ರಾಜ್ಯ ಸರ್ಕಾರ ದಿವಾಳಿ: ಬಡವರ ವೇತನ, ಬಿಪಿಎಲ್ ಕಾರ್ಡ್ ರದ್ದುಗೊಳಿಸುತ್ತಿರುವುದಕ್ಕೆ ನವೀನ್ ನಾಯಕ್ ಆಕ್ರೋಶ
ಕಾರ್ಕಳ: ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದ್ದು, ಆರ್ಥಿಕ ಮುಗ್ಗಟ್ಟಿನಿಂದಾಗಿ ಬಡವರ ಜನಪರ ಯೋಜನೆಗಳನ್ನು ರದ್ದುಗೊಳಿಸುವ ಮೂಲಕ ಜನದ್ರೋಹಿ ಕೆಲಸ ಮಾಡುತ್ತಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಕಟುವಾಗಿ ಟೀಕಿಸಿದ್ದಾರೆ.ಅಭಿವೃದ್ಧಿಗೆ ಹಣ ನೀಡಲಾಗದ ಸ್ಥಿತಿಯಲ್ಲಿರುವ ಸರ್ಕಾರ, ಈ ಹಿಂದೆ ಜಾರಿಯಲ್ಲಿದ್ದ ಉತ್ತಮ ಯೋಜನೆಗಳಿಗೆ ಕತ್ತರಿ ಹಾಕುವ ಮೂಲಕ ಬಡವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸುವ ನೆಪದಲ್ಲಿ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂದ್ಯಾ ಸುರಕ್ಷಾ, ವಿಧವಾ ವೇತನ […]










