siddaramayya

ಮೋದಿ ನಿಂದನೆ : ಸಿದ್ದರಾಮಯ್ಯ ವಿರುದ್ಧ ಇನ್ನೊಂದು ದೂರು

ಹಿಟ್ಲರ್‌, ಮುಸ್ಸೋಲಿನಿ ಎಂದು ಕರೆದಿರುವ ಸಿದ್ದರಾಮಯ್ಯ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸ್ಸೋಲಿನಿಗೆ ಹೋಲಿಸಿ ಅವಹೇಳನ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ. ಶಾಸಕ ಎಸ್.ಸುರೇಶ್ ಕುಮಾರ್ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ವಿವೇಕ್ ಎಸ್. ರೆಡ್ಡಿ ನೇತೃತ್ವದ ನಿಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅವರನ್ನು ಶನಿವಾರ […]

ಮೋದಿ ನಿಂದನೆ : ಸಿದ್ದರಾಮಯ್ಯ ವಿರುದ್ಧ ಇನ್ನೊಂದು ದೂರು Read More »

ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿ : 7 ಜನರ ವಿರುದ್ಧ ಕೇಸ್‌

ಬೆಂಗಳೂರು: ಹಿಂದೂಗಳ ಅಗತ್ಯ ನಮಗೆ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದ್ದಾರೆ ಎಂದು ಸುಳ್ಳು ಸುದ್ದಿಯ ಪತ್ರಿಕಾ ತುಣುಕನ್ನು ಸೋಷಿಯಲ್‌ ಮೀಡಿಯಾದಲ್ಲಿ ಸೃಷ್ಟಿಸಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಏಳು ಜನರ ವಿರುದ್ಧ ದೂರು ದಾಖಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ , “ವಾರ್ತಾಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ

ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿ : 7 ಜನರ ವಿರುದ್ಧ ಕೇಸ್‌ Read More »

ಪಿಸ್ತೂಲು ಹಿಡಿದುಕೊಂಡು ಹಾರ ಹಾಕಿದ್ದು ಭದ್ರತಾ ಲೋಪವಲ್ಲ : ಡಿಕೆಶಿ ಸಮರ್ಥನೆ

ಬೆಂಗಳೂರು: ಪಿಸ್ತೂಲು ಹಿಡಿದುಕೊಂಡು ಮುಖ್ಯಮಂತ್ರಿಗೆ ಹಾರ ಹಾಕಿದ ಘಟನೆಯಲ್ಲಿ ಸೆಕ್ಯೂರಿಟಿ ವೈಫಲ್ಯ ಆಗಿಲ್ಲ. ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ.ನನ್ನ ಜೊತೆನೂ ಗನ್ ಮ್ಯಾನ್‌ಗಳು ಇದ್ದಾರೆ. ವಿರೋಧ ಪಕ್ಷಗಳಿಗೆ ಮಾತಾಡೋಕೆ ಒಳ್ಳೆಯ ವಿಷಯ ಇದ್ರೆ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೋಮವಾರ ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕಾಂಗ್ರೆಸ್‌ ಕಾರ್ಯಕರ್ತ ರಿಯಾಜ್ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ್ದಾರೆ. ರಿಯಾಜ್ ಬಳಿ ಗನ್

ಪಿಸ್ತೂಲು ಹಿಡಿದುಕೊಂಡು ಹಾರ ಹಾಕಿದ್ದು ಭದ್ರತಾ ಲೋಪವಲ್ಲ : ಡಿಕೆಶಿ ಸಮರ್ಥನೆ Read More »

ಬರ ಪರಿಹಾರ ಕುರಿತು ಸುಪ್ರೀಂ ಕೋರ್ಟ್‌ಗೆ ತಪ್ಪು ಮಾಹಿತಿ : ಸಿದ್ದರಾಮಯ್ಯ ಆರೋಪ

ಕೇಂದ್ರ ಸರಕಾರದ ಮೇಲೆ ಮತ್ತೆ ಗೂಬೆ ಕೂರಿಸಿದ ಮುಖ್ಯಮಂತ್ರಿ ಬೆಂಗಳೂರು: ಬರ ಪರಿಹಾರದ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಪ್ಪು ಮಾಹಿತಿ ನೀಡುವ ಮೂಲಕ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೂ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ.ಕರ್ನಾಟಕಕ್ಕೆ ಬರ ಪರಿಹಾರ ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು

ಬರ ಪರಿಹಾರ ಕುರಿತು ಸುಪ್ರೀಂ ಕೋರ್ಟ್‌ಗೆ ತಪ್ಪು ಮಾಹಿತಿ : ಸಿದ್ದರಾಮಯ್ಯ ಆರೋಪ Read More »

