ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ನಿಧನ
ಚಿತ್ರದುರ್ಗ: ನಗರದ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಸಿಪಿಐ ಲಿಂಗರಾಜ್ ಎನ್ನುವವರು (39) ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ಲಿಂಗರಾಜ್ ಅವರು ಬುಧವಾರ ಬೆಂಗಳೂರಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಿ ಖಾಸಗಿ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿದ್ದರು. ಬೆಳಗ್ಗೆ ಎದೆನೋವು ಎಂದು ಆಸ್ಪತ್ರೆಗೆ ತೆರಳುವ ವೇಳೆ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಲಿಂಗರಾಜ್ ಅವರು ಹಿಂದೆ PSI ಆಗಿ ಚಿತ್ರದುರ್ಗದಲ್ಲಿ ಸೇವೆ ಸಲ್ಲಿಸಿದ್ದರು. ಇದಕ್ಕೂ ಮೊದಲು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಉಪ …