Jnanasudha karkala

ಜ್ಞಾನಸುಧಾ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕು ಸಂರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ : ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಡಿ. 17ರಂದು ಮಕ್ಕಳ ಹಕ್ಕು ಸಂರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆ ನಯನ ಅವರು ಮಕ್ಕಳ ಹಕ್ಕುಗಳ ಬಗ್ಗೆ ಮಾತನಾಡಿ, ಮಕ್ಕಳ ಮೇಲೆ ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಭಾವನಾತ್ಮಕ ಹಿಂಸೆಗಳು ಶಾಲೆಯಲ್ಲಿ ಅಥವಾ ತಾವು ಬೆಳೆಯುತ್ತಿರುವ ಪರಿಸರದಲ್ಲಿ ಕಂಡುಬಂದಲ್ಲಿ […]

ಜ್ಞಾನಸುಧಾ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕು ಸಂರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ Read More »

ಮೇ 28 -29 : ಜ್ಞಾನಸುಧಾದಲ್ಲಿ ಮೌಲ್ಯಸುಧಾ – ಭಜನಾ ಸುಧಾ

ಜ್ಞಾನಯೋಗಿ ಶ್ರೀಸಿದ್ಧೇಶ್ವರ ಮಹಾಸ್ವಾಮಿಗಳ ಸಂಸ್ಮರಣೆ – ಗದಗ ಶ್ರೀ ಶಿವಾನಂದ ಬೃಹನ್ಮಠದ ಸ್ವಾಮಿ ಸದಾಶಿವಾನಂದ ಭಾಗಿ ಕಾರ್ಕಳ : ಶ್ರೀ ಮಹಾಗಣಪತಿ ದೇವಸ್ಥಾನ ಜ್ಞಾನಸುಧಾ ಹಾಗೂ ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್ ಸಹಯೋಗದಲ್ಲಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಮೇ 28ರಂದು ಸಂಜೆ 6 ಗಂಟೆಗೆ ಗಣಿತನಗರ ಜ್ಞಾನಸುಧಾ ಸಭಾಂಗಣದಲ್ಲಿ ತಿಂಗಳ ಸರಣಿ ಕಾರ್ಯಕ್ರಮ ಮೌಲ್ಯಸುಧಾ ನಡೆಯಲಿದೆ. ಕಾರ್ಯಕ್ರಮದಲ್ಲಿ ಗದಗದ ಜಗದ್ಗುರು ಶ್ರೀ ಶಿವಾನಂದ ಬೃಹನ್ಮಠದ ಪೂಜ್ಯ ಜಗದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳು ʼಪೂಜ್ಯ ಶ್ರೀ

ಮೇ 28 -29 : ಜ್ಞಾನಸುಧಾದಲ್ಲಿ ಮೌಲ್ಯಸುಧಾ – ಭಜನಾ ಸುಧಾ Read More »

ಎಸ್ಸೆಸೆಲ್ಸಿ ಮರುಮೌಲ್ಯ ಮಾಪನ ಫಲಿತಾಂಶ – ರಾಜ್ಯದ ಟಾಪ್ 10ರಲ್ಲಿ ಜ್ಞಾನಸುಧಾದ 18 ವಿದ್ಯಾರ್ಥಿಗಳು – 10 ವಿದ್ಯಾರ್ಥಿಗಳಿಗೆ 620ಕ್ಕಿಂತ – 42 ವಿದ್ಯಾರ್ಥಿಗಳಿಗೆ 600ಕ್ಕಿಂತ ಅಧಿಕ ಅಂಕ

ಕಾರ್ಕಳ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ 10ನೇ ತರಗತಿಯ ಪರೀಕ್ಷೆ-1ರ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10 ವಿದ್ಯಾರ್ಥಿಗಳು 625ರಲ್ಲಿ 620ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಈಗಾಗಲೇ ಸ್ವಸ್ತಿ ಕಾಮತ್ 625/625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದರು. ಮರು ಮೌಲ್ಯಮಾಪನದ ಮೂಲಕ ಲಿಖಿತ್ ಡಿ. ಶೆಟ್ಟಿ (623) ಮತ್ತು ಸಾಚಿ ಸುಜಯ್‌ ಕುಮಾರ್ ಶೆಟ್ಟಿ (623) ಅಂಕಗಳನ್ನು ಪಡೆದು ರಾಜ್ಯಕ್ಕೆ

ಎಸ್ಸೆಸೆಲ್ಸಿ ಮರುಮೌಲ್ಯ ಮಾಪನ ಫಲಿತಾಂಶ – ರಾಜ್ಯದ ಟಾಪ್ 10ರಲ್ಲಿ ಜ್ಞಾನಸುಧಾದ 18 ವಿದ್ಯಾರ್ಥಿಗಳು – 10 ವಿದ್ಯಾರ್ಥಿಗಳಿಗೆ 620ಕ್ಕಿಂತ – 42 ವಿದ್ಯಾರ್ಥಿಗಳಿಗೆ 600ಕ್ಕಿಂತ ಅಧಿಕ ಅಂಕ Read More »

