ಗೂಡುದೀಪ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ
ಕಾರ್ಕಳ : ಕಾರ್ಕಳ ಉತ್ಸವದ ಮೂಲಕ ಗೂಡುದೀಪ ಸ್ಪರ್ಧೆ ಆಯೋಜಿಸಿ ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸಿದ ಸಚಿವ ಸುನಿಲ್ ಕುಮಾರ್ ಕಾರ್ಯ ಪ್ರಶಂಸನೀಯವೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್ ಹೇಳಿದರು. ಅವರು ಮಾ. 21ರಂದು ಕಾರ್ಕಳ ಉತ್ಸವದ ಅಂಗವಾಗಿ ಪೆರ್ವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಗೂಡುದೀಪ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.ಮಂಜುನಾಥ ಪೈ ಸ್ಮಾರಕ ಪದವಿ ಕಾಲೇಜಿನ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಮಾತನಾಡಿ, ಕಾರ್ಕಳ ಉತ್ಸವ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ. …