ಪಿಸ್ತೂಲು ಇಟ್ಟುಕೊಂಡೇ ಸಿದ್ದರಾಮಯ್ಯಗೆ ಹಾರ ಹಾಕಿದ ಅಭಿಮಾನಿ

ಗಂಭೀರ ಭದ್ರತಾ ಲೋಪವಾದ ಬಳಿಕ ಪೊಲೀಸರಿಂದ ತೀವ್ರ ವಿಚಾರಣೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಸೋಮವಾರ ಗಂಭೀರವಾದ ಭದ್ರತಾ ಲೋಪವಾಗಿದೆ. ಸೊಂಟದಲ್ಲಿ ಪಿಸ್ತೂಲು ಇಟ್ಟುಕೊಂಡಿದ್ದ ವ್ಯಕ್ತಿಯೋರ್ವ ತೆರೆದ ವಾಹನದಲ್ಲಿ ತೆರಳುತ್ತಿದ್ದ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ್ದಾನೆ.ಸಿದ್ದರಾಮಯ್ಯ ನಿನ್ನೆ ಬೆಂಗಳೂರು ದಕ್ಷಿಣದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಪ್ರಚಾರ ಮಾಡುತ್ತಿದ್ದ ವೇಳೆ ಈ ಅಚಾತುರ್ಯ ನಡೆದಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.ಸಿದ್ದರಾಮಯ್ಯ, ಸಚಿವ ರಾಮಲಿಂಗಾ ರೆಡ್ಡಿ ಮತ್ತು ಅಭ್ಯರ್ಥಿ ಸೌಮ್ಯಾರೆಡ್ಡಿ ನಿಂತಿದ್ದ ವಾಹನದ ಮೇಲೆ

ಪಿಸ್ತೂಲು ಇಟ್ಟುಕೊಂಡೇ ಸಿದ್ದರಾಮಯ್ಯಗೆ ಹಾರ ಹಾಕಿದ ಅಭಿಮಾನಿ Read More »

ತಿರುಗುಬಾಣವಾಯಿತೇ ಸಿದ್ದರಾಮಯ್ಯ ವರುಣಾ ಹೇಳಿಕೆ?

ಮುಖ್ಯಮಂತ್ರಿ ಕುರ್ಚಿಗೇ ಗ್ಯಾರಂಟಿಯಿಲ್ಲ ಎಂದು ಟೀಕೆ ಬೆಂಗಳೂರು: ತಾನು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಮಾತುಗಳು ನಾನಾ ರೀತಿಯ ಊಹಾಪೋಹಗಳಿಗೆ ಕಾರಣವಾಗಿ ಸಂಚಲನ ಸೃಷ್ಟಿಸಿದೆ.ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್ ಬೋಸ್‌ಗೆ ವರುಣ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಬೇಕು. ಅಷ್ಟು ಲೀಡ್‌ ಬಂದದ್ದೇ ಆದರೆ ಯಾರೂ ನನ್ನನ್ನು ಮುಟ್ಟಲು ಸಾಧ್ಯವಿಲ್ಲ. ನಾನು ಇರಬೇಕೋ, ಬೇಡ್ವೋ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ವರುಣ ಕ್ಷೇತ್ರದಲ್ಲಿ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿ

ತಿರುಗುಬಾಣವಾಯಿತೇ ಸಿದ್ದರಾಮಯ್ಯ ವರುಣಾ ಹೇಳಿಕೆ? Read More »

ಬರ ಪರಿಹಾರದ ಬಗ್ಗೆ ನ್ಯಾಯಾಲಯವೇ ತೀರ್ಮಾನಿಸಲಿ : ನಿರ್ಮಲಾ ಸೀತಾರಾಮನ್‌

ಅನುದಾನ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿದ್ದರಾಮಯ್ಯಗೆ ತಿರುಗೇಟು ಮೈಸೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ವಿಚಾರಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ನ್ಯಾಯಾಲಯಕ್ಕೆ ನಾವು ಅಗತ್ಯ ದಾಖಲೆಗಳನ್ನ ಒದಗಿಸುತ್ತೇವೆ. ಬರ ಪರಿಹಾರದ ಬಗ್ಗೆ ನ್ಯಾಯಾಲಯವೇ ತೀರ್ಮಾನಿಸಲಿ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವೆ, ರಾಜ್ಯ ಸರ್ಕಾರ 5,495 ಕೋಟಿ ವಿಶೇಷ ಅನುದಾನ ಕೊಡುವಂತೆ ಕೇಂದ್ರ

ಬರ ಪರಿಹಾರದ ಬಗ್ಗೆ ನ್ಯಾಯಾಲಯವೇ ತೀರ್ಮಾನಿಸಲಿ : ನಿರ್ಮಲಾ ಸೀತಾರಾಮನ್‌ Read More »

ಸದಾನಂದ ಗೌಡ ಕಾಂಗ್ರೆಸ್‌ ಸೇರ್ಪಡೆಗೆ ಸಿದ್ದರಾಮಯ್ಯ ತಡೆ?

