ಕ್ರೀಡೆ

ವಾಲಿಬಾಲ್‌ : ಕ್ರೈಸ್ಟ್‌ಕಿಂಗ್‌ನ ಸುದೀಕ್ಷಾ ಶೆಟ್ಟಿ ರಾಜ್ಯಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜು) ಹಾಗೂ ಬೈಂದೂರು ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುದೀಕ್ಷಾ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದ ಪಂದ್ಯಾಟದಲ್ಲಿ ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿದ್ದ ಸುದೀಕ್ಷಾ ಅಲ್ಲಿ ತನ್ನ ತಂಡ ಪ್ರಥಮ ಸ್ಥಾನ ಪಡೆದು ಕೊಳ್ಳುವುದರ ಮೂಲಕ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು, …

ವಾಲಿಬಾಲ್‌ : ಕ್ರೈಸ್ಟ್‌ಕಿಂಗ್‌ನ ಸುದೀಕ್ಷಾ ಶೆಟ್ಟಿ ರಾಜ್ಯಮಟ್ಟಕ್ಕೆ Read More »

ಮಹಿಳಾ ಕ್ರಿಕೆಟ್ – ಏಷಿಯಾಡ್ ಚಿನ್ನ ಗೆದ್ದ ಭಾರತ

ಹ್ಯಾಂಗ್ ಝೌ : ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ. ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನಡೆದೆ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭಾರತ ತಂಡ 19ರನ್ ಗಳ ಅಂತರದಲ್ಲಿ ಮಣಿಸಿ ಮೊದಲ ಬಾರಿಗೆ ಚಿನ್ನದ ಪದಕ ಬಾಚಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಶ್ರೀಲಂಕಾಗೆ ಗೆಲ್ಲಲು ಕೇವಲ 117ರನ್ ಗಳ …

ಮಹಿಳಾ ಕ್ರಿಕೆಟ್ – ಏಷಿಯಾಡ್ ಚಿನ್ನ ಗೆದ್ದ ಭಾರತ Read More »

ಏಷಿಯನ್‌ ಗೇಮ್ಸ್‌ : ಚಿನ್ನದ ಪದಕದೊಂದಿಗೆ ಹೊಸ ದಾಖಲೆ ಸೃಷ್ಟಿಸಿದ ಭಾರತದ ಶೂಟರ್‌ಗಳು

ಹಾಂಗ್‌ಝೌ : ಏಷ್ಯನ್ ಗೇಮ್ಸ್​ 2023ರಲ್ಲಿ ಚಿನ್ನದ ಪದಕ ಬೇಟೆಯನ್ನು ಭಾರತ ಆರಂಭಿಸಿದ್ದು, ಶೂಟಿಂಗ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಲಭಿಸಿದೆ. ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತದ ದಿವ್ಯಾಂಶ್ ಸಿಂಗ್ ಪವಾರ್, ರುದ್ರಂಕ್ಷ್ ಬಾಳಾಸಾಹೇಬ್ ಮತ್ತು ಐಶ್ವರ್ಯ ತೋಮರ್ ಅವರು ವಿಶ್ವದಾಖಲೆ ನಿರ್ಮಿಸಿ. ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಶೂಟಿಂಗ್ ಹೊರತಾಗಿ ಎರಡನೇ ದಿನವೂ ಭಾರತ ರೋಯಿಂಗ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದೆ. 19ನೇ ಏಷ್ಯನ್ ಗೇಮ್ಸ್​ನ ಮೊದಲ ದಿನ ಬೆಳ್ಳಿ ಪದಕ …

ಏಷಿಯನ್‌ ಗೇಮ್ಸ್‌ : ಚಿನ್ನದ ಪದಕದೊಂದಿಗೆ ಹೊಸ ದಾಖಲೆ ಸೃಷ್ಟಿಸಿದ ಭಾರತದ ಶೂಟರ್‌ಗಳು Read More »

ವಾಲಿಬಾಲ್ : ಜ್ಞಾನಸುಧಾದ ಸನ್ನಿಧಿ ರಾಜ್ಯಮಟ್ಟಕ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ತಾಲೂಕಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದ್ದು, ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಸನ್ನಿಧಿ ( ವಾಣಿಜ್ಯ ವಿಭಾಗ) ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ರಾಜ್ಯಮಟ್ಟಕ್ಕೆ ಆಯ್ಕೆಗೊಂಡ ಕಾರ್ಕಳ ತಾಲೂಕು ವಾಲಿಬಾಲ್ ತಂಡದ ಎಲ್ಲಾ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ.

