮಣಿಪಾಲ ಜ್ಞಾನಸುಧಾದಲ್ಲಿ

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಈ ವರ್ಷ 3 ಕೋಟಿ 6 ಲಕ್ಷದ 30 ಸಾವಿರ ರೂ. ವಿದ್ಯಾರ್ಥಿ ವೇತನ ವಿತರಣೆ Read More »

error: Content is protected !!
Scroll to Top