• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜ್ಯ

ಸಾಮರ್ಥ್ಯವಿದ್ದರೆ ತನಿಖೆ ಮಾಡಿಸಿ –ಕಾಂಗ್ರೆಸ್‌ ಗೆ ಶ್ರೀರಾಮುಲು ಸವಾಲು

    ದಾವಣಗೆರೆ: ಮಾಸ್ಕ್ ಸ್ಯಾನಿಟೈಸರ್ ಖರೀದಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಸ್ಪಷ್ಟಪಡಿಸಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕುಣಿಯಲು ಬಾರದವರಿಗೆ ನೆಲ ಡೊಂಕು ಎಂಬಂತೆ ವಿಪಕ್ಷಗಳು ವರ್ತಿಸುತ್ತಿವೆ ಎಂದು ವ್ಯಂಗ್ಯವಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವಿಪಕ್ಷದವರು ಏನು ಕೆಲಸ ಮಾಡಿದ್ದಾರೆ? ಕೇವಲ ಆರೋಪದಿಂದ ಪ್ರಯೋಜನವಿಲ್ಲ, ಕೋವಿಡ್ ಸಂದರ್ಭದ ಪ್ರತಿ ಪೈಸೆಯ ಖರ್ಚುವೆಚ್ಚದ ಲೆಕ್ಕ ನೀಡುತ್ತೇವೆ. ಯಾವುದೇ ತನಿಖೆಗೂ

ಸಾಮರ್ಥ್ಯವಿದ್ದರೆ ತನಿಖೆ ಮಾಡಿಸಿ –ಕಾಂಗ್ರೆಸ್‌ ಗೆ ಶ್ರೀರಾಮುಲು ಸವಾಲು Read More »

ಅನ್ನಭಾಗ್ಯ ಕಲ್ಪನೆ ನನ್ನದು- ಸಿದ್ದುಗೆ ಹೆಚ್​. ವಿಶ್ವನಾಥ್​ ಗುದ್ದು

    ಮೈಸೂರು: ಪ್ರಧಾನಿ ಮೇಲೆ ವಿಪಕ್ಷಗಳು ಮಾಡಿರುವ ಪದ ಪ್ರಯೋಗ ದೇಶದ ಜನರು ಮೆಚ್ಚಲ್ಲ ಎಂದು ಮಾಜಿ ಸಚಿವ ಹೆಚ್​ ವಿಶ್ವನಾಥ್ ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ಸಾಧನೆ ಏನು, ಮೋದಿ ಸಾಧನೆ ಏನು ಎನ್ನುವುದು ದೇಶಕ್ಕೆ ಗೊತ್ತಿದೆ.ಸೋಲಿನ ಹತಾಶೆಯಲ್ಲಿರುವ ದೊಡ್ಡವರೆಲ್ಲ ಅಪ್ರಬುದ್ಧರಾಗಿ ಮಾತಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಅನ್ನಭಾಗ್ಯ ಕಲ್ಪನೆ ನನ್ನದು- ಸಿದ್ದುಗೆ ಹೆಚ್​. ವಿಶ್ವನಾಥ್​ ಗುದ್ದು Read More »

ಕೊರೊನಾ ಕಾವಳ : ಸರ್ವಪಕ್ಷ ಸಭೆ ಕರೆಯಲು ಎಚ್.ಕೆ.ಪಾಟೀಲ್‌ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈಮೀರುವ ಹಂತ ತಲುಪಿದ್ದು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಕ್ಷಣ ಸರ್ವಪಕ್ಷಗಳ ಸಭೆ ಕರೆಯಬೇಕು’ ಎಂದು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್‌ ಶಾಸಕ ಎಚ್‌.ಕೆ. ಪಾಟೀಲ ಆಗ್ರಹಿಸಿದರು. ಮಾಧ್ಯಮ ಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ವಿರೋಧ ಪಕ್ಷಗಳ ಸಲಹೆ ಪಡೆಯಬೇಕು’. ‘ಇಟಲಿಯ ಪರಿಸ್ಥಿತಿ ರಾಜ್ಯದಲ್ಲಿ ಬರುವ ಮುನ್ನ ಸಭೆ ಕರೆಯಬೇಕು. ಈಗಾಗಲೇ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡಿದೆ. ಆ ಸಲಹೆಗಳನ್ನು ಪಾಲಿಸಿ, ಸೋಂಕು