ಭಾರತದ ರನ್‌ ಪರ್ವತ ಏರಲಾಗದೆ ಬಸವಳಿದ ಆಸ್ಟ್ರೇಲಿಯ

ಕಿರುಸರಣಿ 2-0 ಅಂತರದಿಂದ ಭಾರತ ವಶ ಇಂದೋರ್: ವಿಶ್ವಕಪ್‌ ಕ್ರಿಕೆಟ್‌ ಕೂಟಕ್ಕೂ ಮುನ್ನ ಆಸ್ಟ್ರೇಲಿಯ ವಿರುದ್ಧ ನಡೆದ ಕಿರುಸರಣಿಯನ್ನು ಭಾರತ 2-0 ಅಂತರದಿಂದ ವಶಪಡಿಸಿಕೊಂಡಿದೆ. ನಿನ್ನೆ ಇಂದೋರ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತ ರನ್‌ಗಳನ್ನು ರಾಶಿ ಹಾಕಿತ್ತು. ಮಳೆಯಿಂದ ಅಡಚಣೆಯುಂಟಾದ ಈ ಪಂದ್ಯವನ್ನು ಭಾರತ 99 ರನ್‌ ಅಂತರದಿಂದ ಗೆದ್ದು ಬೀಗಿದೆ.ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದು, ಭಾರತ 5 ವಿಕೆಟ್‌ಗೆ 399 ರನ್ ಗಳಿಸಿ, ಆಸ್ಟ್ರೇಲಿಯಕ್ಕೆ 400 …

ಭಾರತದ ರನ್‌ ಪರ್ವತ ಏರಲಾಗದೆ ಬಸವಳಿದ ಆಸ್ಟ್ರೇಲಿಯ Read More »

ಏಷ್ಯನ್‌ ಗೇಮ್ಸ್‌ : ಬೆಳ್ಳಿಯೊಂದಿಗೆ ಭಾರತ ಶುಭಾರಂಭ

ಏರ್‌ ರೈಫಲ್ಸ್‌, ಡಬಲ್ ಸ್ಕಲ್ಸ್‌ನಲ್ಲಿ ರಜತ ಪದಕ ಹ್ಯಾಂಗ್ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ಗೆ ಶನಿವಾರ ಅಧಿಕೃತ ಚಾಲನೆ ದೊರೆತಿದ್ದು, ಮೊದಲ ದಿನವೇ ಭಾರತದ ಕ್ರೀಡಾಪಟುಗಳು 2 ಬೆಳ್ಳಿಯೊಂದಿಗೆ ಪದಕ ಬೇಟೆ ಆರಂಭಿಸಿದ್ದಾರೆ.ಮಹಿಳೆಯರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತ ಒಟ್ಟು 1886 ಅಂಕಗಳೊಂದಿಗೆ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿತು.ರಮಿತಾ, ಮೆಹುಲಿ ಘೋಷ್ ಮತ್ತು ಆಶಿ ಚೌಕ್ಸೆ ಅವರು 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮೊದಲ ಪದಕವನ್ನು ಗೆದ್ದುಕೊಂಡಿದ್ದಾರೆ.ಮತ್ತೊಂದೆಡೆ ಚೀನಾ 1896.6 ಅಂಕಗಳೊಂದಿಗೆ …

ಏಷ್ಯನ್‌ ಗೇಮ್ಸ್‌ : ಬೆಳ್ಳಿಯೊಂದಿಗೆ ಭಾರತ ಶುಭಾರಂಭ Read More »

ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಮೂಡುಬಿದಿರೆ : ಗೋವಿಂದದಾಸ ಪದವಿ ಪೂರ್ವ ಕಾಲೇಜು ಸುರತ್ಕಲ್ ಇಲ್ಲಿ ನಡೆದ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮೂಡಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಧಾನ್ ಹಾಗೂ ಶ್ರಾವ್ಯ ಡೋಂಗ್ರೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಹರ್ಷವ್ಯಕ್ತಪಡಿಸಿದ್ದಾರೆ ಮತ್ತು ವಿದ್ಯಾರ್ಥಗಳು ಹೆಚ್ಚಿನ ಸಾಧನೆಗೈಯ್ಯಲಿ ಎಂದು ಶುಭ ಹಾರೈಸಿದ್ದಾರೆ.

