ಜಿಎಸ್‌ಟಿ ದರ ಸರಳೀಕರಣದಿಂದ ರಾಜ್ಯದ ಆದಾಯಕ್ಕೆ ನಷ್ಟ : ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಜಿಎಸ್‌ಟಿ ದರ ಬದಲಾವಣೆಯಿಂದಾಗಿ ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಕುಸಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು, ಸೆಸ್‌ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಜಿಎಸ್‌ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ ದೇಶದ ಜಿಎಸ್‌ಟಿ ಸಂಗ್ರಹದಲ್ಲಿ










