ರಾಜ್ಯ

ರಾಜಧಾನಿಯ 15 ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

ಸ್ಥಳಕ್ಕೆ ಡಿಸಿಎಂ ಡಿಕೆಶಿ, ಪೊಲೀಸರ ಭೇಟಿ ಬೆಂಗಳೂರು : ರಾಜಧಾನಿ ಬೆಂಗಳೂರಿನ 15 ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬಸವೇಶ್ವರ ನಗರ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಮಕ್ಕಳನ್ನು ಮನೆಗೆ ಕಳಿಸಲಾಗಿದೆ. ಪೋಷಕರೂ ಆತಂಕಗೊಂಡು ಶಾಲೆ ಬಳಿಗೆ ಓಡೋಡಿ ಬರುತ್ತಿದ್ದಾರೆ. ಬಾಂಬ್ ಬೆದರಿಕೆ ಸುದ್ದಿ ಹಬ್ಬುತ್ತಿದ್ದಂತೇ ಡಿಸಿಎಂ ಡಿಕೆ ಶಿವಕುಮಾರ್ ಸದಾಶಿವನಗರದ ನ್ಯೂ ಅಕಾಡೆಮಿ ಶಾಲೆಗೆ ಭೇಟಿ ನೀಡಿದ್ದಾರೆ. …

ರಾಜಧಾನಿಯ 15 ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ಬರಪೀಡಿತ ತಾಲೂಕುಗಳ ರೈತರಿಗೆ 2 ಸಾವಿರ ರೂ. ಪರಿಹಾರ

ಕೇಂದ್ರದಿಂದ ಬರಪರಿಹಾರ ಹಣ ಬರಲಿಲ್ಲ ಎಂದು ಸಿದ್ದರಾಮಯ್ಯ ಆರೋಪ ಬೆಂಗಳೂರು : ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ಮೊದಲನೇ ಕಂತಿನಲ್ಲಿ ತಲಾ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ಅರ್ಹ ರೈತರಿಗೆ ತಲಾ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.ಕೇಂದ್ರದಿಂದ ಬೆಳೆ …

ಬರಪೀಡಿತ ತಾಲೂಕುಗಳ ರೈತರಿಗೆ 2 ಸಾವಿರ ರೂ. ಪರಿಹಾರ Read More »

ಪರಮೇಶ್ವರ್ ಅನಂತ್ ಹೆಗ್ಡೆ ಉಡುಪಿ ಹೆಚ್ಚುವರಿ ಎಸ್‌ಪಿ

ಉಡುಪಿ: ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಹಿಂದೆ ಪರಮೇಶ್ವರ್ ಅನಂತ್ ಹೆಗ್ಡೆ ಅವರು ಮಂಗಳೂರಿನ ಸಿಸಿಬಿ ಘಟಕದ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು.ಇನ್ನು 2021ರಲ್ಲಿ ಪರಮೇಶ್ವರ್ ಅನಂತ್ ಹೆಗ್ಡೆ ಅವರಿಗೆ ತನಿಖೆಯ ಶ್ರೇಷ್ಠತೆಗಾಗಿ ಪದಕ ನೀಡಿ ಗೌರವಿಸಲಾಗಿತ್ತು.ಹಿಂದೆ ಮಂಗಳೂರು ನಗರ ಸಿಸಿಬಿಯಲ್ಲಿ ಡಿವೈಎಸ್‌ಪಿಯಾಗಿದ್ದರು. ಬಂಟ್ವಾಳ, ಮೂಲಕಿಯಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಉಡಪಿ ಹೆಚ್ಚುವರಿ ಎಸ್‌ಪಿಯಾಗಿ ಅಪರಾಧ ವಿಭಾಗವನ್ನು ನೋಡಿಕೊಳ್ಳಲಿದ್ದಾರೆ.

ಶೂಟಿಂಗ್‌ ವೇಳೆ ಅವಘಡ – ಮಂಡ್ಯ ರಮೇಶ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು : ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗಲಿರುವ ಹೊಸ ಧಾರಾವಾಹಿ ‘ಆಸೆ’ ಶೂಟಿಂಗ್ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ. ಘಟನೆಯಲ್ಲಿ ನಟ ಮಂಡ್ಯ ರಮೇಶ್​ …

ಶೂಟಿಂಗ್‌ ವೇಳೆ ಅವಘಡ – ಮಂಡ್ಯ ರಮೇಶ್‌ ಆಸ್ಪತ್ರೆಗೆ ದಾಖಲು Read More »

ಹೈಕೋರ್ಟ್‌ ಕಟಕಟೆಗೆ ಡಿಕೆಶಿ ಕೇಸ್‌ ಹಿಂಪಡೆದ ವಿವಾದ

ಸಚಿವ ಸಂಪುಟ ತೀರ್ಮಾನದ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಯತ್ನಾಳ್‌ ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸಚಿವ ಸಂಪುಟದ ನಿರ್ಣಯ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.ಸಿಬಿಐ ದಾಖಲಿಸಿರುವ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಲಾಗಿದ್ದ ತಕರಾರು ಅರ್ಜಿ ವಜಾ ಮಾಡಿದ ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ …

ಹೈಕೋರ್ಟ್‌ ಕಟಕಟೆಗೆ ಡಿಕೆಶಿ ಕೇಸ್‌ ಹಿಂಪಡೆದ ವಿವಾದ Read More »

ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಸಲು 21 ದಿನ ಕಾಲಾವಕಾಶ ಕೋರಿದ ಎಎಸ್‌ಐ

ದೆಹಲಿ : ಜ್ಞಾನವಾಪಿ ಮಸೀದಿಯ ಆವರಣದಲ್ಲಿ ನಡೆಸಿದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ಹೆಚ್ಚುವರಿ ಮೂರು ವಾರಗಳ ಕಾಲಾವಕಾಶ ಕೋರಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಇಂದು (ನ. 28) ಅರ್ಜಿ ಸಲ್ಲಿಸಿದೆ. ಸಮಗ್ರ ವರದಿಯನ್ನು ಹೊಂದಿಸಲು ಮತ್ತು ಅಂತಿಮಗೊಳಿಸಲು ಹೆಚ್ಚಿನ ಸಮಯವನ್ನು ಕೋರಿ ಎಎಸ್‌ಐ ಅನ್ನು ಪ್ರತಿನಿಧಿಸುವ ಸ್ಥಾಯಿ ಸರಕಾರಿ ವಕೀಲ ಅಮಿತ್ ಶ್ರೀವಾಸ್ತವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. 100 ದಿನಗಳ ಅವಧಿಯ ವ್ಯಾಪಕ ಸಮೀಕ್ಷೆಯು ಸುಮಾರು ಒಂದು ತಿಂಗಳ …

ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಸಲು 21 ದಿನ ಕಾಲಾವಕಾಶ ಕೋರಿದ ಎಎಸ್‌ಐ Read More »

ಚಾಮುಂಡಿ ದೇವಿಗೆ ಗೃಹಲಕ್ಷ್ಮೀ ಹಣ ಒಂದೇ ಕಂತಿನಲ್ಲಿ ಪಾವತಿ

5 ವರ್ಷದ ಹಣವನ್ನು ಒಂದೆ ಕಂತಿನಲ್ಲಿ ನೀಡಿ ಹರಕೆ ತೀರಿಸಿದ ಶಾಸಕ ಮೈಸೂರು: ಮಹಿಳೆಯರ ಮನಗೆಲ್ಲಲು ಚುನಾವಣೆ ಸಂದರ್ಭ ಘೋಷಿಸಿದ್ದ ಗೃಹಲಕ್ಷ್ಮೀ ಸ್ಕೀಂಗೆ ಮೈಸೂರಿನ ಚಾಮುಂಡಿ ದೇವಿಯನ್ನೂ ಫಲಾನುಭವಿ ಮಾಡಿದ್ದ ಸರಕಾರ ಇದೀಗ ಸ್ಕೀಂನ ಹಣವನ್ನು ಒಂದೇ ಕಂತಿನಲ್ಲಿ ದೇವಿಗೆ ನೀಡಿದೆ.ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ …

ಚಾಮುಂಡಿ ದೇವಿಗೆ ಗೃಹಲಕ್ಷ್ಮೀ ಹಣ ಒಂದೇ ಕಂತಿನಲ್ಲಿ ಪಾವತಿ Read More »