ಇಂದು ಮೊಹಾಲಿಯಲ್ಲಿ ಭಾರತ-ಆಸ್ಟ್ರೇಲಿಯ ಪಂದ್ಯ

ವಿಶ್ವಕಪ್‌ಗೆ ಪೂರ್ವಭಾವಿಯಾಗಿ ಕಿರುಸರಣಿ ಮೊಹಾಲಿ: ವಿಶ್ವಕಪ್‌ ಕೂಟಕ್ಕೂ ಮುನ್ನ ಭಾರತ ಮತ್ತು ಆಸ್ಟ್ರೇಲಿಯ ತಂಡ ಕಿರುಸರಣಿಯೊಂದನ್ನು ಆಡಲಿದ್ದು, ಇದರ ಮೊದಲ ಪಂದ್ಯ ಇಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದೆ. ಮಧ್ಯಾಹ್ನ 1.30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಐಸಿಸಿ ಏಕದಿನ ವಿಶ್ವಕಪ್ ಅ.5ರಂದು ಪ್ರಾರಂಭವಾಗುವ ಮೊದಲು ಎರಡೂ ತಂಡಗಳಿಗೆ ಈ ಸರಣಿಯು ಅಂತಿಮ ತಯಾರಿಯಾಗಿದೆ. ಮೊದಲ ಎರಡು ಏಕದಿನ ಪಂದ್ಯದಿಂದ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಕೆಎಲ್ ರಾಹುಲ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.ಟೀಮ್ …

ಇಂದು ಮೊಹಾಲಿಯಲ್ಲಿ ಭಾರತ-ಆಸ್ಟ್ರೇಲಿಯ ಪಂದ್ಯ Read More »

ಲಂಕಾ ದಹನಕ್ಕೆ ಮುಂದಾದ ಮೊಹಮ್ಮದ್ ಸಿರಾಜ್

ಕೊಲಂಬೊ : ಏಷಿಯಾ ಕಪ್ ಕ್ರಿಕೆಟ್ ಕೂಟದ ಫೈನಲ್ ಪಂದ್ಯ ಏಕಪಕ್ಷೀಯವಾಗಿ ಸಾಗುವ ಲಕ್ಷಣ ಗೋಚರಿಸುತ್ತಿದೆ. ಟಾಸ್‌ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, 18 ರನ್ ಪೇರಿಸುವ ಹೊತ್ತಿಗೆ 6 ವಿಕೆಟ್ ಕಳೆದುಕೊಂಡು ದಿಕ್ಕು ತಪ್ಪಿದ ಹಡಗಿನಂತೆ ಆಗಿದೆ. ಭಾರತ ತಂಡದ ಮೊಹಮದ್ ಸಿರಾಜ್ ತನ್ನ ಘಾತಕ ಸ್ಪೆಲ್ ಮೂಲಕ ಐದು ವಿಕೆಟ್ ಕಬಳಿಸಿದ್ದಾರೆ. ಒಂದು ವಿಕೆಟ್ ಜಸ್ಪ್ರೀತ್ ಬುಮ್ರಾ ಪಾಲಾಗಿದೆ. ಶ್ರೀಲಂಕಾದ ಪ್ರಮುಖ ಆಟಗಾರರು ಈಗಾಗಲೇ ಪೆವಿಲಿಯನ್ ಸೇರಿದ್ದು ಭಾರತವು ಏಷಿಯಾ ಕಪ್ ಕೂಟದಲ್ಲಿ …

ಲಂಕಾ ದಹನಕ್ಕೆ ಮುಂದಾದ ಮೊಹಮ್ಮದ್ ಸಿರಾಜ್ Read More »

ಇಂದು ಏಷ್ಯಾಕಪ್‌ ಫೈನಲ್‌ : ಭಾರತ-ಶ್ರೀಲಂಕಾ ಮುಖಾಮುಖಿ

ಟೀಂ ಇಂಡಿಯಾದ ಟ್ರೋಫಿ ಬರ ನೀಗಲಿ ಎಂದು ಹಾರೈಕೆ ಕೊಲಂಬೊ : ಏಷ್ಯಾಕಪ್ ಟೂರ್ನಿಯ ಫೈನಲ್‌ ಹಣಾಹಣಿ ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಕೊಲಂಬೊದ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದ್ದು. ಬಹುಕಾಲದಿಂದ ಪ್ರಮುಖ ಟ್ರೋಫಿಯನ್ನು ಗೆಲ್ಲದೆ ಕ್ರಿಕೆಟ್‌ ಅಭಿಮಾನಿಗಳನ್ನು ನಿರಾಶೆಗೆ ತಳ್ಳಿರುವ ಟೀಂ ಇಂಡಿಯಾ ಈ ಟೂರ್ನಿಯಲ್ಲಾದರೂ ಟ್ರೋಫಿ ಬರ ನೀಗಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.ಯಾವ ತಂಡ ಚಾಂಪಿಯನ್ ಆಗಲಿದೆ ಎಂಬುದು ಇನ್ನು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ. ಸ್ಪರ್ಧೆಯಲ್ಲಿ ಉಭಯ ತಂಡಗಳು ಅಮೋಘ ಪ್ರದರ್ಶನ ನೀಡಿವೆ. ಸೂಪರ್ …

ಇಂದು ಏಷ್ಯಾಕಪ್‌ ಫೈನಲ್‌ : ಭಾರತ-ಶ್ರೀಲಂಕಾ ಮುಖಾಮುಖಿ Read More »

error: Content is protected !!
Scroll to Top