ಕಾರ್ಕಳ ಜ್ಞಾನಸುಧಾದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ

ಕಾರ್ಕಳ : ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ ಅದು ಕ್ರೀಡಾ ಕ್ಷೇತ್ರದಲ್ಲಿ ಮಾತ್ರ ಎಂದು ಕೆ.ಎಂ.ಇ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ನೆಲ್ಲಿಕಾರು ಹೇಳಿದರು.ಅವರು ಶಾಲಾ ಶಿಕ್ಷಣ ಇಲಾಖೆ ಹಾಗೂ ಕಾರ್ಕಳ ಗಣಿತನಗರ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.ಪಠ್ಯೇತರ ಚಟುವಟಿಕೆಯು ವಿದ್ಯಾರ್ಥಿಯ ಜೀವನಕ್ಕೆ ರಹದಾರಿ. ಶಿಕ್ಷಣವೆಂದರೆ ಬರಿಯ ಓದಲ್ಲ. ಅದು ಮಾನವೀಯ ವಿಕಾಸದ ದಾರಿ. ಕ್ರೀಡಾಚಟುವಟಿಕೆಗಳಲ್ಲಿ

ಕಾರ್ಕಳ ಜ್ಞಾನಸುಧಾದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ Read More »

ಜ್ಞಾನಸುಧಾ ಎನ್ನೆಸ್ಸೆಸ್ ವಿದ್ಯಾರ್ಥಿನಿ ರಾಜ್ಯ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಆಯ್ಕೆ

ಕಾರ್ಕಳ : ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕಿ ಸಮಿಯಾ ಎಸ್. ಹೆಗ್ಡೆ ಜ. 26ರಂದು ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆಯುವ ರಾಜ್ಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ. ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಶಿಬಿರವು ಜ. 14 ರಿಂದ ಜ. 26 ರವರೆಗೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಜಿ.ಕೆ.ವಿ.ಕೆ ಬೆಂಗಳೂರು ಇಲ್ಲಿ ನಡೆಯಲಿದೆ. ಸಮಿಯಾ ಹಿರಿಯಡ್ಕದ ಸಂದೀಪ ಹೆಗ್ಡೆ ಹಾಗೂ

ಜ್ಞಾನಸುಧಾ ಎನ್ನೆಸ್ಸೆಸ್ ವಿದ್ಯಾರ್ಥಿನಿ ರಾಜ್ಯ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಆಯ್ಕೆ Read More »

ಸಿ.ಎ. ಅಂತಿಮ ಪರೀಕ್ಷೆ

ಜ್ಞಾನಸುಧಾದ ಹಳೆ ವಿದ್ಯಾರ್ಥಿಗಳಾದ ಸವಿತಾ ಶೆಣೈ – ತೇಜಸ್‌ ಆಚಾರ್ಯ ತೇರ್ಗಡೆ ಕಾರ್ಕಳ : ಐ.ಸಿ.ಎ.ಐ. ನಡೆಸಿದ ಸಿ.ಎ. ಅಂತಿಮ ಪರೀಕ್ಷೆ ಫಲಿತಾಂಶ ಜ. 9ರಂದು ಪ್ರಕಟಗೊಂಡಿದ್ದು, ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಸವಿತಾ ಶೆಣೈ ಮತ್ತು ತೇಜಸ್ ಆಚಾರ್ಯ ತೇರ್ಗಡೆ ಹೊಂದಿ ಸಾಧನೆ ಮೆರೆದಿದ್ದಾರೆ.ಸವಿತಾ ಶೆಣೈ ಅವರು ಕಾರ್ಕಳ ಬಂಡಿಮಠ ನಿವಾಸಿ ಸುರೇಶ್ ಶೆಣೈ ಅಲೆವೂರು ಹಾಗೂ ವಿದ್ಯಾವತಿ ಎಸ್. ಶೆಣೈ ದಂಪತಿ ಪುತ್ರಿ. ತೇಜಸ್ ಆಚಾರ್ಯ ಅವರು ಕುಕ್ಕುಂದೂರು ಗ್ರಾಮದ

ಸಿ.ಎ. ಅಂತಿಮ ಪರೀಕ್ಷೆ Read More »

ಜ್ಞಾನಸುಧಾ : ವಿದ್ಯಾರ್ಥಿ ಮಿತ್ರ ಸಿ.ಇ.ಟಿ ಅರ್ಜಿ ತರಬೇತಿ

ಕಾರ್ಕಳ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ʼವಿದ್ಯಾರ್ಥಿ ಮಿತ್ರʼ ಸಿ.ಇ.ಟಿ. ಅರ್ಜಿ ತುಂಬುವ ವಿಷಯದ ಕುರಿತು ಜ. 3ರಂದು ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಗಣಿತನಗರ ಕ್ಯಾಂಪಸ್‌ನಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲೆಯ ಖಾಸಗಿ, ಅನುದಾನಿತ, ಸರಕಾರಿ, ಸಿ.ಬಿ.ಎಸ್.ಇ ಹಾಗೂ ಐ.ಸಿ.ಎಸ್.ಇ 11 ಮತ್ತು 12ನೇ ತರಗತಿಯ ವಿಜ್ಞಾನ ವಿಷಯದ ಎಲ್ಲಾ ಉಪನ್ಯಾಸಕರು ಹಾಗೂ ಪ್ರಾಂಶುಪಾಲರಿಗೆ ಆಯೋಜಿಸಿದ ಈ

