ಮಳೆ ಹಿನ್ನೆಲೆ ಯಾಣ ಪ್ರವಾಸಿ ತಾಣಕ್ಕೆ ನಿರ್ಬಂಧ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಯಾಣ ಪ್ರವಾಸಿ ತಾಣಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಾರವಾರದಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದ್ದು, ಕರಾವಳಿಯ ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲೂ ಮಳೆ ಸುರಿದಿದೆ. ಈ ಹಿನ್ನೆಲೆ ಕುಮಟಾ ತಾಲೂಕಿನ ಪ್ರಸಿದ್ಧ ಯಾಣ ಪ್ರವಾಸಿ ಸ್ಥಳಕ್ಕೆ ಭೂಕುಸಿತ ಆತಂಕ ಹಾಗೂ ಚಂಡಿಕಾ ನದಿಯ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಪ್ರವಾಸಿಗರಿಗೆ ಯಾಣಕ್ಕೆ ತೆರಳದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ಯಾಣದ ಬಳಿ ಭೂ ಕುಸಿತವಾಗಿತ್ತು.
ಮಳೆ ಹಿನ್ನೆಲೆ ಯಾಣ ಪ್ರವಾಸಿ ತಾಣಕ್ಕೆ ನಿರ್ಬಂಧ Read More »