ನಿಗಮ-ಮಂಡಳಿ ಪಟ್ಟಿಗೆ ಇಂದು ಫೈನಲ್‌ ಟಚ್‌

ಮೊದಲ ಪಟ್ಟಿಯಲ್ಲಿ 25 ಶಾಸಕರಿಗೆ, ವಿಧಾನ ಪರಿಷತ್‌ ಸದಸ್ಯರಿಗೆ ಹುದ್ದೆ? ಬೆಂಗಳೂರು : ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಹುದ್ದೆಯ ಮೊದಲ ಲಿಸ್ಟ್‌ ಇಂದು ಅಂತಿಮಗೊಳ್ಳುವ ಸಾಧ್ಯತೆಯಿದೆ. ಮೊದಲ ಹಂತದ ಪಟ್ಟಿ ಬಹುತೇಕ ಸಿದ್ಧಗೊಂಡಿದ್ದು, ಈ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ ಅಂತಿಮ ಹಂತದ ಚರ್ಚೆ ನಡೆಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಂಭಾವ್ಯರ ಪಟ್ಟಿಯಲ್ಲಿರುವ ಶಾಸಕರು ಹಾಗೂ ನಾಯಕರ ಅಭಿಪ್ರಾಯಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಂಗ್ರಹಿಸಿದ್ದು, ಈ ಅಭಿಪ್ರಾಯಗಳನ್ನು …

ನಿಗಮ-ಮಂಡಳಿ ಪಟ್ಟಿಗೆ ಇಂದು ಫೈನಲ್‌ ಟಚ್‌ Read More »

ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್. ಕೆ ಅತೀಕ್‌ ನೇಮಕ

ಬೆಂಗಳೂರು : ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್‌ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ. ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯರ್ಶಿಯಾಗಿದ್ದ ರಜನೀಶ್‌ ಗೋಯಲ್‌ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ. ನ. 30ರಂದು ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ಅಧಿಕಾರ ವಹಿಸಿಕೊಳ್ಳಲಿದ್ಧಾರೆ. ಲುತಾಫುಲ್ಲಾ ಖಾನ್‌ ಅವರು ತುಮಕೂರು ಜಿಲ್ಲೆ ಪಾವಗಡದವರು. 1991ನೇ …

ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್. ಕೆ ಅತೀಕ್‌ ನೇಮಕ Read More »

ಕಾಂತಾರ ಅಧ್ಯಾಯ -1‌ ಚಿತ್ರದ ಮೂಹೂರ್ತ

ಉಡುಪಿ : ಕಾಂತಾರ ಸಿನಿಮಾವು ಸಿನಿ ರಂಗದಲ್ಲಿ ಹೊಸ ಸಂಚಲನ ಮೂಡಿಸಿದ್ದರಲ್ಲಿ ಯಾವುದೇ ಅನುಮಾನವಿಲ್ಲ. ಕಾಂತಾರದ ಎರಡನೇ ಭಾಗ ಬರಲಿದೆ ಎಂದಾಗಿನಿಂದಲೂ ಅಭಿಮಾನಿಗಳ ವಲಯದಲ್ಲಿ ಒಂದು ಕುತೂಹಲ ಇತ್ತು. ಇಂದು (ನ. 27) ಚಿತ್ರ ತಂಡ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ದೇವಸ್ಥಾನದಲ್ಲಿ ‘ಕಾಂತಾರ ಚಾಪ್ಟರ್ – 1’ ಚಿತ್ರದ ಮುಹೂರ್ತ ನೆರವೇರಿಸುವುದರ ಜೊತೆಗೆ ಮೊದಲ ಪೋಸ್ಟರ್ ಅನಾವರಣ ಮಾಡಿದೆ. ಜನವರಿಯಲ್ಲಿ ಚಿತ್ರಕ್ಕೆ ಶೂಟಿಂಗ್ ಆರಂಭ ಆಗಲಿದೆ ಎನ್ನಲಾಗುತ್ತಿದೆ. ಕುತೂಹಲ ಕೆರಳಿಸುತ್ತಿರುವ ಪೋಸ್ಟರ್ಇಂದು ಚಿತ್ರದ ಮೂಹೂರ್ತದೊಂದಿಗೆ …

ಕಾಂತಾರ ಅಧ್ಯಾಯ -1‌ ಚಿತ್ರದ ಮೂಹೂರ್ತ Read More »

error: Content is protected !!
Scroll to Top