ಕೊರೊನಾ ಕಾವಳ : ಸರ್ವಪಕ್ಷ ಸಭೆ ಕರೆಯಲು ಎಚ್.ಕೆ.ಪಾಟೀಲ್‌ ಆಗ್ರಹ Read More »

ಚಾರ್ಮಾಡಿ ಘಾಟಿಯಲ್ಲಿ ವಾಹನ ನಿಲ್ಲಿಸಿದರೆ ಕೇಸ್

ಬೆಂಗಳೂರು : ಪ್ರತಿ ಮಳೆಗಾಲದಲ್ಲಿಯೂ ಗುಡ್ಡ ಜರಿಯುವುದು, ವಾಹನಗಳು ಬ್ಲಾಕ್‌ ಆಗುವಂತಹ ಸಮಸ್ಯೆಗಳು ಚಾರ್ಮಾಡಿ ಘಾಟ್ ರಸ್ತೆಗಳಲ್ಲಿ ಆಗುತ್ತಲೇ ಇರುತ್ತವೆ. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ  ಚಾರ್ಮಾಡಿ ಘಾಟ್ ನಲ್ಲಿ ವಾಹನ ನಿಲುಗಡೆ ನಿಷೇಧ ಹೇರಿದೆ. ಚಾರ್ಮಾಡಿ ಘಾಟ್ ನಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದ್ದು, ವಾಹನ ನಿಲ್ಲಿಸಿದರೆ ಪೊಲೀಸರು ಕೇಸು ದಾಖಲಿಸಿಕೊಳ್ಳಲಿದ್ದಾರೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಪ್ರಯಾಣಿಕರಿಗೆ ಈ ಬಗ್ಗೆ ಸೂಚನೆ ನೀಡುತ್ತಿದ್ದಾರೆ.    ಸೂಚನೆ ನಾಮಫಲಕ ಹಾಕಿರುವ ಜಿಲ್ಲಾಡಳಿತ ಮಳೆಯ ನಡುವೆ ವಾಹನ ನಿಲ್ಲಿಸಿ ಆಪಾಯಕಾರಿ  ಸ್ಥಳಗಳಲ್ಲಿ

ಚಾರ್ಮಾಡಿ ಘಾಟಿಯಲ್ಲಿ ವಾಹನ ನಿಲ್ಲಿಸಿದರೆ ಕೇಸ್ Read More »

ಕೊರೊನಾ ನಿರ್ವಹಣೆಗೆ ತಂಡ ರಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಾಂಡವ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊರೊಜಾ ನಿರ್ವಹಣೆಗೆಂದೇ ಪ್ರತ್ಯೇಕ ತಂಡಗಳನ್ನು ರಚಿಸಿದೆ. 14 ತಂಡ ರಚಿಸಿ ಸರಕಾರ ಆದೇಶ ಹೊರಡಿಸಿದೆ. ಪ್ರತಿ ಜಿಲ್ಲೆಯಲ್ಲೂ ತಂಡಗಳು ಕಾರ್ಯನಿರ್ವಹಣೆ ಮಾಡಲಿವೆ. ಕೊರೊನಾ ಚಿಕಿತ್ಸಾ ಕೇಂದ್ರಗಳಿಗೂ ತಂಡ ರಚನೆ ಮಾಡಲಾಗಿದೆ. ತಂಡಗಳಿಗೆ ಚಿಕಿತ್ಸಾ ಕೇಂದ್ರ ಸ್ಥಾಪನೆಯ ಹೊಣೆ ನೀಡಲಾಗಿದೆ. ಸಂಪರ್ಕಿತರ ಪತ್ತೆ, ಪರೀಕ್ಷೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ. ಸೋಂಕಿತರ ಮೃತರ ಅಂತ್ಯ ಸಂಸ್ಕಾರಕ್ಕೂ ತಂಡ ರಚನೆಯಾಗಿದೆ. 