ಜ್ಞಾನಸುಧಾ : ವಿದ್ಯಾರ್ಥಿ ಮಿತ್ರ ಸಿ.ಇ.ಟಿ ಅರ್ಜಿ ತರಬೇತಿ Read More »

ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ – ಸಾಧಕ ವಿದ್ಯಾರ್ಥಿಗಳಿಗೆ 8 ಲಕ್ಷ ರೂ. ಪ್ರೋತ್ಸಾಹ ಧನ ವಿತರಣೆ

ಶೈಕ್ಷಣಿಕ ಕ್ಷೇತ್ರಕ್ಕೆ ಕರಾವಳಿ ಕೊಡುಗೆ ಅಪಾರ – ಮಧು ಬಂಗಾರಪ್ಪ ಕಾರ್ಕಳ : ಜ್ಞಾನಸುಧಾ ಶಿಕ್ಷಣ ಸಂಸ್ಥೆ ಮೌಲ್ಯಯುತ, ಗುಣಮಟ್ಟದ ಶಿಕ್ಷಣದೊಂದಿಗೆ ಸಮಾಜಮಖಿ ಕಾರ್ಯಗಳಿಗೆ ಕೊಡುಗೆ ನೀಡುತ್ತಿರುವುದು ‍ಶ್ಲಾಘನೀಯ ಕಾರ್ಯವೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು. ಅವರು ಡಿ. 23ರಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಹಾಗೂ ಶ್ರೇಷ್ಠ ಗಣಿತಜ್ಞ ಶ್ರೀನಿವಾಸ್ ರಾಮಾನುಜನ್‌ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗಣಿತ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರಕ್ಕೆ ಕರಾವಳಿಯ ಕೊಡುಗೆ ಅಪಾರ. ಇಲ್ಲಿನ ಶಿಕ್ಷಣ

ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ – ಸಾಧಕ ವಿದ್ಯಾರ್ಥಿಗಳಿಗೆ 8 ಲಕ್ಷ ರೂ. ಪ್ರೋತ್ಸಾಹ ಧನ ವಿತರಣೆ Read More »

ಜ್ಞಾನಸುಧಾ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

ನಿರಂತರ ಕಾರ್ಯಕ್ಷಮತೆಯಿಂದ ಯಶಸ್ಸು – ಗುರುಪ್ರಸಾದ್ ರಾವ್ ಕಾರ್ಕಳ : ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಡಿ. 16ರಂದು ಕಾಲೇಜು ಕ್ಯಾಂಪಸ್‌ನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.ಉಡುಪಿಯ ತ್ರಿಷಾ ವಿದ್ಯಾ ಕಾಲೇಜಿನ ಪ್ರಾಂಶುಪಾಲ ಗುರುಪ್ರಸಾದ್ ರಾವ್ ಮಾತನಾಡಿ, ಕಾಲೇಜು ಜೀವನದಲ್ಲೇ ವಿದ್ಯಾರ್ಥಿಗಳು ಉತ್ತಮ ಭವಿಷ್ಯದತ್ತ ಆಲೋಚಿಸಬೇಕು. ಈ ನಿಟ್ಟಿನಲ್ಲಿ ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅರಿವು ಅತಿ ಅಗತ್ಯ. ಕೌಶಲ್ಯದ ಜೊತೆಗೆ ನಿರಂತರ ಕಾರ್ಯಕ್ಷಮತೆ ಇದ್ದಾಗ ಯಶಸ್ಸು ಸಾಧಿಸಲು ಸಾಧ್ಯ ಎಂದರು. ಸಿ.ಎ.

ಜ್ಞಾನಸುಧಾ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ Read More »

ಡಿ. 23 : ಜ್ಞಾನಸುಧಾದಲ್ಲಿ ಸಂಸ್ಥಾಪಕರ ದಿನಾಚರಣೆ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿ ಕಾರ್ಕಳ : ಅಜೆಕಾರ್ ಪದ್ಮ ಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಹಾಗೂ ಶ್ರೇಷ್ಠ ಗಣಿತಜ್ಞ ಶ್ರೀನಿವಾಸ್ ರಾಮಾನುಜನ್‌ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಡಿ. 23ರಂದು ಸಂಜೆ 5 ಗಂಟೆಗೆ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯಲಿದೆ. ಸನ್ಮಾನಕಾರ್ಯಕ್ರಮದಲ್ಲಿ ಜೆ.ಇ.ಇ. ಅಡ್ವಾನ್ಸ್ಡ್ ಮೂಲಕ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರವೇಶ ಗಳಿಸಿದ ಈರ್ವರು

ಡಿ. 23 : ಜ್ಞಾನಸುಧಾದಲ್ಲಿ ಸಂಸ್ಥಾಪಕರ ದಿನಾಚರಣೆ Read More »

error: Content is protected !!
Scroll to Top