ಮುದ್ರಾಡಿ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ನಿರಂತರ ಪ್ರಯತ್ನ – ಪರಿಶ್ರಮದಿಂದ ಯಶಸ್ಸು : ರಾಮಕೃಷ್ಣ ಆಚಾರ್ಯ ಹೆಬ್ರಿ : ನಿರಂತರ ಪ್ರಯತ್ನ, ಪರಿಶ್ರಮದಿಂದ ವಿದ್ಯಾರ್ಥಿಗಳು ಯಶಸ್ಸನ್ನು ಪಡೆಯಲು ಸಾಧ್ಯವಾಗುವುದು. ಕನ್ನಡ ಮಾಧ್ಯಮದಲ್ಲಿ ಉತ್ತಮ ಸಾಧನೆ ತೋರಿ ಸಂಸ್ಥೆಗೆ, ಊರಿಗೆ ಕೀರ್ತಿ ತಂದುಕೊಟ್ಟ ಮುದ್ರಾಡಿ ಫ್ರೌಡಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಕಾರ್ಯ ಅಭಿನಂದನೀಯ ಎಂದು ಹೆಬ್ರಿ ರೋಟರಿ ಸಮುದಾಯ ದಳದ ಅಧ್ಯಕ್ಷ ಎಚ್. ರಾಮಕೃಷ್ಣ ಆಚಾರ್ಯ ಹೇಳಿದರು.ಅವರು ಮೆ 3ರಂದು ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಫ್ರೌಡಶಾಲೆಯ 2022-23ನೇ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮತ್ತು …