ಕೊರೊನಾ ನಿರ್ವಹಣೆಗೆ ತಂಡ ರಚನೆ Read More »

ಅಕ್ಟೋಬರ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯುವ ಸಾದ್ಯತೆ ಇದೆ. ಏಕೆಂದರೆ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಲ್ಲಿಸಿದ ಪ್ರಮಾಪತ್ರದಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ.  ಸರಕಾರ ಗ್ರಾ.ಪಂ. ಚುನಾವಣೆಯನ್ನು ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ನ್ಯಾಯಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದಿತ್ತು. ಈ ವೇಳೆ ಚುನಾವಣಾ ಆಯೋಗದ ವತಿಯಿಂದ ಪಂಚಾಯಿತಿ ಚುನಾವಣೆ ಕುರಿತಾಗಿ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಾಗಿದೆ. ಜುಲೈ 25ಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ

ಅಕ್ಟೋಬರ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ? Read More »

ಚಿಕ್ಕಮಗಳೂರಲ್ಲಿ ಬಿಜೆಪಿ ನಾಯಕರ ರಹಸ್ಯ ಸಭೆ-ಮತ್ತೆ ಶುರುವಾಯಿತಾ ಭಿನ್ನರ ಕಾಟ?

ಮುಳ್ಳಯ್ಯನಗಿರಿ ತಪ್ಪಲಿನಲ್ಲಿರೋ ರೆಸಾರ್ಟ್‌ ಒಂದರಲ್ಲಿ ಕೆಲ ಸಚಿವರು, ಶಾಸಕರು, ಮುಖಂಡರು ರಹಸ್ಯ ಸಭೆ ಮಾಡಿದ್ದಾರೆ. ಈ ಸಭೆಗೆ ಸದ್ಯ ಬೆಂಗಳೂರಿನ ಕೊರೊನಾ ಉಸ್ತುವಾರಿಯಾಗಿರೋ ಆರ್ ಅಶೋಕ್, ಸಿ.ಟಿ. ರವಿ, ಜಗದೀಶ್ ಶೆಟ್ಟರ್, ಈಶ್ವರಪ್ಪ ಹಾಜರಾಗಿದ್ದು ವಿಶೇಷ. ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ತಾಂಡವ ಕೈ ಮೀರುತ್ತಿದೆ. ಜನರು ಸರಿಯಾದ ಚಿಕಿತ್ಸೆ ಲಭಿಸದೆ ಪರದಾಡುತ್ತಿದ್ದಾರೆ. ಆಸ್ಪತ್ರೆಗಳು ಹೆಚ್ಚುತ್ತಿರುವ ರೋಗಿಗಳ ಒತ್ತಡ ತಾಳಲಾಗದೆ ಕುಸಿಯುವ ಹಂತಕ್ಕೆ ತಲುಪಿವೆ.ಈ ಸಂದರ್ಭದಲ್ಲಿ ಜನಪ್ರತಿನಿಧಿಗಳಾದವರು ಜನರ ಸೇವೆಗೆ ಟೊಂಕ ಕಟ್ಟಿ ನಿಲ್ಲಬೇಕಿತ್ತು.ಆದರೆ ಪ್ರಸ್ತುತ ಸರಕಾರದಲ್ಲಿ ಕ್ರಿಯಾಶೀಲರಾಗಿರುವ

ಚಿಕ್ಕಮಗಳೂರಲ್ಲಿ ಬಿಜೆಪಿ ನಾಯಕರ ರಹಸ್ಯ ಸಭೆ-ಮತ್ತೆ ಶುರುವಾಯಿತಾ ಭಿನ್ನರ ಕಾಟ? Read More »

ಕೊರೊನಾ ಸೋಂಕಿತರಿಗೆ ಸಿಗಲಿದೆ ಪೌಷ್ಠಿಕ ಆಹಾರ

ಬೆಂಗಳೂರು : ರಾಜ್ಯದಾದ್ಯಂತ ಇರುವ ಜಿಲ್ಲಾ ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೊವಿಡ್ ಕೇರ್ ಕೇಂದ್ರ ಹಾಗೂ ಕೊವಿಡ್ ಕೇರ್ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೊರೊನಾ ಸೋಂಕಿತರಿಗೆ ಪೌಷ್ಠಿಕ ಆಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಳಗಿನ ಉಪಹಾರವನ್ನು 7 ಗಂಟೆಗೆ, ಮಧ್ಯಾಹ್ನದ ಊಟವನ್ನು 1 ಗಂಟೆಗೆ ಹಾಗೂ ರಾತ್ರಿ ಊಟವನ್ನು 7 ಗಂಟೆಗೆ ನಿಯಮಿತವಾಗಿ ನೀಡಬೇಕು. ಪ್ರತಿ ವ್ಯಕ್ತಿಯ ಆಹಾರ ವೆಚ್ಚ 250 ರೂ.ಗಳಿಗೆ ಮೀರದಂತೆ ಕ್ರಮ ವಹಿಸಬೇಕು. ಪ್ರತಿ ನಿತ್ಯ ಆಹಾರ ವ್ಯವಸ್ಥೆಯನ್ನು ರೋಗಿಗಳಿಗೆ, ವೈದ್ಯರಿಗೆ, ಅಧಿಕಾರಿಗಳಿಗೆ