ಚುನಾವಣೆ ಕಾಲದಲ್ಲಿ ಬರುವವರು ಬೇಡ ಎಂದು ಖಡಕ್‌ ಸೂಚನೆ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಕಾಂಗ್ರೆಸ್‌ ಸೇರ್ಪಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಣ್ಣೀರು ಎರಚಿದ್ದಾರೆ ಎನ್ನಲಾಗಿದೆ. ಬಿಜೆಪಿ ಅಸಮಾಧಾನಿತ ನಾಯಕರು ಚುನಾವಣೆಗಾಗುವಾಗ ಕಾಂಗ್ರೆಸ್‌ಗೆ ಬರುವುದು ಬೇಡ ಎಂದು ಸಿದ್ದರಾಮಯ್ಯ ಖಡಕ್‌ ಆಗಿ ಹೇಳಿದ್ದಾರೆ. ಹೀಗಾಗಿ ಸದಾನಂದ ಗೌಡ ಸಹಿತ ಬಿಜೆಪಿಯ ಹಲವು ಅತೃಪ್ತ ನಾಯಕರ ಕಾಂಗ್ರೆಸ್‌ ಸೇರುವ ಯೋಜನೆ ಠುಸ್‌ ಆಗಿದೆ ಎಂದು ಮೂಲವೊಂದು ತಿಳಿಸಿದೆ. ಮೈಸೂರು ಕ್ಷೇತ್ರದಿಂದ ಸದಾನಂದ ಗೌಡರನ್ನು ಕಾಂಗ್ರೆಸ್‌ ಕಣಕ್ಕಿಳಿಸುವ ವದಂತಿ ದಟ್ಟವಾಗಿ

ಸದಾನಂದ ಗೌಡ ಕಾಂಗ್ರೆಸ್‌ ಸೇರ್ಪಡೆಗೆ ಸಿದ್ದರಾಮಯ್ಯ ತಡೆ? Read More »

ಗ್ಯಾರಂಟಿ ಜೊತೆ ಬಾಂಬ್‌ ಫ್ರೀ : ವೀಡಿಯೊ ಮಾಡಿದವನ ವಿರುದ್ಧ ಕೇಸ್‌

ಸಿದ್ದರಾಮಯ್ಯ ನಿಂದನೆಗೆ ಕಾಂಗ್ರೆಸ್‌ನವರು ಗರಂ ಉಡುಪಿ: ಕಾಂಗ್ರೆಸ್‌ನ ಉಚಿತ ಗ್ಯಾರಂಟಿ ಯೋಜನೆಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ನಿಂದಿಸಿ ಅವಹೇಳನಕಾರಿ ಪದ ಬಳಕೆ ಮಾಡಿ ವೀಡಿಯೋ ವೈರಲ್ ಮಾಡಿದ ಉಡುಪಿ ಗರಡಿ ಮಜಲು ನಿವಾಸಿ ದಿವಾಕರ್ ಕೋಟ್ಯಾನ್ ಎಂಬವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿವಾಕರ್ ಕೋಟ್ಯಾನ್ ವೀಡಿಯೋದಲ್ಲಿ, ‘ಬಸ್ ಟಿಕೆಟ್ 2000ರೂ., ವಿದ್ಯುತ್ ಬಿಲ್ ಫ್ರೀ ಜೊತೆಗೆ ಈಗ ಹೊಸದಾಗಿ ಬಾಂಬ್ ಸ್ಫೋಟ ಫ್ರೀ ಕೂಡ ರಾಜ್ಯ

ಗ್ಯಾರಂಟಿ ಜೊತೆ ಬಾಂಬ್‌ ಫ್ರೀ : ವೀಡಿಯೊ ಮಾಡಿದವನ ವಿರುದ್ಧ ಕೇಸ್‌ Read More »

40 ಪರ್ಸೆಂಟ್‌ ಕಮಿಷನ್‌ ಆರೋಪ : ರಾಹುಲ್‌, ಸಿದ್ದರಾಮಯ್ಯ, ಡಿಕೆಶಿಗೆ ಕೋರ್ಟ್‌ ಸಮನ್ಸ್‌

ಬಿಜೆಪಿ ವಿರುದ್ಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಪ್ರಕರಣ ಬೆಂಗಳೂರು: ಬಿಜೆಪಿ ವಿರುದ್ಧ ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಿಟಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ತಮ್ಮ ಪಕ್ಷದ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ಸುಳ್ಳು ಜಾಹೀರಾತುಗಳನ್ನು ನೀಡಿ ಅಪಪ್ರಚಾರ ಮಾಡಿದ್ದಾರೆ. ಈ ಜಾಹೀರಾತಿನಿಂದ

40 ಪರ್ಸೆಂಟ್‌ ಕಮಿಷನ್‌ ಆರೋಪ : ರಾಹುಲ್‌, ಸಿದ್ದರಾಮಯ್ಯ, ಡಿಕೆಶಿಗೆ ಕೋರ್ಟ್‌ ಸಮನ್ಸ್‌ Read More »

error: Content is protected !!
Scroll to Top