ಕೊರೊನಾ ಸೋಂಕಿತರಿಗೆ ಸಿಗಲಿದೆ ಪೌಷ್ಠಿಕ ಆಹಾರ Read More »

ನಾಳೆ ಸಾರಿಗೆ ನಿಗಮ ನೌಕರರ ಪ್ರತಿಭಟನೆ

ಬೆಂಗಳೂರು:  ರಾಜ್ಯ ಸರ್ಕಾರದಿಂದ ಪ್ರತಿಯೊಂದು ಸಾರಿಗೆ ನಿಗಮಕ್ಕೆ ಕನಿಷ್ಟ 500 ಕೋಟಿ ರೂ. ಗಳ ಸಂಕಷ್ಟ ಪರಿಹಾರ ಪ್ಯಾಕೇಜನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು‌ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದೆ. ಕಚ್ಚಾ ತೈಲ ಬೆಲೆ ವಿಪರೀತವಾಗಿ ಕುಸಿದಿದೆ. ಆದರೆ ಕಳೆದ ಹದಿನೈದು ದಿನಗಳಲ್ಲಿ ಲೀಟರ್ ಡೀಸೆಲ್ ಬೆಲೆ 11 ರೂ.ಗಳಷ್ಟು ಹೆಚ್ಚಳವಾಗಿದೆ. ಇದರಿಂದ ಸಾರಿಗೆ ನಿಗಮಗಳು ನಷ್ಟಕ್ಕೆ ಒಳಗಾಗಲಿವೆ. ಆದ್ದರಿಂದ ಅಂತಾರಾಷ್ಟ್ರೀಯ ಬೆಲೆ

ನಾಳೆ ಸಾರಿಗೆ ನಿಗಮ ನೌಕರರ ಪ್ರತಿಭಟನೆ Read More »

ಹಾಸ್ಯ ನಟ ರಾಜ ಗೋಪಾಲ್ ನಿಧನ

650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಕಲಾವಿದ ಬೆಂಗಳೂರು : ಕನ್ನಡದ ಹಾಸ್ಯ ಕಲಾವಿದ ರಾಜ ಗೋಪಾಲ್ ನಿಧನರಾಗಿದ್ದಾರೆ. ಅಸ್ತಮ ಮತ್ತು ಕಿಡ್ನಿ ಸಮಸ್ಯೆ ಯಿಂದ ಬಳಲುತ್ತಿದ್ದ  ರಾಜ ಗೋಪಾಲ್ ಅವರಿಗೆ 69 ವರ್ಷ ವಯಸ್ಸಾಗಿತ್ತು. ನಿನ್ನೆ ರಾತ್ರಿ 1ಗಂಟೆಗೆ ಮನೆಯಲ್ಲೆ ಕೊನೆಯುಸಿರೆಳೆದ ರಾಜ್ ಗೋಪಾಲ್ ಕೆಂಗೇರಿ ಬಳಿಯ ವಲಗರ ಹಳ್ಳಿಯಲ್ಲಿ ಬಿಡಿಎ ನಿರ್ಮಿಸಿರೋ ವಸತಿ ಸಮುಚ್ಚಯದಲ್ಲಿ ವಾಸವಿದ್ದರು. ರಾಜ್ ಗೋಪಾಲ್‌ಗೆ ಮೂರು ಜನ ಹೆಣ್ಣುಮಕ್ಕಳಿದ್ದಾರೆ. ಕನ್ನಡ ತಮಿಳು ಸೇರಿದಂತೆ 650 ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿದ್ದಾರೆ. ಫೇಮಸ್ ಅರ್ಕೆಸ್ಟ್ರಾಗಳಲ್ಲಿ ಮಿಮಿಕ್ರಿ ಮಾಡಿ ಹೆಸರು ಮಾಡಿದ್ದ ರಾಜ್ ಗೋಪಾಲ್ ವಿಷ್ಣುವರ್ಧನ್,

ಹಾಸ್ಯ ನಟ ರಾಜ ಗೋಪಾಲ್ ನಿಧನ Read More »

error: Content is protected !!
Scroll to Top